ಬಿಜೆಪಿಯಿಂದ ಮತ ಕಳ್ಳತನ ಕೃತ್ಯ: ಡಿಕೆ ಶಿವಕುಮಾರ್
ಮನುವಾದಿಗಳಿಗೆ ಉತ್ತರ ಕೊಡಲು ಸಿದ್ಧತೆ ಮಾಡಿಕೊಳ್ಳಬೇಕು
Team Udayavani, Nov 29, 2022, 6:49 PM IST
ಚಿತ್ರದುರ್ಗ: ಹಿಂದುತ್ವದ ಹೆಸರಿನಲ್ಲಿ ರಾಜಕಾರಣ ಮಾಡುತ್ತಿರುವ ಬಿಜೆಪಿ, ಈಗ ಮತ ಕಳ್ಳತನಕ್ಕೆ ಕೈ ಹಾಕಿದೆ. ಮುಸಲ್ಮಾನರ ಮತಗಳನ್ನು ಮತಪಟ್ಟಿಯಿಂದ ಡಿಲೀಟ್ ಮಾಡಿಸುವ ಕೆಲಸ ಮಾಡುತ್ತಿರುವುದರ ವಿರುದ್ಧ ಕಾರ್ಯಕರ್ತರು, ಮುಖಂಡರು ಎಚ್ಚೆತ್ತು ಪ್ರತಿ ಮನೆಗೆ ಹೋಗಿ ಮತದಾರರ ಪಟ್ಟಿ ಸರಿಪಡಿಸುವ ಕೆಲಸ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಕಾಂಗ್ರೆಸ್‌ನಿಂದ ಸೋಮವಾರ ಆಯೋಜಿಸಿದ್ದ “ಸಂವಿಧಾನ ಬಚಾವೋ’ ಪಾದಯಾತ್ರೆ ಸಮಾರೋಪದಲ್ಲಿ ನಗರದ ಹೊಳಲ್ಕೆರೆ ರಸ್ತೆಯ ಕನಕ ವೃತ್ತದಲ್ಲಿ ಆಯೋಜಿಸಿದ್ದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಇಡೀ ಭಾರತವನ್ನು ಒಗ್ಗೂಡಿಸಲು ಪಾದಯಾತ್ರೆ ಮಾಡುತ್ತಿದ್ದಾರೆ. ಆದರೆ ಬಿಜೆಪಿಯವರು ಹಿಂದುತ್ವ ಇಟ್ಟುಕೊಂಡು ಓಡಾಡುತ್ತಿದ್ದು, ನಾವು ಹಿಂದೂಗಳಲ್ಲವೇ ಎಂದು ಪ್ರಶ್ನಿಸಿದರು.
ಅಂಬೇಡ್ಕರ್ ದೇಶಕ್ಕೆ ಕೊಡುಗೆಯಾಗಿ ನೀಡಿರುವ ಸಂವಿಧಾನದಲ್ಲಿ ಎಲ್ಲಾ ಜಾತಿ-ಧರ್ಮದವರು ಸಮಾನವಾಗಿ ಬದುಕುವ ಹಕ್ಕಿದೆ. ಅಂತಹ ಪವಿತ್ರವಾದ ಸಂವಿಧಾನವನ್ನು ಉಳಿಸುವ ಕೆಲಸವನ್ನು ಕಾಂಗ್ರೆಸ್ ಕಾರ್ಯಕರ್ತರು ಮಾಡಬೇಕು. ಕಾಂಗ್ರೆಸ್ ಇತಿಹಾಸ, ದೇಶದ ಇತಿಹಾಸ. ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿ ಕಾರಕ್ಕೆ ಬಂದಾಗೆಲ್ಲಾ ಬಡವರಿಗೆ ಒಳ್ಳೆಯ ಯೋಜನೆಗಳನ್ನು ನೀಡಲಾಗಿದೆ.
