ಕಾಮಗಾರಿ ವಿಳಂಬಕ್ಕೆ ಕೇಂದ್ರ ಸಚಿವರು ಗರಂ
ನಿಗದಿತ ಸಮಯದಲ್ಲಿ ಕಾಮಗಾರಿಪೂರ್ಣಗೊಳಿಸದಿದ್ರೆ ಗುತ್ತಿಗೆದಾರ ಕಪ್ಪುಪಟ್ಟಿಗೆ: ನಾರಾಯಣಸ್ವಾಮಿ
Team Udayavani, Sep 10, 2021, 5:38 PM IST
ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಗೆ ತುಂಗಾ ನದಿಯಿಂದ ಭದ್ರಾ ಜಲಾಶಯಕ್ಕೆ ನೀರು ಹರಿಸುವ ಪ್ಯಾಕೇಜ್ ಒಂದರ ಕಾಮಗಾರಿ ಮಾರ್ಚ್ ವೇಳೆಗೆ ಮುಗಿಯಬೇಕು. ಇಲ್ಲದಿದ್ದರೆ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ ಎಂದು ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಚಿತ್ರದುರ್ಗ, ಚಿಕ್ಕಮಗಳೂರು ಹಾಗೂ ತುಮಕೂರು ಜಿಲ್ಲೆ ವ್ಯಾಪ್ತಿಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ತುಂಗಾ ಮತ್ತು ಭದ್ರಾ ಜಲಾಶಯದ ನಡುವೆ ಕಾಲುವೆ ನಿರ್ಮಾಣಕ್ಕೆ 2008ರಲ್ಲಿ ಗುತ್ತಿಗೆದಾರರೊಂದಿಗೆ ಒಪ್ಪಂದವಾಗಿದೆ. ಕಾಡಿ®
ಮಧ್ಯೆ ಕಾಲುವೆ ಹಾದು ಹೋಗುವುದರಿಂದ ಅರಣ್ಯ ಇಲಾಖೆ 2016ರಲ್ಲಿ ಅನುಮತಿ ನೀಡಿದೆ. ಪರಿಸರ ಸೂಕ್ಷ್ಮ ವಿಚಾರವಾಗಿದ್ದರಿಂದ ವಿಳಂಬವಾಗಿದೆ ಎಂದು ಭದ್ರಾ ಮೇಲ್ದಂಡೆ ಮುಖ್ಯ ಎಂಜಿನಿಯರ್ ರಾಘವನ್ ಮಾಹಿತಿ ನೀಡಿದರು.
ಇದರಿಂದ ಸಿಟ್ಟಿಗೆದ್ದ ಸಚಿವರು, ವಿಳಂಬಕ್ಕೆ ಕಾರಣರಾದ ಗುತ್ತಿಗೆದಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸಭೆಗೆ ಗುತ್ತಿಗೆದಾರ ಹಾಜರಾಗದೆ
ವ್ಯವಸ್ಥಾಪಕರನ್ನು ಕಳುಹಿಸಿದ್ದನ್ನು ಕಂಡು ಕೆರಳಿದರಲ್ಲದೆ ಅವರನ್ನು ತಕ್ಷಣ ಹೊರಗೆ ಕಳುಹಿಸಿದರು. ಭದ್ರಾ ಜಲಾಶಯದಿಂದ ವೈ ಜಂಕ್ಷನ್
