ರೈತರಿಗೆ ಹೆಚ್ಚು ಪರಿಹಾರ ಕೊಡಿಸಲು ಯತ್ನ
ಭದ್ರಾ ಮೇಲ್ದಂಡೆ ಯೋಜನೆ ಭೂಸ್ವಾಧೀನ ಸಂಬಂಧ ಆತಂಕ ಅನಗತ್ಯ: ಶಾಸಕ ಜಿ.ಎಚ್.ತಿಪ್ಪಾರೆಡ್ಡಿ
Team Udayavani, May 3, 2019, 4:46 PM IST
ಚಿತ್ರದುರ್ಗ: ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಅವರು ರೆಡ್ಡಿ ಜನಸಂಘದ ಕಾರ್ಯಾಲಯದಲ್ಲಿ ರೈತರು ಹಾಗೂ ಭದ್ರಾ ಮೇಲ್ದಂಡೆ ಯೋಜನೆ ಅಧಿಕಾರಿಗಳ ಸಭೆ ನಡೆಸಿದರು.
ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಯಡಿ ಚಿತ್ರದುರ್ಗ ತಾಲೂಕಿನಲ್ಲಿ 11 ಮತ್ತು 12ನೇ ಪ್ಯಾಕೇಜ್ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ರೈತರು ಕಾಮಗಾರಿಗೆ ಅಡ್ಡಿ ಮಾಡಬಾರದು. ಕಾಮಗಾರಿ ಮುಂದುವರೆಸಲು ಸಹಕಾರ ನೀಡಬೇಕು ಎಂದು ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಮನವಿ ಮಾಡಿದರು.
ಇಲ್ಲಿನ ರೆಡ್ಡಿ ಜನಸಂಘದ ಕಾರ್ಯಾಲಯದಲ್ಲಿ ಗುರುವಾರ ಕರೆಯಲಾಗಿದ್ದ ರೈತರು ಹಾಗೂ ಭದ್ರಾ ಮೇಲ್ದಂಡೆ ಯೋಜನೆ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಚಿತ್ರದುರ್ಗಕ್ಕೆ ಹತ್ತಿರವಾಗಿರುವ ಗ್ರಾಮಗಳ ಜಮೀನುಗಳ ಮಾರುಕಟ್ಟೆ ಬೆಲೆ 30 ಲಕ್ಷ ರೂ.ಗಳಷ್ಟಿದೆ. ಇನ್ನು ಕೆಲವು ಕಡೆ 15 ಲಕ್ಷ ರೂ. ಇದೆ. ಆದರೆ ನೋಂದಣಿ ಮೌಲ್ಯ ಒಂದು ಲಕ್ಷದಿಂದ ಎರಡೂವರೆ ಲಕ್ಷದಷ್ಟಿದೆ. ಇದರಿಂದ ರೈತರಿಗೆ ಅನ್ಯಾಯವಾಗಲಿದೆ. ಹಾಗಾಗಿ ಸರ್ಕಾರದಿಂದ ಹೆಚ್ಚಿನ ಪರಿಹಾರ ಕೊಡಿಸುವಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ತಾಲೂಕಿನಲ್ಲಿ ಆರಂಭಗೊಂಡಿರುವುದರಿಂದ ರೈತರು ಸಂತಸಗೊಂಡಿದ್ದಾರೆ. ಆದರೆ ಎಲ್ಲೆಲ್ಲಿ ಭೂಮಿ ವಶಪಡಿಸಿಕೊಳ್ಳಲಾಗುತ್ತದೆ,
ಸ್ವಾಧೀನಪಡಿಸಿಕೊಂಡ ಜಮೀನಿಗೆ ಪರಿಹಾರ ಸಿಗುತ್ತದೋ ಇಲ್ಲವೋ ಎನ್ನುವ ಭಯ ಕೆಲವು ರೈತರಲ್ಲಿದೆ. ಈ ವಿಷಯದಲ್ಲಿ ಯಾರೂ ಗಾಬರಿಯಾಗುವುದು ಬೇಡ. ಚುನಾವಣೆ ನೀತಿಸಂಹಿತೆ ಮುಗಿದ ಮೇಲೆ ಜಿಲ್ಲಾಧಿಕಾರಿ, ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಇಂಜಿನಿಯರ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸಂಪೂರ್ಣ ಮಾಹಿತಿ ನೀಡುವಂತೆ ಸೂಚಿಸುವುದಾಗಿ ತಿಳಿಸಿದರು.
