ಮಹಿಳಾ ಮತದಾನ ಹೆಚ್ಚಳಕ್ಕೆ ಯತ್ನ

Team Udayavani, Apr 9, 2018, 5:02 PM IST

cta-1.jpg

ಚಿತ್ರದುರ್ಗ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸದೃಢ ಸರ್ಕಾರ ರಚನೆಗೆ ಎಲ್ಲಾ ಮತದಾರರು ಸಕ್ರಿಯವಾಗಿ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಿ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವಿ.ವಿ. ಜ್ಯೋತ್ಸ್ನಾ ಕರೆ ನೀಡಿದರು.

ನಗರದ ಜೋಗಿಮಟ್ಟಿ ರಸ್ತೆಯ ಕರುವಿನಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಭಾನುವಾರ ಮತದಾರರ ಮಿಂಚಿನ ನೋಂದಣಿ ಕಾರ್ಯಕ್ರಮದಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಯ ಅರ್ಜಿ ಸ್ವೀಕರಿಸಿ ಹೊಸ ಮತದಾರರಿಗೆ ಮತದಾರರ ಗುರುತಿನ ಚೀಟಿ ವಿತರಿಸಿ ಅವರು ಮಾತನಾಡಿದರು. 

ಜಿಲ್ಲೆಯಲ್ಲಿ ಹಿಂದಿನ ಚುನಾವಣೆಯಲ್ಲಿ ಸಾವಿರ ಪುರುಷ ಮತದಾರರಿಗೆ 954 ಮಹಿಳಾ ಮತದಾರರಿದ್ದಾರೆ. ಮಹಿಳೆಯರು ಕಡಿಮೆ ಮತ ಚಲಾಯಿಸಿರುವುದು ಕಂಡುಬಂದಿದೆ. ಅದನ್ನು ಮನಗಂಡು ಜಿಲ್ಲಾಡಳಿತ ಅರ್ಹ ಮಹಿಳಾ ಮತದಾರರ ನೋಂದಣಿಗೆ ಅಭಿಯಾನ ಕೈಗೊಂಡು 980 ಮಹಿಳಾ ಮತದಾರರನ್ನು ನೋಂದಾಯಿಸಿದೆ. ಇದುವರೆಗೆ ಶೇ. 80 ರಷ್ಟು ಪ್ರಗತಿ ಸಾ ಧಿಸಲಾಗಿದೆ ಎಂದರು. 

18 ವರ್ಷ ತುಂಬಿದ ಎಲ್ಲ ಯುವಕ-ಯವತಿಯರು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಇದೇ ತಿಂಗಳ 14 ರವರೆಗೆ ಕಾಲಾವಕಾಶವಿದೆ. ವಯಸ್ಸಿನ ದೃಢೀಕರಣ, ವಾಸಸ್ಥಳದ ದಾಖಲೆ, ಪಾಸ್‌ಫೋಟ್‌ ಅಳತೆಯ ಎರಡು ಭಾವಚಿತ್ರಗಳನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು. ಕುಟುಂಬದ ಸದಸ್ಯರು, ನೆರೆಹೊರೆಯವರು, ಸ್ನೇಹಿತರ ಹೆಸರು ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ ಹೆಸರು ನೋಂದಾಯಿಸಲು ತಿಳಿವಳಿಕೆ ನೀಡಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷ ಪಿ.ಎನ್‌ ರವೀಂದ್ರ ಮಾತನಾಡಿ, ಜಿಲ್ಲೆಯ ಎಲ್ಲ ಮತದಾನ ಕೇಂದ್ರಗಳಲ್ಲಿ ಮಿಂಚಿನ ನೋಂದಣಿ ಅಭಿಯಾನದಡಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು, ತಿದ್ದುಪಡಿಗೆ, ಮತದಾರರ ಪಟ್ಟಿಯಲ್ಲಿ ಹೆಸರು ಕೈಬಿಡಲು ಹಾಗೂ ವರ್ಗಾವಣೆಗೆ ಕ್ರಮ ಕೈಗೊಳ್ಳಲಾಗಿದೆ.

ಅರ್ಜಿ ನಮೂನೆಗಳನ್ನು ಭರ್ತಿ ಮಾಡಿ ಮಿಂಚಿನ ನೋಂದಣಿ ಕಾರ್ಯಕ್ರಮದಲ್ಲಿ ಮತಗಟ್ಟೆ ಅಧಿಕಾರಿಗಳಿಗೆ ನೀಡಬೇಕು. ಏ. 14 ರವರೆಗೆ ಆಯಾ ತಾಲೂಕಿನ ತಹಶೀಲ್ದಾರ್‌ ಕಚೇರಿಯಲ್ಲಿ ಚುನಾವಣಾ ಶಾಖೆಗೆ ನೀಡುವಂತೆ ಸೂಚಿಸಿದರು.

ಮೇ 12 ರಂದು ಮತದಾನ ನಡೆಯಲಿದ್ದು ಎಲ್ಲರೂ ಮತದಾನ ಮಾಡಿ ಪ್ರಜಾಪ್ರಭುತ್ವವನ್ನು ಬಲಪಡಿಸಬೇಕು. “ನಾನು ವೋಟ್‌ ಮಾಡ್ತಿನಿ ನೀವೂ ವೋಟ್‌ ಮಾಡಿ’ ಎಂದು ಜಾಗೃತಿ ಮೂಡಿಸಬೇಕು ಎಂದರು. ಉಪವಿಭಾಗಾಧಿಕಾರಿ ಜವರೇಗೌಡ ಮಾತನಾಡಿದರು. ತಹಶೀಲ್ದಾರ್‌ ಮೋಹನ್‌ಕುಮಾರ್‌, ನಗರದಸಭೆ ಪೌರಾಯುಕ್ತ ನಲವಡಿ, ಜಿಲ್ಲಾ ವಾರ್ತಾಧಿಕಾರಿ ಬಿ. ಧನಂಜಯಪ್ಪ ಇದ್ದರು. 

ಟಾಪ್ ನ್ಯೂಸ್

ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ಐವರು ವೈದ್ಯರು ಸ್ಥಳದಲ್ಲೇ ಮೃತ್ಯು

Tragedy: ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5 ವೈದ್ಯರು ಸ್ಥಳದಲ್ಲೇ ಮೃತ್ಯು

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

1-ddssas

Jammu; ವೈಷ್ಣೋದೇವಿ ರೋಪ್‌ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್

Naxal BIG

Maoist; 15 ಲಕ್ಷ ರೂ.ಇನಾಮು ಹೊಂದಿದ್ದ ಮಾವೋವಾದಿ ಕಮಾಂಡರ್ ಆಂತರಿಕ ಕಲಹದಲ್ಲಿ ಹ*ತ್ಯೆ

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

8-

Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ಐವರು ವೈದ್ಯರು ಸ್ಥಳದಲ್ಲೇ ಮೃತ್ಯು

Tragedy: ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5 ವೈದ್ಯರು ಸ್ಥಳದಲ್ಲೇ ಮೃತ್ಯು

11(1

Udupi: ಇಲ್ಲಿ ಹೊಂಡಗಳೇ ಸ್ಪೀಡ್‌ ಬ್ರೇಕರ್‌ಗಳು!

10-uv-fusion

Rainy Season: ಮೊಬೈಲ್‌ ಬಿಟ್ಟು ಬೇರೆ ಆಡೋಣವೇ? ಮಕ್ಕಳಿಗೆ ಹೀಗೊಂದು ಪ್ರಶ್ನೆ

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

1-ddssas

Jammu; ವೈಷ್ಣೋದೇವಿ ರೋಪ್‌ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.