Chitradurga; ರಾಜಕೀಯವೇ ಸಾಕೆನಿಸಿದೆ ಎಂದ ಕೇಂದ್ರ ಸಚಿವ ನಾರಾಯಣ ಸ್ವಾಮಿ!
Team Udayavani, Jan 8, 2024, 10:27 PM IST
ಚಿತ್ರದುರ್ಗ: ರಾಜಕಾರಣದಿಂದ ದೂರ ಉಳಿಯಬೇಕೆಂದಿದ್ದೇನೆ. ಭ್ರಷ್ಟ ರಾಜಕಾರಣದಲ್ಲಿ ಮುಂದುವರಿಯುವ ರಾಜಕಾರಣಿ ನಾನಲ್ಲ ಎಂದು ಕೆಲವು ದಿನಗಳ ಹಿಂದಷ್ಟೇ ಹೇಳಿದ್ದ ಕೇಂದ್ರ ಸಚಿವ ಎ. ನಾರಾಯಣ ಸ್ವಾಮಿ ಅವರು, ಈಗ ಮತ್ತೊಮ್ಮೆ ರಾಜಕೀಯದ ಬಗ್ಗೆ ನಿರಾಸಕ್ತಿ ವ್ಯಕ್ತಪಡಿಸಿದ್ದಾರೆ.
ಸೋಮವಾರ ನಡೆದ “ದಿಶಾ’ ಸಭೆಯಲ್ಲಿ ಅಧಿಕಾರಿಯೊಬ್ಬರ ಉತ್ತರ ಕೇಳಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ಇಂಥದ್ದನ್ನೆಲ್ಲ ನೋಡಿಯೇ ನನಗೆ ರಾಜಕೀಯದ ಬಗ್ಗೆ ನಿರಾಸಕ್ತಿ ಬಂದಿದೆ ಎಂದರು.
ಸಂಸದರ ಆದರ್ಶ ಗ್ರಾಮಗಳ ಕುರಿತು ಸಚಿವರು ಕೇಳಿದ ಪ್ರಶ್ನೆಗೆ ಲೋಕೋಪಯೋಗಿ ಎಂಜಿನಿಯರ್ ಸಮರ್ಪಕ ಮಾಹಿತಿ ನೀಡಲಿಲ್ಲ. ಆಗ ಸಭೆಗೆ ಸರಿಯಾದ ಮಾಹಿತಿ ತರಲು ಆಗದಿದ್ದರೆ ಇಲ್ಲಿ ನಿಮ್ಮ ಅಗತ್ಯವಾದರೂ ಏನು ಎಂದು ಪ್ರಶ್ನಿಸಿದರು.
ನಿಮ್ಮ ಈ ವರ್ತನೆ ಜಿಲ್ಲಾಡಳಿತ, ಜಿಲ್ಲಾ ಧಿಕಾರಿಗಳು, ಸಚಿವರು, ಸಂಸದರನ್ನು ಜನ ಬೆರಳಿಟ್ಟು ಮಾತನಾಡುವಂತಾಗುತ್ತದೆ. 2047ಕ್ಕೆ ಸ್ವಾವಲಂಬಿ ಮತ್ತು ಅಭಿವೃದ್ಧಿ ಹೊಂದಿದ ಭಾರತ ಆಗಬೇಕು ಎಂದು ಹೇಳುತ್ತಿದ್ದೇವೆ. ಆದರೆ ಇದು ಬರೀ ಪೇಪರ್‌ನಲ್ಲಿ ಮಾತ್ರ ಆಗಬಾರದು. ಇದಕ್ಕಾಗಿ ಕೆಲಸ ಮಾಡಬೇಕು ಎಂದು ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.