ವರೆಗಿನ ಕಾಮಗಾರಿ ಮುಗಿದೆ. ಇಲ್ಲಿಂದ ಮುಂದೆ ಚಿತ್ರದುರ್ಗ ಹಾಗೂ ದಾವಣಗೆರೆ ಶಾಖಾ ಕಾಲುವೆ ನಿರ್ಮಾಣದಲ್ಲಿ ತೊಡಕುಗಳಿರುವ ಬಗ್ಗೆ ಪ್ರತಿ ಪ್ಯಾಕೇಜ್‌ನ ಗುತ್ತಿಗೆದಾರರು, ಇಂಜಿನಿಯರ್‌ಗೆ ಬಗ್ಗೆಮಾಹಿತಿ ಪಡೆದ ಸಚಿವರು, ತುಮಕೂರು ಶಾಖಾ ಕಾಲುವೆಯಲ್ಲಿ ಅಮೃತ ಮಹಲ್ ಕಾವಲು ಹಾಗೂ ಅರಣ್ಯ ಭೂಮಿ ಕುರಿತಂತೆ ನ್ಯಾಯಾಲಯದಲ್ಲಿರುವ ಪ್ರಕರಣದ ಕುರಿತು ವಕೀಲರ ಜತೆ ಚರ್ಚಿಸಿ ಬಗೆಹರಿಸುವುದಾಗಿ ಭರವಸೆ ನೀಡಿದರು. ಚಿತ್ರದುರ್ಗ ಶಾಖಾ ಕಾಲುವೆಯಲ್ಲಿ ಕೆಲವೆಡೆ ಕಾಮಗಾರಿ ಬಾಕಿ ಇದ್ದು, ಮಾರ್ಚ್ ವೇಳೆಗೆ ಪೂರ್ಣಗೊಳಿಸಿ ಬಿಟ್ಟುಕೊಡುವುದಾಗಿ ಅಧಿಕಾರಿಗಳು ತಿಳಿಸಿದರು.
ಇದನ್ನೂ ಓದಿ:ಸೈಫ್-ಕರೀನಾ ಮನೆಯಲ್ಲಿ ಸಂಭ್ರಮದ ಗಣೇಶ ಚತುರ್ಥಿ| ಮಣ್ಣಿನ ಗಣಪ ತಯಾರಿಸಿದ ತೈಮೂರ್
ಅಬ್ಬಿನಹೊಳಲು ಗ್ರಾಮದಲ್ಲಿ ಕಾಮಗಾರಿ ಆರಂಭಿಸಿ:
ತರೀಕೆರೆ ತಾಲೂಕಿನ ಅಬ್ಬಿನಹೊಳಲು ಗ್ರಾಮದಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ವಿತರಿಸಿ ಕಾಮಗಾರಿ ಆರಂಭಿಸಿ. ಪರಿಹಾರ ಪಡೆಯದಿದ್ದರೆ ಅವರ ಹೆಸರಿಗೆ ಜಮಾ ಮಾಡಿ ಪೊಲೀಸರ ಸಹಕಾರ ಪಡೆದು ಕೆಲಸ ಮಾಡಿ. ಬರದಿಂದ ಬೇಯುತ್ತಿರುವ ರೈತರಿಗಾಗಿ ಈ ಕ್ರಮ ಅನಿವಾರ್ಯ. ಇದು ದಬ್ಟಾಳಿಕೆ ಅಲ್ಲ ಎಂದು ಸಚಿವರು ಸ್ಪಷ rಪಡಿಸಿದರು. ಭದ್ರತೆ ನೀಡುವಂತೆ ಇದೇ ವೇಳೆ ಸ್ಥಳದಲ್ಲಿದ್ದ ಚಿಕ್ಕಮಗಳೂರು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ತಿಳಿಸಿದರು.
ಚಿಕ್ಕಮಗಳೂರು ಎಎಸ್ಪಿ ರೂಪಾ ಮಾತನಾಡಿ, ಅಬ್ಬಿನಹೊಳಲು ಗ್ರಾಮದಲ್ಲಿ 41 ರೈತರ ಜಮೀನನ್ನು ಭೂಸ್ವಾಧೀನಕ್ಕೆ ಗುರುತಿಸಲಾಗಿದೆ. ಇದರಲ್ಲಿ ಆರು ರೈತರು ಮಾತ್ರ ಪರಿಹಾರ ಪಡೆದಿಲ್ಲ. ಉಪವಿಭಾಗಾ ಧಿಕಾರಿ ಸಭೆ ನಡೆಸಿ ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ ಎಂದರು.
