ಫೇಸ್‌ ರೀಡಿಂಗ್‌ ಹಾಜರಾತಿ ವ್ಯವಸ್ಥೆಗೆ ಚಿಂತನೆ

ಈ ತಿಂಗಳ 20ರ ವೇಳೆಗೆ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್‌ ವಿತರಣೆ: ಸಚಿವೆ ಶಶಿಕಲಾ ಜೊಲ್ಲೆ ಭರವಸೆ

Team Udayavani, Jan 6, 2020, 1:08 PM IST

6-Jnauary-11

ಚಿತ್ರದುರ್ಗ: ಅಂಗನವಾಡಿಗಳಲ್ಲಿ ಮಕ್ಕಳ ನಿಖರ ಹಾಜರಾತಿಗಾಗಿ ಫೇಸ್‌ ರೀಡಿಂಗ್‌ ಅಟೆಂಡೆನ್ಸ್‌ ವ್ಯವಸ್ಥೆ ಜಾರಿಗೊಳಿಸಲು ಚಿಂತನೆ ನಡೆದಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಜಿಪಂ ಸಭಾಂಗಣದಲ್ಲಿ ಭಾನುವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಹಾಗೂ ಆಹಾರ ನಾಗರಿಕರ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಅಂಗನವಾಡಿಗೆ ಬರುವ ಮಕ್ಕಳಿಗೆ ಬಯೋಮೆಟ್ರಿಕ್‌ ವ್ಯವಸ್ಥೆ ಜಾರಿಗೊಳಿಸಲು ಅವರ ಬೆರಳಿನ ಗುರುತು ರೀಡ್‌ ಆಗುವುದಿಲ್ಲ ಎನ್ನುವ ಕಾರಣಕ್ಕೆ ಫೇಸ್‌ ರೀಡಿಂಗ್‌ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು. ಜತೆಗೆ ಕೇಂದ್ರ ಸರ್ಕಾರ 2 ವರ್ಷದ
ಹಿಂದೆ ಜಾರಿಗೆ ತಂದಿರುವ ಪೋಷಣ್‌ ಅಭಿಯಾನವನ್ನು ಈಗ ಜಾರಿ ಮಾಡುತ್ತಿದ್ದು, ಯೋಜನೆಯಡಿ ಜನವರಿ 20ರ ವೇಳೆಗೆ ಎಲ್ಲ ಅಂಗನವಾಡಿ ಕಾರ್ಯಕರ್ತೆಯರಿಗೆ
ಸ್ಮಾರ್ಟ್‌ಫೋನ್‌ ನೀಡಲಾಗುವುದು. ಇದರಲ್ಲಿ ಮಕ್ಕಳ ಶಾರೀರಿಕ, ಬೌದ್ಧಿಕ ಬೆಳವಣಿಗೆ ಗುರುತಿಸುವ ಸಾಫ್ಟ್‌ವೇರ್‌ ಇದ್ದು, ಯಾರು ಎಲ್ಲಿಂದ ಬೇಕಾದರೂ ಪರಿಶೀಲನೆ ನಡೆಸಬಹುದು ಎಂದರು.

