ಇನ್ನಾದರೂ ನೀಗಿತೇ ಹೊಸದುರ್ಗದ ಜಲ ಬರ?

ಕೊಳವೆಬಾವಿ ಅವಲಂಬನೆ ತಪ್ಪಿಸಿ ಶಾಶ್ವತ ನೀರು ಪೂರೈಕೆ ಉದ್ದೇಶ

Team Udayavani, Apr 11, 2022, 1:22 PM IST

hosa-durga

ಹೊಸದುರ್ಗ: ಕೊಳವೆಬಾವಿ ನೀರು ಸೇವನೆಯಿಂದ ಬೇಸತ್ತು ಹೋಗಿದ್ದ ಪಟ್ಟಣ ಹಾಗೂ ತಾಲೂಕಿನ ಜನರಿಗೆ ಕುಡಿಯುವ ನೀರು ಪೂರೈಕೆ ಯೋಜನೆ ಉದ್ದೇಶದಿಂದ ಜಾರಿಗೊಳಿಸಲಾಗಿರುವ ಬಹುಗ್ರಾಮ ಕುಡಿಯುವ ನೀರು ಯೋಜನೆ ವರದಾನವಾಗಿದೆ.

ಪಟ್ಟಣ ಮತ್ತು ತಾಲೂಕಿನ 346 ಜನವಸತಿಗಳಿಗೆ ಬಹುಗ್ರಾಮ ಯೋಜನೆ ಅಡಿ ಕುಡಿಯುವ ನೀರು ಸರಬರಾಜು ಮಾಡಲು ಉದ್ದೇಶಿಸಲಾಗಿದ್ದು, 480 ಕೋಟಿ ರೂ.ಗಳ ಮೊದಲ ಹಂತದ ಕಾಮಗಾರಿ ಪ್ರಗತಿಯಲ್ಲಿದೆ. ಹೊಸದುರ್ಗ ಪಟ್ಟಣಕ್ಕೆ ಪ್ರಸ್ತುತ ವೇದಾವತಿ ನೀರನ್ನು ಮೂಲವಾಗಿರಿಸಿಕೊಂಡು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಇಲಾಖೆ ವತಿಯಿಂದ ಕುಡಿಯುವ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಇದು ದೀರ್ಘ‌ಕಾಲಿಕವಲ್ಲದ ಜಲಮೂಲವಾಗಿದೆ. ಹಾಗಾಗಿ ಬೇಸಿಗೆಯಲ್ಲಿ ಕೊಳವೆ ಬಾವಿಗಳನ್ನು ಅವಲಂಬಿಸುವ ಅನಿವಾರ್ಯತೆ ಇದೆ. ಕೊಳವೆ ಬಾವಿ ಮೇಲಿನ ಅವಲಂಬನೆ ತಪ್ಪಿಸಿ ಕುಡಿಯುವ ನೀರು ಸರಬರಾಜು ಮಾಡುವ ಉದ್ದೇಶವನ್ನು ಈ ಯೋಜನೆ ಹೊಂದಿದೆ.

ಜನಗಣತಿ ಪ್ರಕಾರ ಹೊಸದುರ್ಗ ತಾಲೂಕಿನ ಜನಸಂಖ್ಯೆ 2.25 ಲಕ್ಷ ಆಗಿದೆ. 2050ರ ಸಾಲಿಗೆ 4 ಲಕ್ಷ ಜನಸಂಖ್ಯೆ ತಲುಪಬಹುದು ಎಂಬ ಅಂದಾಜಿನಂತೆ ಪ್ರತಿ ದಿನ ಪಟ್ಟಣದ ಜನರಿಗೆ ತಲಾ 135 ಲೀಟರ್‌ ನಂತರ ಹಾಗೂ ಗ್ರಾಮೀಣ ಜನರಿಗೆ ತಲಾ 85 ಲೀಟರ್‌ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವ ಗುರಿ ಹೊಂದಲಾಗಿದೆ. ಈ ನಿಟ್ಟಿನಲ್ಲಿ ಭದ್ರಾ ಜಲಾಶಯದಿಂದ 2014ರಲ್ಲಿ ಒಂದು ಟಿಎಂಸಿ ನೀರನ್ನು ಹಂಚಿಕೆ ಮಾಡಲಾಗಿದೆ. ಹೀಗಾಗಿ ತಾಲೂಕಿನ ಕುಡಿಯುವ ನೀರಿನ ಹಾಹಾಕಾರ ಒಂದಿಷ್ಟು ಕಡಿಮೆಯಾಗಿದೆ.

