ಪ್ರತಿಯೊಬ್ಬರು ತಪ್ಪದೇ ಲಸಿಕೆ ಹಾಕಿಸಿಕೊಳ್ಳಿ: ಶ್ರೀಧರ

Team Udayavani, May 29, 2021, 11:05 AM IST

Untitled-1

ಚಳ್ಳಕೆರೆ: ಜಿಲ್ಲಾಡಳಿತ ಆರೋಗ್ಯ ಇಲಾಖೆ ಸೇರಿದಂತೆ ಇತರೆ ಎಲ್ಲಾ ಇಲಾಖೆಗಳ ಸಹಕಾರದೊಂದಿಗೆ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ನಿರಂತರ ಜಾಗೃತಿಯೊಂದಿಗೆ ಲಸಿಕೆ ಹಾಕಲು ಮುಂದಾಗಿದೆ.

ನಗರಸಭೆ ವ್ಯಾಪ್ತಿಯ ಲಿಡ್ಕರ್‌ ಬಡಾವಣೆಯ ಸನಿಹದಲ್ಲಿ ಸುಮಾರು 80ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿದ್ದು, ಬಹುತೇಕ ಎಲ್ಲರೂ ಕೂಲಿ ಕಾರ್ಮಿಕರಾಗಿದ್ದಾರೆ. ಆದರೆ, ಇವರಿಗೆ ಕೋವಿಡ್ ಅಪಾಯದ ಬಗ್ಗೆ ಸುಳಿವಿದ್ದರೂ ಈ ಬಗ್ಗೆ ತಲೆಕಡಿಸಿಕೊಂಡಿರುವುದಿಲ್ಲ. ಲಸಿಕೆ ಹಾಕಲಿಸಿಕೊಳ್ಳಬೇಕು ಎಂದು ಅಂಗನವಾಡಿ ಕಾರ್ಯಕರ್ತೆಯರು ತಿಳಿಸಿದ್ದರು.

ಇವರು ವಿರೋಧಿಸಿದ್ದರು. ಈ ಬಗ್ಗೆ ಮಾಹಿತಿ ಪಡೆದು ಪೌರಾಯುಕ್ತ ಪಿ.ಪಾಲಯ್ಯ ಕೂಡಲೇ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿ ಡಿವೈಎಸ್ಪಿ ಮತ್ತು ಠಾಣಾ ಇನ್ಸ್‌ಪೆಕ್ಟರ್‌ರೊಂದಿಗೆ ಸ್ಥಳಕ್ಕೆ ತೆರಳಿ ಲಸಿಕೆ ಹಾಕಿಸುವಲ್ಲಿ ಯಶಸ್ವಿಯಾಗಿರುತ್ತಾರೆ. ಡಿವೈಎಸ್ಪಿ ಕೆ.ವಿ.ಶ್ರೀಧರ್‌ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಸರ್ಕಾರ ಜನರ ಆರೋಗ್ಯ ಸುಧಾರಣೆ ಬಗ್ಗೆ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದು, ನೀವು ನಿರ್ಲಕ್ಷ್ಯ ವಹಿಸುವ ಮೂಲಕ ಕೋವಿಡ್ ರೋಗದ ಭೀತಿಗೆ ಒಳಗಾಗುತ್ತೀರಿ. ನಿಮ್ಮ ರಕ್ಷಣೆಗಾಗಿ ಕಡ್ಡಾಯವಾಗಿ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು ಎಂದರು.

ಠಾಣಾ ಇನ್ಸ್‌ಪೆಕ್ಟರ್‌ ಜೆ.ಎಸ್‌ .ತಿಪ್ಪೇಸ್ವಾಮಿ, ನಗರಕ್ಕೆ ಕೇವಲ ಎರಡುಕಿ.ಮೀ ದೂರವಿರುವ ನಿಮಗೆ ಮಾಹಿತಿ ಇಲ್ಲವೆನ್ನುವುದು ಸರಿಯಲ್ಲ. ತಾಲೂಕಿನ ಗಡಿಭಾಗದ ಜನರು ಬಂದು ಲಸಿಕೆ ಪಡೆಯುತ್ತಿದ್ದಾರೆ. ನೀವು ಲಸಿಕೆ ಪಡೆಯದೆ ಸುಮ್ಮನಿದ್ದರೆ ಮುಂದಿನ ದಿನಗಳಲ್ಲಿ ಭಾರಿ ಪ್ರಮಾದ ಎದುರಿಸಬೇಕಾದೀತು ಎಂದು ಎಚ್ಚರಿಸಿದರಲ್ಲದೆ, ಮನೆ, ಮನೆಗೂ ತೆರಳಿ ಜನರನ್ನು ಕರೆತಂದು ಲಸಿಕೆ ಕೊಡಿಸಲಾಯಿತು. ಪೌರಾಯುಕ್ತ ಪಿ.ಪಾಲಯ್ಯ, ಲಸಿಕೆ ಪಡೆದರೆ ಅಪಾಯವಾದೀತು ಎಂಬ ಭಯದಿಂದ ಯಾರೂ ಸಹ ಲಸಿಕೆ ಪಡೆಯಲು ಮುಂದೆ ಬರುತ್ತಿಲ್ಲ. ನಮ್ಮ ಅಧಿ ಕಾರಿಗಳು ಮತ್ತು ಸಿಬ್ಬಂದಿ ಮಾಹಿತಿ ನೀಡಿದರೂ ಈ ಬಗ್ಗೆ ಯಾರೂ ಆಸಕ್ತಿ ತೋರಲಿಲ್ಲ. ಆದರೆ, ನಮಗೆ ನಿಮ್ಮೆಲ್ಲರ ಜೀವನದ ಬಗ್ಗೆ ಚಿಂತನೆಇದ್ದು, ಪೊಲೀಸರ ಸಹಾಯದಿಂದ ಲಸಿಕೆ ನೀಡುತ್ತಿದ್ದೇವೆ ಎಂದರು.

ನಗರಸಭಾ ಸದಸ್ಯ ಟಿ.ಮಲ್ಲಿಕಾರ್ಜುನ್‌, ಇಲ್ಲಿನ ಜನರಿಗೆ ಉಚಿತವಾಗಿ ರೇಷನ್‌ ವಿತರಣೆ ಮಾಡಿದರು. ಹೊನ್ನೂರುಸ್ವಾಮಿ, ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕ ಮಹಲಿಂಗಪ್ಪ, ಕಿರಿಯ ಆರೋಗ್ಯ ನಿರೀಕ್ಷಕರಾದ ದಾದಾಪೀರ್‌, ಗಣೇಶ್‌ ಮುಂತಾದವರು ಇದ್ದರು.

ಟಾಪ್ ನ್ಯೂಸ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.