ತೇರುಮಲ್ಲೇಶ್ವರಸ್ವಾಮಿ ದೇವಸ್ಥಾನದಲ್ಲಿ ಕಾಣಿಕೆ ಹಣ-ದೇವರ ಒಡವೆ ಕಳವು
Team Udayavani, Apr 14, 2022, 1:04 PM IST
ಹಿರಿಯೂರು: ‘ದಕ್ಷಿಣ ಕಾಶಿ’ ಖ್ಯಾತಿಯ ಶ್ರೀ ತೇರುಮಲ್ಲೇಶ್ವರಸ್ವಾಮಿ ದೇವಸ್ಥಾನದ ಮುಂಬಾಗಿಲಿನ ಬೀಗ ಒಡೆದ ದುಷ್ಕರ್ಮಿಗಳು ಕಾಣಿಕೆ ಹಣ ಹಾಗೂ ದೇವರ ಒಡವೆಗಳನ್ನು ಕಳವು ಮಾಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ದೇವರಿಗೆ ಹಾಕುವಂತಹ ಬೆಳ್ಳಿಯ ಮುಖ ಪದ್ಮ, ಈಶ್ವರಲಿಂಗದ ಮೇಲೆ ಇಡುವ ನಾಗಾಭರಣ, ದೇವರ ಅಲಂಕಾರಕ್ಕೆ ಉಪಯೋಗಿಸುವಂತಹ ಪ್ರಭಾವಳಿ ಸೇರಿದಂತೆ ಅಂದಾಜು 10 ಕೆಜಿ ಬೆಳ್ಳಿಯ ದೇವರ ಒಡೆವೆಗಳು, ಎರಡು ದೊಡ್ಡ ಹುಂಡಿಗಳನ್ನು ಒಡೆದು ಅಂದಾಜು 5 ಲಕ್ಷ ರೂ.ಗಿಂತ ಹೆಚ್ಚಿನ ಕಾಣಿಕೆ ಹಣವನ್ನು ಕಳ್ಳರು ದೋಚಿದ್ದಾರೆ. ಹುಂಡಿಯಲ್ಲಿದ್ದ ಚಿಲ್ಲರೆ ಹಣ, ನೂರು ಮತ್ತು ಐವತ್ತು ರೂ. ನೋಟುಗಳು ಸೇರಿದಂತೆ 18,500 ರೂ.ಗಳನ್ನು ಕಾಣಿಕೆ ಹುಂಡಿಗಳ ಬಳಿಯೇ ಬಿಟ್ಟು ಹೋಗಿದ್ದಾರೆ.
ಬುಧವಾರ ಬೆಳಿಗ್ಗೆ ದೇವಾಲಯಕ್ಕೆ ಬಂದ ಅರ್ಚಕ ವಿಶ್ವನಾಥ ಆಚಾರ್ ಅವರಿಗೆ ಕಳ್ಳತನ ನಡೆದಿರುವುದು ಗೊತ್ತಾಗಿದೆ. ತಕ್ಷಣ ಮುಜರಾಯಿ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಹಿರಿಯೂರು ನಗರ ಠಾಣೆ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ದೇವಾಲಯದಲ್ಲಿ ಸಿಸಿ ಕ್ಯಾಮೆರಾಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡದೇ ಇರುವುದೇ ಘಟನೆಗೆ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.