ಹೆಣ್ಣು ಮಕ್ಕಳಿಗೆ ಬೇಕಿದೆ ಕಡ್ಡಾಯ ಶಿಕ್ಷಣ
Team Udayavani, Mar 9, 2021, 1:28 PM IST
ಚಿತ್ರದುರ್ಗ: ಹೆಣ್ಣು ಮಕ್ಕಳಿಗೆ ಶಿಕ್ಷಣದ ಅವಶ್ಯಕತೆ ಇದೆ. ಯಾರೂ ಕೂಡಾ ಶಿಕ್ಷಣವಂಚಿತರಾಗದಂತೆ ನೋಡಿಕೊಳ್ಳಬೇಕುಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶ್‌ಬಾಬು ಹೇಳಿದರು.
ತರಾಸು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾಮಕ್ಕಳ ರಕ್ಷಣಾ ಘಟಕದಿಂದ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಪ್ರತಿ ಹೆಣ್ಣು ಮಕ್ಕಳು ಶಿಕ್ಷಣ ಪಡೆದಾಗ ಮಾತ್ರ ತನ್ನ ಜೀವನ ತಾನು ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ. ಎಲ್ಲಾ ಕ್ಷೇತ್ರದಲ್ಲೂ ಮಹಿಳೆಯರು ಸಾಧನೆ ಮಾಡುವಲ್ಲಿಯಶಸ್ವಿಯಾಗುತ್ತಾರೆ. ಸಾವಿತ್ರಿ ಬಾಯಿಫುಲೆ ಹೋರಾಟ, ಶ್ರಮದ ಪ್ರತಿಫಲವೇಇಂದು ಹೆಣ್ಣು ಮಕ್ಕಳು ಶಿಕ್ಷಣ ಪಡೆಯಲು ಸಾಧ್ಯವಾಗುತ್ತಿದೆ ಎಂದರು.
ಇತ್ತಿಚೀನ ದಿನಗಳಲ್ಲಿ ಹೆಣ್ಣಿನ ಮೇಲೆ ಅತ್ಯಾಚಾರ, ಲೈಂಗಿಕ ಕಿರುಕುಳ, ಶೋಷಣೆ, ದೌರ್ಜನ್ಯ ನಡೆಯುತ್ತಿವೆ. ಇವುಗಳ ವಿರುದ್ಧ ಹೋರಾಡುವ ಮೂಲಕ ಆಕೆಗೆ ಎಲ್ಲವನ್ನೂ ಸಾಧಿಸುವ ಶಕ್ತಿ ಇದೆ ಎಂದು ತೋರಿಸಿಕೊಡುತ್ತಿದ್ದಾಳೆ. ಮಹಿಳೆ ಅಬಲೆ ಅಲ್ಲ ಸಬಲೆ ಎಂದು ಅಭಿಪ್ರಾಯಪಟ್ಟರು.
ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮಾತನಾಡಿ, ಹೆಣ್ಣು ಮಕ್ಕಳ ರಕ್ಷಣೆ ಮತ್ತು ಶಿಕ್ಷಣದ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯಸರ್ಕಾರಗಳು ಅನೇಕ ಯೋಜನೆಗಳನ್ನುಜಾರಿಗೆ ತಂದಿದೆ. ಪ್ರತಿಯೊಬ್ಬ ಪೋಷಕರುಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದರು.
