ಪರಿಹಾರ ಹಣ ಎಚ್ಚರಿಕೆಯಿಂದ ಬಳಸಿ: ಕವಿತಾ
Team Udayavani, Aug 30, 2020, 5:20 PM IST
ನಾಯಕನಹಟ್ಟಿ: ದೌರ್ಜನ್ಯ ಪರಿಹಾರದ ಹಣವನ್ನು ಎಚ್ಚರಿಕೆಯಿಂದ ಬಳಸಿಕೊಳ್ಳಿ ಎಂದು ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ಹೇಳಿದರು.
ದುಷ್ಕರ್ಮಿಗಳಿಂದ ಕೊಲೆಗೀಡಾದವರ ಕುಟುಂಬಗಳಿಗೆ ಶನಿವಾರ 12.37 ಲಕ್ಷ ರೂ.ಗಳ ಚೆಕ್ ವಿತರಿಸಿ ಅವರು ಮಾತನಾಡಿದರು. ಎಸ್ಸಿ-ಎಸ್ಟಿ ದೌರ್ಜನ್ಯ ಕಾಯ್ದೆಯಡಿ ಪ್ರತಿ ಕುಟುಂಬಕ್ಕೆ 8.25 ಲಕ್ಷ ರೂ. ನೀಡಲಾಗುವುದು. ಈ ಪ್ರಕರಣದಲ್ಲಿ ಮೂವರು ಹತ್ಯೆಗೀಡಾಗಿದ್ದಾರೆ. ಆದ್ದರಿಂದ ಮೂರು ಕುಟುಂಬಗಳಿಗೆ ಒಟ್ಟು 12,37,500 ರೂ.ಗಳನ್ನು ನೀಡಲಾಗುವುದು. ಪ್ರತಿ ಕುಟುಂಬಕ್ಕೆ ನೀಡಲಾಗುವ 8.25 ಲಕ್ಷ ರೂ.ಗಳಲ್ಲಿ ಠಾಣೆಯಲ್ಲಿ ಎಫ್‌ಐಆರ್ ತಕ್ಷಣ ಇದರಲ್ಲಿ ಅರ್ಧ ಹಣವನ್ನು ಮೊದಲ ಕಂತಿನಲ್ಲಿ ನೀಡಲಾಗುವುದು. ನ್ಯಾಯಾಲಯದಲ್ಲಿ ಪ್ರಕರಣ ರುಜುವಾತಾದ ನಂತರ ಉಳಿದ ಹಣವನ್ನು ನೀಡಲಾಗುವುದು. ದೌರ್ಜನ್ಯಕ್ಕೆ ಒಳಗಾದ ಕುಟುಂಬಗಳ ಖಾತೆಗೆ ನೇರವಾಗಿ ಹಣ ವರ್ಗಾವಣೆಯಾಗಲಿದ್ದು, ಈ ಬಗ್ಗೆ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಕ್ರಮ ಕೈಗೊಳ್ಳಲಿದ್ದಾರೆ ಎಂದರು.
ಒಮ್ಮೆಲೆ ದೊಡ್ಡ ಪ್ರಮಾಣದ ಹಣ ಬಂದ ತಕ್ಷಣ ಅಪಾರ ಪ್ರಮಾಣದ ಬಂಧು ಮಿತ್ರರು ಸೇರುತ್ತಾರೆ. ಹಣವನ್ನು ಬೇರೆಯವರಿಗೆ ನೀಡಿ ಕಳೆದುಕೊಳ್ಳಬಾರದು. ಹಣವನ್ನು ಪೋಲು ಮಾಡದೆ ದುಡಿಮೆಯ ಬಂಡವಾಳವನ್ನಾಗಿ ಮಾಡಿಕೊಳ್ಳಬೇಕು. ಇಲ್ಲವಾದರೆ ಬ್ಯಾಂಕ್‌ನಲ್ಲಿ ಸುರಕ್ಷಿತವಾಗಿಟ್ಟುಕೊಂಡು ಜೀವನ ನಡೆಸಬೇಕು ಎಂದು ಕಿವಿಮಾತು ಹೇಳಿದರು.
