ಕಾಂಗ್ರೆಸ್‌ನಿಂದ ಯುವ ಕ್ರಾಂತಿ ಯಾತ್ರೆ
Team Udayavani, Dec 18, 2018, 5:24 PM IST
ಚಿತ್ರದುರ್ಗ: ಪ್ರಧಾನಮಂತ್ರಿ ನರೇಂದ್ರ ಮೋದಿ ಸುಳ್ಳು ಭರವಸೆಗಳ ಮೂಲಕ ದೇಶದ ಜನರನ್ನು ವಂಚಿಸಿರುವುದನ್ನು
ತಿಳಿಸಲು ಕಾಂಗ್ರೆಸ್‌ನಿಂದ ಯುವ ಕ್ರಾಂತಿ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ
ಮಧು ಪಾಲೇಗೌಡ ಹೇಳಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ನರೇಂದ್ರ ಮೋದಿಯವರ ಸರ್ವಾಧಿಕಾರಿ ಧೋರಣೆಯಿಂದಾಗಿ ದೇಶದ ಆರ್ಥಿಕ ಪರಿಸ್ಥಿತಿ ದುರ್ಬಲಗೊಳ್ಳುತ್ತಿದೆ. ರೂಪಾಯಿ ಮೌಲ್ಯ ಕುಸಿದು ಜೀವನಾವಶ್ಯಕ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಪ್ರಧಾನಿಯವರು ವಿರೋಧ ಪಕ್ಷಗಳ
ಮುಖಂಡರನ್ನು ಗುರಿಯಾಗಿರಿಸಿ ಸಿಬಿಐ, ಇಡಿ ಮತ್ತಿತರ ಸಂಸ್ಥೆಗಳ ಮೂಲಕ ದಬ್ಟಾಳಿಕೆ, ದೌರ್ಜನ್ಯ ಎಸಗುತ್ತಿದ್ದಾರೆ. ನಿರುದ್ಯೋಗಿ ಯುವಕರಿಗೆ ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುವುದಾಗಿ ನಂಬಿಸಿ ವಂಚನೆ ಮಾಡಿದ್ದಾರೆ. ಇದನ್ನು ದೇಶದ ಜನತೆಗೆ ತಿಳಿಸುವುದಕ್ಕಾಗಿ ಕನ್ಯಾಕುಮಾರಿಯಿಂದ ಹಿಮಾಲಯಕ್ಕೆ ಹೊರಟಿರುವ ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ಕ್ರಾಂತಿ ಯಾತ್ರೆ ಡಿ. 20ಕ್ಕೆ ಬೆಂಗಳೂರಿಗೆ ಆಗಮಿಸಲಿದೆ. ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.
ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಡಿ. ಹಸನ್ ತಾಹೀರ್ ಮಾತನಾಡಿ, ಸಂವಿಧಾನವನ್ನು ಸುಟ್ಟು ಅಂಬೇಡ್ಕರ್ ವಿರುದ್ಧ ಘೋಷಣೆ ಕೂಗುವವರ ವಿರುದ್ಧ ಈಗಲಾದರೂ ಎಚ್ಚೆತ್ತುಕೊಳ್ಳಬೇಕಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಜವಾಬ್ದಾರಿ ಯುವ ಕಾಂಗ್ರೆಸ್ ಮೇಲಿದೆ. ಈಗ ಬಿಜೆಪಿಯಿಂದ ನಮ್ಮನ್ನು ರಕ್ಷಿಸಿಕೊಳ್ಳಲು ಹೋರಾಟ ಮಾಡಬೇಕಾದಂತ ಅಪಾಯಕಾರಿ ಪರಿಸ್ಥಿತಿ ಎದುರಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ರಫಿ, ಉಪಾಧ್ಯಕ್ಷ ರೆಹಮಾನ್, ಕಾರೇಹಳ್ಳಿ ಉಲ್ಲಾಸ್, ವಸೀಂ, ಆಜಾಂ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.
ಪ್ರಧಾನಿ ವಿದೇಶ ಸುತ್ತೋದಕ್ಕಷ್ಟೇ ಸೀಮಿತ ನರೇಂದ್ರ ಮೋದಿ ದೇಶದ ಪ್ರಧಾನಿಯಾದಾಗಿನಿಂದಲೂ ಬರಿ
ಭಾಷಣದಲ್ಲಿಯೇ ಪೊಳ್ಳು ಭರವಸೆಗಳನ್ನು ನೀಡುತ್ತಿದ್ದಾರೆಯೇ ವಿನಃ ಯಾವ ಭರವಸೆಯನ್ನೂ ಈಡೇರಿಸಿಲ್ಲ. ಸೂಟು ಬೂಟು ಧರಿಸಿ ವಿದೇಶ ಸುತ್ತುವುದಕ್ಕಾಗಿಯೇ ಪ್ರಧಾನಿಯಾಗಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೋಮುವಾದಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಪಕ್ಷವನ್ನು ಕೇಂದ್ರದಲ್ಲಿ ಅಧಿಕಾರ ತರುವಂತೆ ಜನತೆಯನ್ನು ಜಾಗೃತಗೊಳಿಸುವುದಕ್ಕಾಗಿ ಯುವ ಕ್ರಾಂತಿ ಯಾತ್ರೆಯನ್ನು ಆರಂಭಿಸಲಾಗಿದೆ. ಜಿಲ್ಲೆಯ ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಆರು ವಿಧಾನಸಭಾ ಕ್ಷೇತ್ರಗಳ ಯುವ ಕಾಂಗ್ರೆಸ್ ಅಧ್ಯಕ್ಷರು ಭಾಗವಹಿಸಬೇಕು ಎಂದು ಮಧು ಪಾಲೇಗೌಡ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.