ರೈತರಿಗೆ ನ್ಯಾಯಬದ್ಧ ಪರಿಹಾರ ಸಿಗಲಿದೆ. ರೈತರಲ್ಲಿರುವ ಎಲ್ಲ ರೀತಿಯ ಆತಂಕ, ಗೊಂದಲ, ಅನುಮಾನಗಳನ್ನು ಅನುಷ್ಠಾನಾಧಿಕಾರಿಗಳು ನಿವಾರಣೆ ಮಾಡಲಿದ್ದಾರೆ. ಕಾಮಗಾರಿಯ ವೇಗ ಹೆಚ್ಚಿಸಬೇಕು. ನಿಗದಿತ ಅವಯೊಳಗೆ ಎಲ್ಲ ಕಾಮಗಾರಿಗಳು ಪೂರ್ಣಗೊಂಡು ಗರ ಬಡಿದಿರುವ ಜಿಲ್ಲೆಗೆ ಭದ್ರಾ ಯೋಜನೆಯಡಿ ನೀರು ಹರಿದರೆ ಸಾಕು. ಆಗ ಜನ-ಜಾನುವಾರುಗಳಿಗೆ ಕುಡಿಯಲು ನೀರು ಸಿಗಲಿದೆ. ಜೊತೆಗೆ ರೈತರ ಜಮೀನುಗಳಿಗೆ ನೀರು ಹರಿಯಲಿದೆ ಎಂದರು.
ಗೋನೂರು-ಕಲ್ಲೇನಹಳ್ಳಿ ನಡುವೆ ಆರಂಭಗೊಂಡಿರುವ ಪ್ಯಾಕೇಜ್ 11ರ ಕಾಮಗಾರಿ ಬೆಳಗಟ್ಟ, ಹಾಯ್ಕಲ್, ರಾಮಜೋಗಿಹಳ್ಳಿ, ದ್ಯಾಮವ್ವನಹಳ್ಳಿ, ಕಾಸವರಹಟ್ಟಿ ತನಕ ನಡೆಯಲಿದೆ. ಪ್ಯಾಕೇಜ್ 11ರ ಕಾಮಗಾರಿ ಐಮಂಗಲ ಸಬ್ ಡಿವಿಷನ್‌ಗೆ ಸೇರಿದ್ದಾಗಿದೆ. ಗೋನೂರು, ದೊಡ್ಡಸಿದ್ದವ್ವನಹಳ್ಳಿ, ಕುಂಚಿಗನಹಾಳ್, ದ್ಯಾಮವ್ವನಹಳ್ಳಿಯ ಪ್ಯಾಕೇಜ್ 12 ಬುರುಜನರೊಪ್ಪ ಸಬ್ ಡಿವಿಷನ್‌ಗೆ ಒಳಪಟ್ಟಿದೆ. ಕಾಮಗಾರಿ ಆದಷ್ಟು ಬೇಗ ಪೂರ್ಣಗೊಂಡು ತಾಲೂಕಿಗೆ ನೀರು ಹರಿದು ಬರಲಿ. ನೀತಿಸಂಹಿತೆ ಮುಗಿದ ಮೇಲೆ ಭೂಸ್ವಾಧೀನಕ್ಕಾಗಿ ನೋಟಿಫಿಕೇಷನ್ ಹೊರಡಿಸಲಾಗುತ್ತದೆ ಎಂದು ತಿಳಿಸಿದರು.
