ಶಿಕ್ಷಣವಿಲ್ಲದೆ ಅಭಿವೃದ್ಧಿ ಅಸಾಧ್ಯ
Team Udayavani, Sep 6, 2020, 6:26 PM IST
ಚಿತ್ರದುರ್ಗ: ಶಿಕ್ಷಣ, ಶಿಕ್ಷಕರಿಲ್ಲದೇ ಯಾವುದೇ ಕ್ಷೇತ್ರ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ. ದೇಶ ಅಭಿವೃದ್ಧಿ ಹೊಂದಬೇಕಾದರೆ ಅದರಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿರುತ್ತದೆ ಎಂದು ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಅಭಿಪ್ರಾಯಪಟ್ಟರು.
ನಗರದ ತರಾಸು ರಂಗಮಂದಿರದಲ್ಲಿ ಶನಿವಾರ ಜಿಲ್ಲಾಡಳಿತ, ಜಿಪಂ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ, ಡಾ| ಸರ್ಪಪಲ್ಲಿರಾಧಾಕೃಷ್ಣನ್ ಅವರ ಜನ್ಮದಿನೋತ್ಸವ ಹಾಗೂ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದೇಶಕ್ಕೆ ಉತ್ತಮ ನಾಗರಿಕರನ್ನು ರೂಪಿಸುವಲ್ಲಿ ಗುರುವಿನ ಪಾತ್ರ ಅನನ್ಯ. ಒಂದು ದೇಶ ಸುಸಂಸ್ಕೃತ ದೇಶವಾಗಿ ಅಭಿವೃದ್ಧಿ ಹೊಂದಲು ಶಿಕ್ಷಕರ ಕೊಡುಗೆ ಅಪಾರ ಎಂದರು. ಮಕ್ಕಳ ಭವಿಷ್ಯಕ್ಕೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಕೋವಿಡ್-19 ಸಾಂಕ್ರಾಮಿಕ ರೋಗದ ನಡುವೆಯೂ ಸರ್ಕಾರ ಅನೇಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಹಲವು ಕಾರ್ಯಕ್ರಮಗಳು, ಯೋಜನೆಗಳನ್ನು ಜಾರಿಗೆ ತರುವ ಮೂಲಕ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವುದು ಉತ್ತಮ ಬೆಳವಣಿಗೆ ಎಂದು ಹೇಳಿದರು. ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಬಾರ್ಡ್, ಡಿಎಂಎಫ್ ನಿಧಿ ಸೇರಿದಂತೆ ವಿವಿಧ ಅನುದಾನಗಳಿಂದ ಸರ್ಕಾರಿ ಶಾಲಾ ಕೊಠಡಿಗಳ ನಿರ್ಮಾಣಕ್ಕಾಗಿ 16 ಕೋಟಿ ರೂ. ಅನುದಾನ ನೀಡಲಾಗಿದೆ ಎಂದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶಬಾಬು ಮಾತನಾಡಿ, ಇಡೀ ಪ್ರಪಂಚದಲ್ಲಿಯೇ ಗುರುವಿಗೆ ಮಹತ್ತರ ಸ್ಥಾನ ಕೊಡಲಾಗಿದೆ. ಕೋವಿಡ್-19 ಸಂದರ್ಭದಲ್ಲಿಯೂ ಶಿಕ್ಷಕರು ಮನೆ ಮನೆ ಸಮೀಕ್ಷೆ, ಜನಗಣತಿ, ಮತಪಟ್ಟಿ ಪರಿಷ್ಕರಣೆ ಸೇರಿದಂತೆ ಹಲವಾರು ಕೆಲಸ ಕಾರ್ಯಗಳನ್ನು ಶಿಕ್ಷಕರು ಕೋವಿಡ್ ವಾರಿಯರ್ಸ್ ರೀತಿಯಲ್ಲಿ ಸೇವೆ ಸಲ್ಲಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಶಾಲೆಗಳನ್ನು ತೆರೆಯಲು ರಾಜ್ಯ ಸರ್ಕಾರ ಇನ್ನೂ ಅನುಮತಿ ನೀಡಿಲ್ಲ. ಆದಾಗ್ಯೂ ಕೆಲವು ಖಾಸಗಿ ಶಾಲೆಗಳಲ್ಲಿ ಆನ್‌ಲೈನ್ ಮೂಲಕ ಶಿಕ್ಷಣ ನೀಡಲಾಗುತ್ತಿದೆ. ಅದು ಎಷ್ಟರ ಮಟ್ಟಿಗೆ ಪರಿಣಾಮಕಾರಿಯಾಗುತ್ತದೆಯೋ ಗೊತ್ತಿಲ್ಲ. ಕೋವಿಡ್ ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷದ ಶೈಕ್ಷಣಿಕ ಚಟುವಟಿಕೆ ಕುಂಠಿತವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಸಾರ್ವಜನಿಕ ಶಿಕ್ಷಕ ಇಲಾಖೆ ಉಪನಿರ್ದೇಶಕ ಕೆ. ರವಿಶಂಕರ್ ರೆಡ್ಡಿ ಮಾತನಾಡಿ, ಶಿಕ್ಷಕರೆಂದರೆ ಕೇವಲ ವ್ಯಕ್ತಿಗಳಲ್ಲ. ಅಜ್ಞಾನದ ಅಂಧಕಾರ ಹೋಗಲಾಡಿಸಿ ಸುಜ್ಞಾನದ ಕಡೆ ಕೊಂಡೊಯ್ಯುವ ಶಕ್ತಿಗಳಾಗಿದ್ದಾರೆ ಎಂದರು.
ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ತ್ರಿವೇಣಿ ಶಿವಪ್ರಸಾದ್ ಗೌಡ, ಚಿತ್ರದುರ್ಗ ತಾಲೂಕು ಪಂಚಾಯಿತಿ ಉಪಾಧ್ಯಕ್ಷೆ ಸಿ. ಶಾಂತಮ್ಮ ರೇವಣಸಿದ್ದಪ್ಪ, ಸಿಟಿಇ ಸಹನಿರ್ದೇಶಕ ಎಚ್. ಮಂಜುನಾಥ್, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ. ಮಂಜುನಾಥ್, ಡಯಟ್ ಪ್ರಾಂಶುಪಾಲ ಎಸ್.ಕೆ.ಬಿ ಪ್ರಸಾದ್ ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.