ಕಾಂಗ್ರೆಸ್ ಅಧಿಕಾರಕ್ಕೆ ತರಲು ಶ್ರಮಿಸಿ
Team Udayavani, Jul 6, 2017, 11:30 AM IST
ಹಿರಿಯೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಭಾರೀ ಬಹುಮತದಿಂದ ಗೆಲ್ಲಿಸುವ ಜವಾಬ್ದಾರಿ ಪಕ್ಷದ ಕಾರ್ಯಕರ್ತರ ಮೇಲಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ದಿನೇಶ್
ಗುಂಡೂರಾವ್ ಹೇಳಿದರು.
ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ತೆರಳುವ ಮಾರ್ಗಮಧ್ಯೆ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು. ಇಲ್ಲಿನ ಶಾಸಕ ಡಿ. ಸುಧಾಕರ್ ಕ್ಷೇತ್ರದಲ್ಲಿ ಅಭಿಬವೃದ್ಧಿ ಕೆಲಸಗಳನ್ನು ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಈಗಾಗಲೇ ಎಲ್ಲ ತಾಲೂಕುಗಳಲ್ಲಿ ಬೂತ್ ಮಟ್ಟದ ಕಮಿಟಿ ರಚಿಸಲಾಗುತ್ತಿದ್ದು, ಹಿರಿಯೂರು ತಾಲೂಕಿನಲ್ಲೂ ಚಾಲನೆ ನೀಡಲಾಗಿದೆ. ತಾಲೂಕಿನ ಹಿರಿಯ ಕಾಂಗ್ರೆಸ್ ಮುಖಂಡರು, ಜಿಪಂ, ತಾಪಂ, ಗ್ರಾಪಂ , ನಗರಸಭೆ, ಎಪಿಎಂಸಿ ಸದಸ್ಯರು ಒಗ್ಗಟ್ಟಿನಿಂದ ಪಕ್ಷದ ಗೆಲುವಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ಜೆ. ರಮೇಶ್, ಕೆಪಿಸಿಸಿ ಸದಸ್ಯರಾದ ಎ.ಎಂ. ಅಮೃತೇಶ್ವರಸ್ವಾಮಿ, ತಾಪಂ ಅಧ್ಯಕ್ಷ ಚಂದ್ರಪ್ಪ, ಎಪಿಎಂಸಿ ಅಧ್ಯಕ್ಷ ಈರಲಿಂಗೇಗೌಡ, ಚಂದ್ರ ನಾಯ್ಕ, ಕಿಸಾನ್ ಘಟಕದ ಅಧ್ಯಕ್ಷ ಚೆಲುವರಾಜ್, ತಾಪಂ ಸದಸ್ಯ ಓಂಕಾರಪ್ಪ, ಮುಖಂಡರಾದ ದಿಂಡಾವರ ಶಿವಣ್ಣ, ಕಂದಿಕೆರೆ ಸುರೇಶ್‌ಬಾಬು,
ಅಶೋಕ್ ಗಿಡ್ಡೋಬನಹಳ್ಳಿ, ಯುವ ಕಾಂಗ್ರೆಸ್ ಅಧ್ಯಕ್ಷ ರಫಿಕ್ ಅಹಮ್ಮದ್, ಸೂರಗೊಂಡನಹಳ್ಳಿ ಕೃಷ್ಣಮೂರ್ತಿ, ಬಳಗಟ್ಟ ಶಿವಮೂರ್ತಿ, ತಿಮ್ಮಣ್ಣ, ಕೂಡ್ಲಹಳ್ಳಿ ಚಿದಾನಂದಪ್ಪ, ಅಬ್ಬಿನಹೊಳೆ ವೀರಭದ್ರಪ್ಪ, ಸಿದ್ದೇಶ್ ನಾಯ್ಕ, ಕೂನಿಕೆರೆ ಹಬೀಬ್, ಹನುಮಂತರಾಯ್ ಅಂಬಲಗೆರೆ, ಸಯೀದ್, ಪ್ರದೀಪ್, ಮರಡಿಹಳ್ಳಿ ರಂಗಪ್ಪ, ಶ್ರವಣಗೆರೆ ಚಂದ್ರಶೇಖರ್, ಮಸ್ಕಲ್‌ವುಟ್ಟಿ ಚೆಂದಿಲ್, ಆಲಮರದಹಟ್ಟಿ ಶಿವಣ್ಣ, ಅಜೀಮ್, ಕೋಡಿಹಳ್ಳಿ ಚಿದಾನಂದ, ಗಿರೀಶ್, ಜ್ಞಾನೇಶ್ ಕುಮಾರ್, ತಿಪ್ಪೇಸ್ವಾಮಿ ಕಂದಿಕೆರೆ, ಶಿವಣ್ಣ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.