ಭೂಮಿ ವಶಪಡಿಸಿಕೊಳ್ಳುವ ಸಂಬಂಧ ನಮಗೆ ಇದುವರೆಗೂ ಯಾವುದೇ ನೋಟಿಸ್ ಬಂದಿಲ್ಲ. ಸ್ವಾಧೀನಪಡಿಸಿಕೊಳ್ಳುವ ಜಮೀನಿಗೆ ಪರಿಹಾರ ಸಿಗುತ್ತದೋ ಇಲ್ಲವೋ ಎನ್ನುವ ಭಯ ಕಾಡುತ್ತಿದೆ ಎಂದು ಕೆಲವು ರೈತರು ಶಾಸಕರಲ್ಲಿ ತಮ್ಮ ಅಳಲು ತೋಡಿಕೊಂಡರು. ಯಾವುದೇ ಕಾರಣಕ್ಕೂ ನಿಮಗೆ ಅನ್ಯಾಯವಾಗದಂತೆ ನೋಡಿಕೊಳ್ಳುವುದಾಗಿ ಶಾಸಕ ತಿಪ್ಪಾರೆಡ್ಡಿ ರೈತರಲ್ಲಿ ಆತ್ಮಸ್ಥೈರ್ಯ ಮೂಡಿಸಿದರು.
ಭದ್ರಾ ಮೇಲ್ದಂಡೆ ಯೋಜನೆಯ ಚಿತ್ರದುರ್ಗ ವಿಭಾಗ ನಂ-5ರ ಕಾರ್ಯಪಾಲಕ ಅಭಿಯಂತರ ಪರಮೇಶ್ವರ್, ಅಧಿಧೀನ ಇಂಜಿನಿಯರ್‌ಗಳು, ಗೋನೂರು, ಕಲ್ಲೇನಹಳ್ಳಿ, ಬೆಳಗಟ್ಟ, ಹಾಯ್ಕಲ್, ರಾಮಜೋಗಿಹಳ್ಳಿ, ದ್ಯಾಮವ್ವನಹಳ್ಳಿ, ಕಾಸವರಹಟ್ಟಿ, ಕುಂಚಿಗನಹಾಳ್ ರೈತರು ರೈತರು ಸಭೆಯಲ್ಲಿ ಭಾಗವಹಿಸಿದ್ದರು.
ಭದ್ರಾ ಮೇಲ್ದಂಡೆ ಯೋಜನೆ ತ್ವರಿತಗತಿಯಲ್ಲಿ ಪೂರ್ಣಗೊಂಡು ತಾಲೂಕಿಗೆ ನೀರು ಹರಿದು ಬರಲಿ ಎನ್ನುವ ಕಾರಣಕ್ಕಾಗಿ ರೈತರು ಮತ್ತು ನಾವು ಇಂಜಿನಿಯರ್ ಹಾಗೂ ಅಧಿಕಾರಿಗಳಿಗೆ ಸಹಕಾರ ನೀಡಲು ತೀರ್ಮಾನಿಸಿದ್ದೇವೆ. ಆದ್ದರಿಂದ ಶೀಘ್ರವಾಗಿ ಕೆಲಸ ಪೂರ್ಣಗೊಳಿಸಬೇಕು.
•ಜಿ.ಎಚ್. ತಿಪ್ಪಾರೆಡ್ಡಿ, ಶಾಸಕರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು
ಗುಜರಾತ್‌ಗೆ ತಲುಪಿಸಬೇಕಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಅಡಿಕೆಯ ವಂಚಿಸಿದ ಖದೀಮರ ಸೆರೆ
Bidar: ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ: ಐವರು ಮತ್ತೆ ಮೂರು ದಿನ ಸಿಐಡಿ ಕಸ್ಟಡಿಗೆ
Udupi: ಎಂಜಿಎಂ ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ
MUDA Case: ಸಿಎಂ ಸಿದ್ದು ಮುಡಾ ಹಗರಣ… ಜ.27ಕ್ಕೆ ಮುಂದೂಡಿದ ಧಾರವಾಡ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ
Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ
Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು
ಗುಜರಾತ್‌ಗೆ ತಲುಪಿಸಬೇಕಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಅಡಿಕೆಯ ವಂಚಿಸಿದ ಖದೀಮರ ಸೆರೆ
Los Angeles Wildfires: ಇನ್ನೂ 60 ಲಕ್ಷ ಜನರಿಗೆ ಸಂಕಷ್ಟ, ಸಾವಿನ ಸಂಖ್ಯೆ 25ಕ್ಕೇರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.