ಬಂಗಾರಪ್ಪ ಮುಖ್ಯಮಂತ್ರಿಯಾಗಿದ್ದ ವೇಳೆ ದೇವಸ್ಥಾನಗಳಿಗೆ ಸುಣ್ಣ ಬಣ್ಣ ಬಳಿಯಲು, ಭಕ್ತ ಮತ್ತು ಭಗವಂತನನ್ನು ಹತ್ತಿರವಾಗಿಸಲು “ಆರಾಧನಾ’ ಎನ್ನುವ ಯೋಜನೆ ರೂಪಿಸಲಾಗಿತ್ತು. ಇಂದಿರಾ ಗಾಂಧಿ ಬಡವರಿಗೆ ಭೂಮಿ ಕೊಡಿಸಿದರು, ಬ್ಯಾಂಕುಗಳ ರಾಷ್ಟ್ರೀಕರಣ ಮಾಡಿದ್ದಾರೆ. ರಾಜೀವ್ ಗಾಂಧಿ ಮೊಬೈಲ್, ಟಿವಿ ವಿಚಾರದಲ್ಲಿ ಕ್ರಾಂತಿಯನ್ನೇ ಮಾಡಿದ್ದಾರೆ. ಮನಮೋಹನ್ ಸಿಂಗ್ ಅವ ಧಿಯಲ್ಲಿ ದೇಶಕ್ಕೆ ಆಹಾರ ಭದ್ರತಾ ಕಾಯ್ದೆ, ನರೇಗಾದಂತಹ ಯೋಜನೆ ರೂಪಿಸಿ ಜನರಿಗೆ ಉದ್ಯೋಗ ನೀಡಿದ್ದಾರೆ. ಬಿಜೆಪಿ ಇಂತಹ ಒಂದಾದರೂ ಯೋಜನೆ ಕೊಟ್ಟಿದೆಯಾ? ಚಿತ್ರದುರ್ಗ ಜಿಲ್ಲೆಯಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷ ಆರಕ್ಕೆ ಆರೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದರು. ಎಐಸಿಸಿ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ರಾಜೇಶ್ ನಿಲೋಟಿ ಮಾತನಾಡಿ, ಕಾಂಗ್ರೆಸ್ ಸಂವಿಧಾನವನ್ನು ಉಳಿಸುವ ಕೆಲಸ ಮಾಡುತ್ತಿದೆ.
ಆದರೆ ಬಿಜೆಪಿ, ಆರೆಸ್ಸೆಸ್‌ನವರು ಸಂವಿಧಾನ ಮುಗಿಸಲು ಹೊರಟಿದ್ದಾರೆ. ಬಿಜೆಪಿ ವಿರುದ್ಧ ದೇಶದ ಜನರನ್ನು ಜಾಗೃತಗೊಳಿಸಲು, ಸಂವಿಧಾನ ಉಳಿಸಲು ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಪಾದಯಾತ್ರೆ ಮಾಡುತ್ತಿದ್ದಾರೆ. ಬಿಜೆಪಿಯ ಅಪಪ್ರಚಾರಗಳಿಗೆ ನಾವು ಹೆದರುವುದಿಲ್ಲ.ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಅ ಧಿಕಾರಕ್ಕೆ ತರಬೇಕು. ಈ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜತೆಗೆ ಇಡೀ ದೇಶದ ಕಾಂಗ್ರೆಸ್ ಕಾರ್ಯಕರ್ತರು ಇರುತ್ತಾರೆ ಎಂದರು.
ಬಿಜೆಪಿ ಮಂದಿರ, ಮಸೀದಿ, ಹಿಂದುತ್ವದ ಹೆಸರಿನಲ್ಲಿ ರಾಜಕಾರಣ ಮಾಡಿ ಜಾತಿ-ಧರ್ಮಗಳ ನಡುವೆ ಸಂಘರ್ಷ ಸೃಷ್ಟಿಸುತ್ತಿದೆ. ಈ ಚುನಾವಣೆಯಲ್ಲಿ ಮನುವಾದಿಗಳಿಗೆ ಉತ್ತರ ಕೊಡಲು ಸಿದ್ಧತೆ ಮಾಡಿಕೊಳ್ಳಬೇಕು. ಮನುವಾದಕ್ಕೆ ಪರ್ಯಾಯ ಅಂಬೇಡ್ಕರ್ ವಿಚಾರಗಳು ಮಾತ್ರ ಎಂದು ಪ್ರತಿಪಾದಿಸಿದರು.
ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು ಸಂವಿಧಾನದ ಪ್ರಸ್ತಾವನೆ ಓದಿದರು. ರಾಜ್ಯಸಭೆ ಮಾಜಿ ಸದಸ್ಯ ಎಚ್. ಹನುಮಂತಪ್ಪ, ಕೆಪಿಸಿಸಿ ಎಸ್‌ಸಿ ಘಟಕದ ಅಧ್ಯಕ್ಷ ಧರ್ಮಸೇನಾ, ಸಚಿನ್ ಮಿಗಾ, ಮಾಜಿ ಸಚಿವ ಎಚ್. ಆಂಜನೇಯ, ಮಾಜಿ ಸಂಸದ ಬಿ.ಎನ್. ಚಂದ್ರಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ. ತಾಜ್‌ಪೀರ್, ಕಾರ್ಯಾಧ್ಯಕ್ಷ ಹಾಲಸ್ವಾಮಿ, ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ, ಮಾಜಿ ಶಾಸಕರಾದ ಬಿ.ಜಿ. ಗೋವಿಂದಪ್ಪ, ಎ.ವಿ. ಉಮಾಪತಿ, ಎಸ್. ತಿಪ್ಪೇಸ್ವಾಮಿ, ಮಾಜಿ ಸಚಿವ ಡಿ.ಸುಧಾಕರ್, ಕೆಪಿಸಿಸಿ ಕಾರ್ಮಿಕ ವಿಭಾಗದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಡಾ| ಯೋಗೀಶ್‌ಬಾಬು, ಹನುಮಲಿ ಷಣ್ಮುಖಪ್ಪ ಮತ್ತಿತರರು ಇದ್ದರು.
ಬಿಜೆಪಿ ಕ್ಷಮೆಯಾಚನೆ ಯಾತ್ರೆ ಮಾಡಲಿ: ಸಲೀಂ ಮದಕರಿಪುರದಲ್ಲಿ “ಸಂವಿಧಾನ ಬಚಾವೋ’ ಪಾದಯಾತ್ರೆಗೆ ಚಾಲನೆ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಮಾತನಾಡಿ, ಬಿಜೆಪಿಯ ಭ್ರಷ್ಟ ಆಡಳಿತದಿಂದ ಜನ ರೋಸಿ ಹೋಗಿದ್ದಾರೆ. ಬೆಲೆ ಏರಿಕೆ, ನಿರುದ್ಯೋಗ, ಅತಿವೃಷ್ಟಿ ಮತ್ತಿತರ ಸಮಸ್ಯೆಗಳಿಂದ ಜನ ನೊಂದಿದ್ದಾರೆ. ರೈತರಿಗೆ ಸಹಾಯ ಮಾಡದ ಸರ್ಕಾರದ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿಗೆ ಮತದಾರರ ನೆನಪಾಗುತ್ತಿದೆ. ಜನ ಸಂಕಲ್ಪ ಯಾತ್ರೆ ಬದಲು ಕ್ಷಮೆಯಾಚನೆ ಯಾತ್ರೆ ಮಾಡಬೇಕಿದೆ.
ರಾಜ್ಯದಲ್ಲಿ ಜನ ಬದಲಾವಣೆ ಬಯಸುತ್ತಿದ್ದು, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಬಿಜೆಪಿ ಸಂವಿಧಾನ ಬದಲಾವಣೆ ಮಾಡುವ ಷಡ್ಯಂತ್ರ ರೂಪಿಸಿದೆ. ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಈ ಕುರಿತು ಬಹಿರಂಗ ಹೇಳಿಕೆ ನೀಡಿದ್ದಾರೆ. ಆದರೆ ಕಾಂಗ್ರೆಸ್ ಸಂವಿಧಾನ ಉಳಿಸಲು ಬದ್ಧವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ
BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್, ರಾಹುಲ್ ಬಳಿಕ ಮತ್ತೊಬ್ಬ ಬ್ಯಾಟರ್ ಗೆ ಗಾಯ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.