ಹೊಸದುರ್ಗ ಪಟ್ಟಣ ಹಾಗೂ 346 ಜನವಸತಿ ಪ್ರದೇಶಗಳಲ್ಲಿ ಕುಡಿಯುವ ನೀರು ಸರಬರಾಜು ಮಾಡಲು ಎರಡು ಹಂತದ ಯೋಜನೆ ಸಿದ್ಧಪಡಿಸಲಾಗಿದೆ. ಮೊದಲ ಹಂತದಲ್ಲಿ 146.13 ಕೋಟಿ ಮತ್ತು 58.86 ಕೋಟಿ ರೂ.ಗಳ ಯೋಜನೆ ತಯಾರಿಸಿ ಒಟ್ಟು 205 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಹೊಸದುರ್ಗ ಪಟ್ಟಣಕ್ಕೆ ನೀರು ಪೂರೈಕೆ ಮಾಡಲು ನಗರಾಭಿವೃದ್ಧಿ ಇಲಾಖೆ 52.30 ಕೋಟಿ ರೂ. ಅನುದಾನವನ್ನು ಆರ್‌ ಡಿಪಿಆರ್‌ ಇಲಾಖೆಗೆ ನೀಡಿದೆ. ನಾಲ್ಕಾರು ವರ್ಷಗಳ ಹಿಂದೆಯೇ ತಾಂತ್ರಿಕ ಮಂಜೂರಾತಿ ನೀಡಿ ನಾಲ್ಕಾರು ಬಾರಿ ಟೆಂಡರ್‌ ಕರೆದರೂ ಅರ್ಹ ಗುತ್ತಿಗೆದಾರರು ಭಾಗವಹಿಸಿಲ್ಲ. ಆದ್ದರಿಂದ ಮೊದಲ ಹಂತದ ಮೂಲ ಯೋಜನೆಗೆ ಧಕ್ಕೆಯಾಗದಂತೆ ಎರಡು ಭಾಗಗಳಾಗಿ ವಿಭಜಿಸಲಾಗಿದೆ.

ಹೊಸದುರ್ಗ ಪಟ್ಟಣದ ಕಸಬಾ ಹೋಬಳಿಯ 92 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮೊದಲ ಹಂತದ ಕಾಮಗಾರಿಯನ್ನು ಶ್ರೀ ಗೋಪಾಲ್‌ ಕೆಂಪಲ್ಲಿ ಇಂಜಿನಿಯರ್ ಕಂಟ್ರಾಕ್ಟರ್ ಪ್ರೈವೇಟ್‌ ಲಿಮಿಟೆಡ್‌ ಇವರಿಗೆ ಗುತ್ತಿಗೆ ನೀಡಲಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಈಗಾಗಲೇ ತರೀಕೆರೆ ತಾಲ್ಲೂಕಿನ 113 ಜನವಸತಿ ಪ್ರದೇಶಗಳಿಗೂ ಮೊದಲನೇ ಹಂತದ ಯೋಜನೆ ಅಡಿ ಕುಡಿಯುವ ನೀರು ಸರಬರಾಜು ಮಾಡಲು ಕಾಮಗಾರಿ ಕೈಗೊಂಡಿದ್ದು, ತಾಲೂಕಿನ ಅಹಮದ್‌ ನಗರದಿಂದ ಹೊಸ ದುರ್ಗವರೆಗಿನ ಪೈಪ್‌ಲೈನ್‌ ಕಾಮಗಾರಿ ಭರದಿಂದ ಸಾಗಿದೆ.