ಪ್ರತಿಯೊಬ್ಬ ಮಹಿಳೆಯಲ್ಲಿ ಸಾಸುವ ಛಲ ಇರುತ್ತದೆ. ಅದನ್ನು ಶಿಕ್ಷಣದ ಮೂಲಕ ಸಾಕಾರಗೊಳಿಸಿಕೊಳ್ಳಬೇಕು. ಪ್ರತಿಯೊಬ್ಬ ಪುರುಷನು ಮಹಿಳೆಯರನ್ನು ಗೌರವಿಸಿದರೇ ಅದುವೇ ಸಮಾಜಕ್ಕೆ ನೀಡುವ ಕೊಡುಗೆಯಾಗುತ್ತದೆ ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ಮಾತನಾಡಿ, ಬಾಲ್ಯ ವಿವಾಹಕಾಯ್ದೆ ಪ್ರಕಾರ 18 ವರ್ಷಕ್ಕಿಂತ ಕಡಿಮೆ ಇರುವ ಹೆಣ್ಣು ಮಗುವಿಗೆ ಮದುವೆ ಮಾಡುವುದು ಮತ್ತು ಈ ವಿವಾಹದಲ್ಲಿ ಭಾಗಿಯಾಗುವ ಪ್ರತಿಯೊಬ್ಬರು ಕಾನೂನು ಪ್ರಕಾರ ಶಿಕ್ಷಾರ್ಹ ಅಪರಾಧಿಗಳು ಆಗುತ್ತಾರೆ. ಜಿಲ್ಲೆಯಲ್ಲಿ ಬಾಲ್ಯ ವಿವಾಹಗಳು ನಡೆಯದಂತೆ ಪ್ರತಿಯೊಬ್ಬರು ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ಹೇಳಿದರು.
ಜಿಪಂ ಸಿಇಒ ಡಾ.ಕೆ.ನಂದಿನಿ ದೇವಿ ಮಾತನಾಡಿ, ಹೆಣ್ಣು ಮಕ್ಕಳು ಪ್ರಶ್ನಿಸುವಸ್ವಭಾವ ಬೆಳೆಸಿಕೊಳ್ಳಬೇಕು. ಮನೆಯಲ್ಲಿ ಗಂಡು ಮಕ್ಕಳಿಗೆ ಒಂದು, ಹೆಣ್ಣು ಮಕ್ಕಳಿಗೆ ಒಂದು ರೀತಿಯಲ್ಲಿ ನೋಡುವ ಭಾವನೆ ಬಿಡಬೇಕು ಎಂದರು.
ಮಕ್ಕಳ ಕಲ್ಯಾಣ ಸಮಿತಿ ಸದಸ್ಯೆ ಹಾಗೂ ನ್ಯಾಯವಾದಿ ಡಿ.ಕೆ.ಶೀಲ ಉಪನ್ಯಾಸ ನೀಡಿದರು. ಕ್ರೀಡಾ, ನಾವೀನ್ಯತೆ, ಶೈಕ್ಷಣಿಕ, ಕಲೆ, ಸಂಗೀತ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಾಧನೆಗೈದ ಮಕ್ಕಳಿಗೆ ಸನ್ಮಾನಿಸಲಾಯಿತು.ಪೋಷಣ್ ಪಕ್ವಾಡ್ ಕಾರ್ಯಕ್ರಮಕ್ಕೆ ಚಾಲನೆನೀಡಿದರು. ಹಿರಿಯೂರು ತಾಪಂ ಅಧ್ಯಕ್ಷೆ ಲಕ್ಷ್ಮಿದೇವಮ್ಮ, ಜಿಪಂ ಸದಸ್ಯೆ ಚಂದ್ರಿಕಾಶ್ರೀನಿವಾಸ್, ಸ್ತ್ರೀ ಶಕ್ತಿ ಒಕ್ಕೂಟ ಅಧ್ಯಕ್ಷೆಕೊಲ್ಲಿಲಕ್ಷ್ಮೀ, ತಾಪಂ ಸದಸ್ಯೆ ಚಂದ್ರಕಲಾಸುರೇಶ್, ಚಿತ್ರ ಡಾನ್‌ಬಾಸ್ಕೊ ಸಂಸ್ಥೆಯ ಎಚ್ .ಸಿ. ಮಂಜುನಾಥ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಕೆ.ಎಸ್. ರಾಜಾನಾಯಕ್, ಜಿಪಂ ಮುಖ್ಯ ಯೋಜನಾಧಿಕಾರಿ ಗಾಯಿತ್ರಿ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.