ಸರ್ಕಾರದಿಂದ ದೊರೆಯುವ ಇತರೆ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗುವುದು. ಇದೀಗ ಕಂದಾಯ ಇಲಾಖೆಯಿಂದ ಅಂತ್ಯಸಂಸ್ಕಾರಕ್ಕೆ ನೀಡುವ ತಲಾ 5 ಸಾವಿರ ರೂ. ಚೆಕ್ ನೀಡಲಾಗಿದೆ. ಕುಟುಂಬದಲ್ಲಿನ ಸದಸ್ಯರ ಸಾವಿನ ನೋವನ್ನು ಭರಿಸಲು ಸಾಧ್ಯವಿಲ್ಲ. ಇದು ಕುಟುಂಬದಲ್ಲಿ ಶಾಶ್ವತವಾಗಿ ಉಳಿಯುತ್ತದೆ. ಇದಕ್ಕೆ ಪರ್ಯಾಯವಾಗಿ ಯಾವುದನ್ನು ನೀಡಲು ಸಾಧ್ಯವಿಲ್ಲ. ಆದರೆ ಮಾನವೀಯ ದೃಷ್ಟಿಯಿಂದ ಸರ್ಕಾರ ನೆರವು ನೀಡುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಂಜುಳಾ ಮಾತನಾಡಿ, ಎಸ್ಸಿ-ಎಸ್ಟಿ ದೌರ್ಜನ್ಯ ಪ್ರಕರಣದಡಿಯಲ್ಲಿ ಕುಟುಂಬಕ್ಕೆ ಪರಿಹಾರ ನೀಡಲಾಗುತ್ತಿದ್ದು, ವಿದ್ಯಾವಂತರಿದ್ದಲ್ಲಿ ಸರ್ಕಾರಿ ನೌಕರಿ ನೀಡಲಾಗುವುದು. ಅವಿದ್ಯಾವಂತರಾಗಿದ್ದರೆ ಮನೆ ಹಾಗೂ ಜಮೀನು ಎರಡನ್ನೂ ಒದಗಿಸಲು ಅವಕಾಶವಿದೆ. ಇದೀಗ ಎರಡು ಕುಟುಂಬಗಳ ಬ್ಯಾಂಕ್ ಖಾತೆಗೆ ಪರಿಹಾರದ ಹಣವನ್ನು ವರ್ಗಾವಣೆ ಮಾಡಲಾಗುವುದು. ಕುಟುಂಬದ ಜನರು ಅವಿದ್ಯಾವಂತರಾಗಿದ್ದರೆ ನಾಲ್ಕು ಎಕರೆ ಸರ್ಕಾರಿ ಜಮೀನು ನೀಡಲಾಗುವುದು. ಸರ್ಕಾರಿ ಜಮೀನು ಲಭ್ಯವಿಲ್ಲವಾದರೆ ಖಾಸಗಿಯಿಂದ ಎರಡು ಎಕರೆ ಖರೀದಿಸಿ ಕೊಡಲಾಗುವುದು. ಮೂರು ಕುಟುಂಬಗಳಿಗೆ 4,700 ರೂ. ಪಿಂಚಣಿಯನ್ನೂ ನೀಡಲಾಗುವುದು.ಈ ಎಲ್ಲಾ ಸೌಲಭ್ಯ ಪಡೆಯಲು ಈ ಪ್ರಕರಣ ನ್ಯಾಯಾಲಯದಲ್ಲಿ ರುಜುವಾತಾಗಬೇಕು. ಮೃತಪಟ್ಟ ಇಬ್ಬರ ಕುಟುಂಬದವರು ಈಗಾಗಲೇ ಖಾತೆಯ ಸಂಖ್ಯೆಯನ್ನು ನೀಡಿದ್ದಾರೆ. ಉಳಿದ ಒಬ್ಬರು ಬ್ಯಾಂಕ್ ಖಾತೆ ನೀಡಬೇಕಾಗಿದೆ ಎಂದರು.
ತಹಶೀಲ್ದಾರ್ ಎಂ. ಮಲ್ಲಿಕಾರ್ಜುನ, ಪಪಂ ಸದಸ್ಯ ಎನ್. ಮಹಾಂತಣ್ಣ, ಬಸಣ್ಣ, ರಾಜಸ್ವ ನಿರೀಕ್ಷಕ ಚೇತನ್, ಗ್ರಾಮಲೆಕ್ಕಾಧಿಕಾರಿ ಉಮಾ, ಪಿ. ಶಿವಣ್ಣ, ಎಂ.ವೈ.ಟಿ. ಸ್ವಾಮಿ, ಕೌಸರ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ
Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು
Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.