ಕಾಂಗ್ರೆಸ್‌ ಹೇಳಿದಂತೆ ಬಂಧಿಸಿದ್ರೆ ಜೈಲುಗಳೇ ಸಾಲಲ್ಲ

ತನಿಖೆ ಬಳಿಕವೇ ಸತ್ಯಾಂಶ ಬಯಲು: ಕೋಟಾ

Team Udayavani, Apr 17, 2022, 1:26 PM IST

kota-poojary

ಚಿತ್ರದುರ್ಗ: ಕಾಂಗ್ರೆಸ್‌ನವರು ಹೇಳಿದವರೆನ್ನೆಲ್ಲಾ ಬಂಧಿಸುವುದಾದರೆ ಕರ್ನಾಟಕದಲ್ಲಿರುವ ಜೈಲು ಸಾಕಾಗಲಿಕ್ಕಿಲ್ಲ. ಅವರು ಏನು ಹೇಳುತ್ತಾರೆ ಎನ್ನುವುದು ನಮಗೆ ಪ್ರಶ್ನೆಯಲ್ಲ ಎಂದು ಸಚಿವ ಕೋಟಾ ಶ್ರೀನಿವಾಸ್‌ ಪೂಜಾರಿ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇಂತಹ ಸ್ಥಿತಿಗಳು ಒಂದು ರೀತಿ ಆತಂಕದ ವಾತಾವರಣ ಹೌದು. ಆದರೆ, ಇದರಿಂದ ಮುಕ್ತರಾಗುತ್ತೇವೆ ಎಂದರು.

ಸಂತೋಷ್‌ ಪಾಟೀಲ್‌ ಹೇಳಿರುವಂತೆ ನಾಲ್ಕು ಕೋಟಿ ರೂ. ಕಾಮಗಾರಿಗೆ ಟೆಂಡರ್‌ ಆಗಿಲ್ಲ. ಮಂಜೂರಾತಿ ಯಾರು ಕೊಟ್ಟಿದ್ದಾರೆ ಗೊತ್ತಿಲ್ಲ, ಎಸ್ಟಿಮೇಟ್‌ ಯಾರು ಮಾಡಿದ್ದಾರೆ ಗೊತ್ತಿಲ್ಲ, ಕಾಮಗಾರಿ ಯಾರು ಮಾಡಿದ್ದಾರೆ ಗೊತ್ತಿಲ್ಲ, ನಮಗೆ ಹಣ ಕೊಡಲಿಲ್ಲ, ಹಾಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಹೇಳಿರುವುದರಿಂದ ಎಲ್ಲವೂ ತನಿಖೆಯಿಂದಲೇ ಹೊರಬರಬೇಕು ಎಂದು ಹೇಳಿದರು.

ಈಶ್ವರಪ್ಪ ನಮ್ಮ ಪಕ್ಷದ ಹಿರಿಯ ಮುಖಂಡರು. ಸಂಘಟನೆಯ ಸೂತ್ರದಡಿ ಬಂದವರು. ಆರೋಪ ಬಂದಾಗ ಸರ್ಕಾರಕ್ಕೆ ಮುಜುಗರ ಆಗಬಾರದು ಎನ್ನುವ ಕಾರಣಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಹೇಳಿದ್ದಾರೆ. ತನಿಖೆಯಾಗುತ್ತದೆ ಮತ್ತೆ ಅಧಿಕಾರ ಹಿಡಿಯುತ್ತೇನೆ ಎಂದೂ ಹೇಳಿದ್ದಾರೆ. ಅವರ ಭಾವನೆಯಲ್ಲಿ ಯಾವ ತಪ್ಪೂ ಕಾಣುತ್ತಿಲ್ಲ ಎಂದರು.

ಮುಜರಾಯಿ ದೇವಸ್ಥಾನಗಳ ವ್ಯಾಪ್ತಿಯಲ್ಲಿ ಅನ್ಯಮತೀಯರ ವ್ಯಾಪಾರ ನಿರ್ಬಂಧ ವಿಚಾರ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಈಗ ಇರುವ ಕಾಯ್ದೆ ನಿಯಮದಲ್ಲಿ ಹಿಂದೂ ದೇವಸ್ಥಾನಗಳ ಪರಿವ್ಯಾಪ್ತಿಯಲ್ಲಿರುವ ಯಾವುದೇ ವಾಣಿಜ್ಯ ಕಟ್ಟಡದಲ್ಲಿ ಅನ್ಯಮತೀಯರಿಗೆ ಅವಕಾಶ ಇಲ್ಲ, ಅದನ್ನು ಅನುಷ್ಠಾನ ಮಾಡುವುದು ಅನಿವಾರ್ಯ ಎಂದು ಕಾನೂನು ಮಂತ್ರಿಗಳು ಸದನದಲ್ಲಿ ಉತ್ತರ ಕೊಟ್ಟಿದ್ದಾರೆ. ಎಲ್ಲರೂ ಒಟ್ಟಾಗಿ ಬದುಕಬೇಕು ಎಂಬ ಯೋಚನೆ ಇದೆ. ಕಾನೂನು ಏನು ಹೇಳುತ್ತದೆ ಎನ್ನುವುದು ಒಂದು ಭಾಗ. ಈ ವಿಚಾರದಲ್ಲಿ ಮುಂದೆ ಏನು ಮಾಡಬೇಕು ಎನ್ನುವುದನ್ನು ಆಲೋಚನೆ ಮಾಡಲಾಗುವುದು ಎಂದರು.