ಮೊದಲ ಹಂತದ 92 ಹಳ್ಳಿಗಳಿಗೂ ಪೈಪ್‌ಲೈನ್‌ ಕಾಮಗಾರಿ ಪೂರ್ಣಗೊಂಡಿದ್ದು, ಪಟ್ಟಣದ ಪ್ರಥಮದರ್ಜೆ ಕಾಲೇಜು ಹಿಂಭಾಗದಲ್ಲಿ 26 ಲಕ್ಷ ಲೀಟರ್‌ ಸಂಗ್ರಹದ ಮೇಲ್ಮಟ್ಟದ ಜಲಸಂಗ್ರಹಾಗಾರ ನಿರ್ಮಾಣವಾಗುತ್ತಿದೆ. ಅಹಮದ್‌ ನಗರದಲ್ಲಿ 2.50 ಲಕ್ಷ ಲೀಟರ್‌, ಕಬ್ಬಿನಕೆರೆ ಬಳಿ 3 ಲಕ್ಷ ಲೀಟರ್‌ ಸಂಗ್ರಹದ ಎರಡು ಜಲಸಂಗ್ರಹಾಗಾರ, ಸಿದ್ದಪ್ಪನಬೆಟ್ಟದ ಬಳಿ 3 ಲಕ್ಷ ಲೀಟರ್‌ ಸಂಗ್ರಹದ ಜಲಸಂಗ್ರಹಗಾರ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ.

ಎರಡನೇ ಹಂತದ ಕಾಮಗಾರಿ

145 ಕೋಟಿ ರೂ. ವೆಚ್ಚದ ಎರಡನೇ ಹಂತದ ಕುಡಿಯುವ ನೀರಿನ ಯೋಜನೆ ಅಡಿ ಇನ್ನುಳಿದ 255 ಜನವಸತಿ ಪ್ರದೇಶಗಳಿಗೆ ನೀರು ಸರಬರಾಜು ಮಾಡಲಾಗುತ್ತಿದೆ. ಮೊದಲ ಹಂತ ಪೂರ್ಣಗೊಂಡ ಬಳಿಕ ಎರಡನೇ ಹಂತದ ಕಾಮಗಾರಿ ಕೈಗೊಳ್ಳಲಾಗುವುದು ಎಂಬುದು ಅಧಿಕಾರಿಗಳ ಹೇಳಿಕೆ.

ಹೊಸದುರ್ಗ ತಾಲೂಕಿನಲ್ಲಿ ಜಲಜೀವನ್‌ ಮಿಷನ್‌ ಯೋಜನೆ ಅಡಿ ಅಮೃತ ಗ್ರಾಮ ಪಂಚಾಯಿತಿಗೆ ಆಯ್ಕೆಯಾಗಿರುವ ಹೆಬ್ಬಳ್ಳಿ, ಸಾಣೇಹಳ್ಳಿ, ದೇವಪುರ, ಗುಡ್ಡದನೇರಲಕೆರೆ ಗ್ರಾಮ ಪಂಚಾಯತಿಗಳಿಗೆ ನಳ ಸಂಪರ್ಕ ಕಲ್ಪಿಸಲು ಟೆಂಡರ್‌ ಕರೆಯಲಾಗಿದೆ. ಪ್ರಸನ್ನಕುಮಾರ್‌, ಎಂಜಿನಿಯರ್‌

ಭದ್ರಾ ಮೇಲ್ದಂಡೆ ಯೋಜನೆ ಅಡಿ ಕುಡಿಯುವ ನೀರು ಸರಬರಾಜಾದರೂ ವಿವಿ ಸಾಗರದ ಹಿನ್ನೀರಿನಿಂದಲೂ ತಾಲೂಕಿನ ಜನತೆಗೆ ಕುಡಿಯುವ ನೀರು ಒದಗಿಸುವ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಒತ್ತಾಯ ಮಾಡಲಾಗಿದೆ. ಗೂಳಿಹಟ್ಟಿ ಡಿ. ಶೇಖರ್‌, ಶಾಸಕರು

ಟಾಪ್ ನ್ಯೂಸ್

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-reeeee

Vijay Hazare Trophy Cricket: ಇಂದು ಕರ್ನಾಟಕಕ್ಕೆ ಪುದುಚೇರಿ ಎದುರಾಳಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.