3500 ಎಕರೆ ಭೂಸ್ವಾಧೀನ: ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕೆ 7,012 ಎಕರೆ ಭೂಮಿಯ ಅಗತ್ಯವಿದ್ದು, ಇದರಲ್ಲಿ 3,500 ಎಕರೆ ಭೂಸ್ವಾಧೀನವಾಗಿದೆ. ಇನ್ನೂ 3,512 ಎಕರೆ ಭೂಸ್ವಾಧೀನಕ್ಕೆ ಬಾಕಿ ಇದೆ ಎಂದು ಸಚಿವ ನಾರಾಯಣಸ್ವಾಮಿ ತಿಳಿಸಿದರು.
ಈವರೆಗೆ 4,800 ಕೋಟಿ ರೂ. ಅನುದಾನ ಖರ್ಚಾಗಿದೆ. ಯೋಜನೆ ಅನುಷ್ಠಾನಕ್ಕೆ ಹಣಕಾಸಿನ ತೊಂದರೆ ಇಲ್ಲ. ರಾಜ್ಯ ಸರ್ಕಾರ ಅನುದಾನವನ್ನು ಉದಾರವಾಗಿ ನೀಡಿದೆ. ಅರಣ್ಯ ಪ್ರದೇಶ ಹೊರತುಪಡಿಸಿಉಳಿದೆಡೆಭೂಸ್ವಾಧೀನಕ್ಕೆಯಾವುದೇ
ತೊಂದರೆ ಇಲ್ಲ ಎಂದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣ, ಉಪವಿಭಾಗಾಧಿ ಕಾರಿ ಆರ್. ಚಂದ್ರಯ್ಯ, ಭದ್ರಾ ಮೇಲ್ದಂಡೆ ಯೋಜನೆಯ ಭೂಸ್ವಾಧೀನ ಅಧಿಕಾರಿಗಳು, ಇಂಜಿನಿಯರ್‌ಗಳು ಹಾಗೂ ವಿವಿಧ ಇಲಾಖೆಗಳಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ರಾಷ್ಟ್ರೀಯಯೋಜನೆ
ಮಾನ್ಯತೆ ಸನ್ನಿಹಿತ
ಭದ್ರಾ ಮೇಲ್ದಂಡೆಗೆ ರಾಷ್ಟ್ರೀಯಯೋಜನೆಯ ಮಾನ್ಯತೆ ಸಿಗುವಕಾಲ ಸನ್ನಿಹಿತವಾಗಿದೆ. ಇದಕ್ಕಾಗಿಹೈಪವರ್‌ಕಮಿಟಿ ರಚನೆ ಆಗಿದೆ. ಅಂತಿಮ ವಾಗಿ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಲಿದೆ. ಮುಂಬರುವ ಜನವರಿ-ಫೆಬ್ರವರಿಯೊಳಗೆ ಭೂಸ್ವಾಧೀನ ಸಮಸ್ಯೆ ಬಗೆಹರಿಯಲಿದೆ. ಭದ್ರಾ ಮೇಲ್ದಂಡೆ ಯೋಜನೆಕಾಮಗಾರಿಗೆ ಈವರೆಗೆ 4800 ಕೋಟಿ ರೂ.ಖರ್ಚಾಗಿದ್ದು, ಭೂಸ್ವಾಧೀನಕ್ಕೆ ಅನುದಾನದ ಸಮಸ್ಯೆ ಇಲ್ಲ ಎಂದು ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Bantwal: ತುಂಬೆ ಹೆದ್ದಾರಿಯಲ್ಲಿ ನೀರು; ಪೆರಾಜೆ ರಿಕ್ಷಾ ನಿಲ್ದಾಣಕ್ಕೆ ಹಾನಿ
ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ
Subramanya: ಸಿದ್ಧಗೊಳ್ಳುತ್ತಿವೆ ಬೆತ್ತದ ತೇರು
Thirthahalli: ಡಿ.7 ರಂದು 18ನೇ ವರ್ಷದ ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ, ಜಾತ್ರ ಮಹೋತ್ಸವ
Gundlupete: ಟಿಪ್ಪರ್ ಹರಿದು ಕೇರಳ ಮೂಲದ ಬೈಕ್ ಸವಾರನ ಕಾಲು ನಜ್ಜುಗುಜ್ಜು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.