ಸಾಂದರ್ಭಿಕವಾಗಿ ಕೆಲ ಸಂಘಟನೆಗಳು ಅವರವರ ಭಾವನೆಗಳನ್ನು ವ್ಯಕ್ತಪಡಿಸಿದ ಉದಾಹರಣೆಗಳಿವೆ. ಸರ್ಕಾರವಾಗಿ ಪರಿಗಣಿಸುವಾಗ ಕಾಯ್ದೆ- ಕಾನೂನು ಗಳನ್ನು ಗೌರವಿಸುವುದು ಸರ್ಕಾರದ ಜವಾಬ್ದಾರಿ. ಕಾಂಗ್ರೆಸ್‌ ಏನು ಹೇಳುತ್ತದೆ ಎನ್ನುವುದು ಪ್ರಶ್ನೆ ಅಲ್ಲ. ಕಾಯ್ದೆ ತಿದ್ದುಪಡಿ ಯಾರು ತಂದಿದ್ದಾರೆ, ಹೇಗೆ ತಂದಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿದೆ ಎಂದು ಮಾರ್ಮಿಕವಾಗಿ ಉತ್ತರಿಸಿದರು.

ಬದಲಾವಣೆ ಕಾಲಘಟ್ಟದಲ್ಲಿದೆ

ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಶೇ.96 ರಷ್ಟು ವಿದ್ಯಾರ್ಥಿವೇತನ ನೇರವಾಗಿ ಮೊದಲ ಬಾರಿಗೆ ವಿದ್ಯಾರ್ಥಿಗಳ ಖಾತೆಗೆ ಜಮೆಯಾಗಿದೆ. ಉಳಿದ ಶೇ.4ರಷ್ಟು ಆಧಾರ್‌ ಮತ್ತಿತರೆ ತಾಂತ್ರಿಕ ಸಮಸ್ಯೆಗಳಿದ್ದು, ನೇರವಾಗಿ ತಲುಪಿಸಲಾಗುವುದು. ಬಾಬು ಜಗಜೀವನ್‌ರಾಂ ಜಯಂತಿಯಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ 75 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ಯೋಜನೆಯಿಂದ ಪರಿಶಿಷ್ಟ ಜಾತಿ-ಪಂಗಡದ ಸುಮಾರು 40 ಲಕ್ಷ ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದರು.

ಡಾ| ಬಿ.ಆರ್‌. ಅಂಬೇಡ್ಕರ್‌ ಪ್ರಶಸ್ತಿ ವಿತರಣೆಯಲ್ಲಿ ಪಾರದರ್ಶಕತೆ ಕಾಯ್ದುಕೊಂಡು ಅತ್ಯಂತ ಸಾಮಾನ್ಯರನ್ನು ಗುರುತಿಸಲಾಗಿದೆ. ತಂಬೂರಿ ಹಿಡಿದು ಅಲೆಮಾರಿಗಳಾಗಿ ಬದುಕುವ ದಕ್ಕಲಿಗ ಸಮಾಜದ ವ್ಯಕ್ತಿಗೆ, ಮಾಜಿ ಸಚಿವೆ ಮೋಟಮ್ಮ ಅವರಂತಹ ನೂರಾರು ಮಹಿಳೆಯರನ್ನು ಹಾಸ್ಟೆಲ್‌ ವಾರ್ಡನ್‌ ಆಗಿದ್ದು ಸಲುಹಿದ 95 ವರ್ಷದ ಸರಸ್ವತಮ್ಮ ಎಂಬುವವರಿಗೆ, ಹರೇಕಳ ಹಾಜಬ್ಬರನ್ನು ಪರಿಚಯಿಸಿದ ಪತ್ರಕರ್ತ ಬಾಳೇಪುಣಿ ಅಂತವರನ್ನು ಹುಡುಕಿ ಪ್ರಶಸ್ತಿ ಕೊಡಲಾಗಿದೆ. ಇವರ ಹಿಂದೆ ಯಾವ ಲಾಬಿಯೂ ಕೆಲಸ ಮಾಡಿಲ್ಲ. ಇದರರ್ಥ ಸಮಾಜ ಕಲ್ಯಾಣ ಇಲಾಖೆಯಲ್ಲಿ ಬದಲಾವಣೆ ಆಗುತ್ತಿದೆ ಎಂದರು.