ಅಂಗನವಾಡಿಗೆ ಬರುವ ಮಕ್ಕಳು ಮೂರು ವರ್ಷ ಎಳೆಯರು. ಅವರ
ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಈ ನಿಟ್ಟಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಇರುವ ಹೆಚ್ಚುವರಿ ಹೊರೆಯನ್ನು ಕಡಿಮೆ ಮಾಡುವ ಉದ್ದೇಶವಿದೆ. ಇಲಾಖೆ ಕರ್ತವ್ಯ ಹೊರತು ಪಡಿಸಿ ಬೇರೆ ಬೇರೆ ಇಲಾಖೆಗಳ ಒತ್ತಡವಿದ್ದು, ಅಂತಹ ಒತ್ತಡವನ್ನು ಕಡಿಮೆ ಮಾಡುವ ಚಿಂತನೆ ಇದೆ ಎಂದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಅನುದಾನ ಪಡೆದ
ಅನೇಕ ಸ್ವಯಂಸೇವಾ ಸಂಸ್ಥೆಗಳು ಅಂಧಮಕ್ಕಳು, ಬುದ್ಧಿಮಾಂಧ್ಯ ಮಕ್ಕಳ ಶಾಲೆಗಳು, ಬಾಲಕ ಮತ್ತು ಬಾಲಕಿಯರ ಮಂದಿರಗಳು, ನಿರ್ಗತಿಕರ ಕುಟೀರಗಳನ್ನು ನಡೆಸುತ್ತಿವೆ.
ಸರ್ಕಾರದ ನಿಯಾಮವಳಿ ಪ್ರಕಾರ ಆ ಸಂಸ್ಥೆಗಳು ಬಯೋಮೆಟ್ರಿಕ್‌ ಮೂಲಕ ಹಾಜರಾತಿ ಕಳಿಸಬೇಕು. ಆದರೆ ಬಹಳಷ್ಟು ಸಂಸ್ಥೆಗಳು ಇದನ್ನು ಪಾಲಿಸುತ್ತಿಲ್ಲ. ಹಾಗಾಗಿ ಪ್ರಾಮಾಣಿಕ ಸೇವೆ ಸಲ್ಲಿಸುವ ಸಂಸ್ಥೆಗಳನ್ನು ಗುರುತಿಸಿ, ಇಲಾಖೆಯಿಂದ ಅನುದಾನ ಪಡೆದು ತಪ್ಪು ಮಾಡುತ್ತಿರುವವರಿಗೆ ಎಚ್ಚರಿಕೆ ನೀಡಬೇಕು. ತಪ್ಪಿತಸ್ಥ ಸಂಸ್ಥೆಗಳು ಕಂಡು
ಬಂದರೆ 15 ದಿನಗಳೊಗೆ ವರದಿ ಸಲ್ಲಿಸಬೇಕು. ಲಾಭ ಮಾಡಿಕೊಳ್ಳುವ ಸಂಸ್ಥೆಗಳನ್ನು ಮುಚ್ಚಿಸುವ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಆಹಾರ ಇಲಾಖೆಗೆ ಸಂಬಂಸಿದಂತೆ ಜಿಲ್ಲೆಯಲ್ಲಿ ಅನೇಕ ರೀತಿಯ ಸಮಸ್ಯೆಗಳು ನನ್ನ ಗಮನಕ್ಕೆ ಬಂದಿವೆ. ಗ್ರಾಹಕರಿಗೆ ಯಾವುದೇ ರೀತಿಯ ಅನ್ಯಾಯವಾಗಬಾರದು. ಹಣ
ಕೊಟ್ಟು ಪಡಿತರ ಪಡೆಯುತ್ತಿರುವ ದೂರುಗಳಿವೆ. ತಪ್ಪು ಕಂಡು ಬಂದಲ್ಲಿ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಶ್ರೀಮಂತರು ಬಿಪಿಎಲ್‌ ಕಾರ್ಡ್‌ ಹೊಂದಿದ್ದಾರೆ. ಈ ತಿಂಗಳ ಅಂತ್ಯದೊಳಗೆ ವಾಪಸ್‌ ಮಾಡದಿದ್ದರೆ ಪತ್ತೆ ಹಚ್ಚಿ ಇದುವರೆಗೆ ಪಡೆದಿರುವ ಪಡಿತರದ ಅಷ್ಟೂ ಹಣವನ್ನು ದಂಡದ
ರೂಪದಲ್ಲಿ ಕಟ್ಟಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಖಡಕ್‌ ಎಚ್ಚರಿಕೆ ನೀಡಿದರು.

ಸಭೆಗೆ ಗೈರುಹಾಜರಾಗಿ ಸಹಾಯಕ ಅ ಧಿಕಾರಿಯನ್ನು ಕಳಿಸಿದ್ದ ನಿರ್ಮಿತಿ
ಕೇಂದ್ರದ ಜಿಲ್ಲಾ ಮಟ್ಟದ ಅಧಿಕಾರಿ ಮೂಡಲಗಿರಿಯಪ್ಪ ಅವರಿಗೆ ನೋಟಿಸ್‌ ನೀಡುವಂತೆ ಜಿಪಂ ಸಿಇಒ ಸತ್ಯಭಾಮ ಅವರಿಗೆ ಸೂಚಿಸಿದರು. ಶಾಸಕರಾದ ಜಿ.ಎಚ್‌. ತಿಪ್ಪಾರೆಡ್ಡಿ, ಪೂರ್ಣಿಮಾ ಶ್ರೀನಿವಾಸ್‌, ಜಿಪಂ ಅಧ್ಯಕ್ಷೆ ವಿಶಾಲಾಕ್ಷಿ ನಟರಾಜ್‌, ಎಂಎಲ್ಸಿ
ಜಯಮ್ಮ ಬಾಲರಾಜ್‌, ಡಿಸಿ ವಿನೋತ್‌ ಪ್ರಿಯಾ, ಜಿಪಂ ಸಿಇಒ ಸಿ. ಸತ್ಯಭಾಮ ಭಾಗವಹಿಸಿದ್ದರು.

ಟಾಪ್ ನ್ಯೂಸ್

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

1-koo

Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

DK SHI NEW

DCM; ಸಂಪನ್ಮೂಲ ಕ್ರೋಡೀಕರಣ ಸಮಿತಿ ಜತೆ ಸಭೆ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.