ಕಾಂಗ್ರೆಸ್‌ನಿಂದ ಮತ ಬ್ಯಾಂಕ್ ರಾಜಕಾರಣ
ರಾಜಕೀಯ ಸ್ವಾರ್ಥಕ್ಕೆ ಒಂದೇ ಸಮುದಾಯದ ಓಲೈಕೆ: ಎಂಎಲ್ಸಿ ನವೀನ್
Team Udayavani, Apr 7, 2022, 4:15 PM IST
ಚಳ್ಳಕೆರೆ: ರಾಷ್ಟ್ರದಲ್ಲಿ ಸಂಸತ್ ಸದಸ್ಯರಿಂದ ಗ್ರಾಮ ಪಂಚಾಯಿತಿ ಸದಸ್ಯರ ತನಕ ಅತಿ ಹೆಚ್ಚಿನ ಸಂಖ್ಯೆಯ ಚುನಾಯಿತ ಪ್ರತಿನಿ ಧಿಗಳು ಭಾರತೀಯ ಜನತಾ ಪಕ್ಷದವರಾಗಿದ್ದಾರೆ. ಸಂವಿಧಾನ ಶಿಲ್ಪಿ ಡಾ| ಬಿ.ಆರ್. ಅಂಬೇಡ್ಕರ್‌ರವರ ಆಶಯಗಳನ್ನು ಈಡೇರಿಸುವಲ್ಲಿ ದೃಢ ಹೆಜ್ಜೆ ಇಟ್ಟಿದೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್ ಹೇಳಿದರು.
ಬಿಜೆಪಿ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಅವರು ಮಾತನಾಡಿದರು. ಹಲವಾರು ದಶಕಗಳಿಂದ ರಾಷ್ಟ್ರವನ್ನಾಳಿದ ಕಾಂಗ್ರೆಸ್ ಪಕ್ಷದ ನಾಯಕರು ಕೇವಲ ಮತ ಬ್ಯಾಂಕ್ ದೃಷ್ಟಿಯಿಂದ ಆಡಳಿತ ನಡೆಸಿದರು. ರಾಜ್ಯದಲ್ಲಿ ಇತ್ತೀಚಿನ ಹಲವಾರು ಬೆಳವಣಿಗೆಗಳ ಬಗ್ಗೆ ವಿರೋಧ ವ್ಯಕ್ತಪಡಿಸುವ ಮೂಲಕ ಒಂದು ಸಮುದಾಯವನ್ನು ಓಲೈಸುವ ಮೂಲಕ ರಾಜಕೀಯ ಶಕ್ತಿಯನ್ನು ಬೆಳೆಸಲು ಪ್ರಯತ್ನಿಸುತ್ತಿದ್ದಾರೆ. ಬಹುಸಂಖ್ಯಾತ ಹಿಂದೂಗಳ ಭಾವನೆ ಬಗ್ಗೆ ಅವರಿಗೆ ಗೌರವವಿಲ್ಲ ಎಂದರು.
ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಇಂದುಮತಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಹಿಳಾ ಸಮುದಾಯಕ್ಕೆ ಅನೇಕ ಯೋಜನೆಗಳ ಮೂಲಕ ನೆರವು ನೀಡುತ್ತಿದೆ. ಮಹಿಳೆಯ ಮೇಲೆ ಆಗುವ ದೌರ್ಜನ್ಯಗಳನ್ನು ನಿಯಂತ್ರಿಸಲು ಪರಿಣಾಮಕಾರಿ ಕ್ರಮ ಕೈಗೊಂಡಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಹಿಳೆಯರ ಮೇಲೆ ದೌರ್ಜನ್ಯವೆಸಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಬಿಜೆಪಿ ಆಡಳಿತದಲ್ಲಿ ಮಹಿಳೆ ಸುಭಿಕ್ಷಳು ಎಂದು ಬಣ್ಣಿಸಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೆ.ಪಿ. ಜಯಪಾಲಯ್ಯ, ಜಿಲ್ಲಾ ಉಪಾಧ್ಯಕ್ಷ ಬಾಳೆಮಂಡಿ ರಾಮದಾಸ್, ಮಂಡಲಾಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್, ಕಾರ್ಯದರ್ಶಿ ಬಸವರಾಜು, ಶಶಿಧರ ರೆಡ್ಡಿ, ಉಪಾಧ್ಯಕ್ಷ ಟಿ.ಜೆ. ತಿಪ್ಪೇಸ್ವಾಮಿ, ಜಿಲ್ಲಾ ಎಸ್‌ಸಿ ಮೋರ್ಚಾ ಅಧ್ಯಕ್ಷ ಕರೀಕೆರೆ ತಿಪ್ಪೇಸ್ವಾಮಿ, ತಾಲೂಕು ರೈತ ಮೋರ್ಚಾ ಅಧ್ಯಕ್ಷ ನವೀನ್‌ಕುಮಾರ್ ನಾಯಕ, ಹಿರಿಯ ಸಹಕಾರಿ ಧುರೀಣ ಸಿ.ಬಿ. ಆದಿಭಾಸ್ಕರ ಶೆಟ್ಟಿ, ಫಾಲನೇತ್ರ, ಎಂ. ಇಂದ್ರೇಶ್, ಜಗದಾಂಬೆ, ಹೊಸಮನೆ ಮನೋಜ್, ವೀರೇಶ್, ನಗರ ಘಟಕದ ಅಧ್ಯಕ್ಷ ಈಶ್ವರ ನಾಯಕ, ಮಾತೃಶ್ರೀ ಎನ್. ಮಂಜುನಾಥ, ಜಿ.ಕೆ. ತಿಪ್ಪೇಶ್, ಬಡಕ್ಕ, ಕಾಂತರಾಜು, ಚಿದಾನಂದ, ಮೋಹನ್ ಮುಂತಾದವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.