ಓಬವ್ವ ಆತ್ಮರಕ್ಷಣಾ ಕಲೆ ಮೂಲಕ ಬಾಲಕಿಯರಿಗೆ ಕರಾಟೆ ತರಬೇತಿ ನೀಡುವುದನ್ನು ಈ ವರ್ಷದಿಂದ ಆರನೇ ತರಗತಿಯವರಿಗೂ ಕಲಿಸಲಾಗುವುದು. ಈ ಮೂಲಕ ವಿದ್ಯಾರ್ಥಿನಿಯರಿಗೆ ಆತ್ಮರಕ್ಷಣೆ ಕಲೆಯನ್ನು ಕಲಿಸಲಾಗುತ್ತಿದೆ. ಪ್ರತಿ ಮೂರನೇ ಶನಿವಾರ ಇಲಾಖೆ ವ್ಯಾಪ್ತಿಯ ಎಲ್ಲ ಶಾಲೆ-ವಿದ್ಯಾರ್ಥಿ ನಿಲಯಗಳಲ್ಲಿ ಸ್ವತ್ಛತೆ ಮಾಡಲಾಗುತ್ತಿದೆ. ಬದಲಾವಣೆ ಕಾಲಘಟ್ಟದಲ್ಲಿ ಇಲಾಖೆಯಿದೆ. ವರ್ಗಾವಣೆಗೆ ಸಂಬಂಧಿಸಿದಂತೆ ಕೌನ್ಸೆಲಿಂಗ್‌ ಮಾಡುವ ಬಗ್ಗೆ ಆಲೋಚನೆ ಮಾಡಲಾಗುತ್ತಿದೆ ಎಂದರು.

ಟೆಂಡರ್‌ ಇಲ್ಲದೆ, ನಿಯಂತ್ರಣ ಇಲ್ಲದೆ 1 ರಿಂದ 2 ಕೋಟಿ ರೂ.ವರೆಗೆ ಖರೀದಿ ಮಾಡುವ 4ಜಿ ವ್ಯವಸ್ಥೆಯನ್ನು ಕ್ರಮೇಣ ರದ್ದು ಮಾಡಿದ್ದೇವೆ. ಇದನ್ನು 50 ಲಕ್ಷಕ್ಕೆ ಮಿತಿಗೊಳಿಸಿ ಟೆಂಡರ್‌ ಇಲ್ಲದೆ ಕೆಲಸ ಮಾಡುವುದು ಬೇಡ. ಅಗತ್ಯವಿದ್ದಲ್ಲಿ ವರ್ಷದಲ್ಲಿ ಒಂದೆರಡಕ್ಕೆ ಮಾತ್ರ ಸಮಿತಿ, ಸಚಿವರ ಗಮನಕ್ಕೆ ತಂದು ಖರೀದಿಸುವ ಬಗ್ಗೆ ನಿಯಮ ರೂಪಿಸಲಾಗಿದೆ ಎಂದು ವಿವರಿಸಿದರು.

ಉಡುಪಿ ಶಾಸಕ ರಘುಪತಿ ಭಟ್‌, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಮಮತಾ, ಸಹಾಯಕ ನಿರ್ದೇಶಕ ಪರಮೇಶ್ವರಪ್ಪ ಮತ್ತಿತರರಿದ್ದರು.

ಟಾಪ್ ನ್ಯೂಸ್

Mandya:ಹಲವು ರೋಗ ನಿವಾರಕ; ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

Mandya:ಹಲವು ರೋಗ ನಿವಾರಕ ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

ct rav

C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ

Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ

1-wwwe

NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ

BGT 2024: Aussie squad announced for remaining two matches: Aussies make three changes

BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್‌ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಹೊಸ ವರ್ಷಾಚರಣೆಗೆ ಡ್ರಗ್ಸ್‌ ಪಾರ್ಟಿ: ಪೊಲೀಸ್‌ ನಿಗಾ

ಹೊಸ ವರ್ಷಾಚರಣೆಗೆ ಡ್ರಗ್ಸ್‌ ಪಾರ್ಟಿ: ಪೊಲೀಸ್‌ ನಿಗಾ

Mandya:ಹಲವು ರೋಗ ನಿವಾರಕ; ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

Mandya:ಹಲವು ರೋಗ ನಿವಾರಕ ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

ct rav

C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ

Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.