ಶರಣರನ್ನು ಜಾತಿಗೆ ಸೀಮಿತಗೊಳಿಸದಿರಿ
•ಸರ್ವ ಸಮುದಾಯಗಳಿಗೆ ಹಡಪದ ಅಪ್ಪಣ್ಣ ವಚನ ಸ್ಫೂರ್ತಿಯಾಗಲಿ: ವಿಶಾಲಾಕ್ಷಿ
Team Udayavani, Jul 17, 2019, 11:30 AM IST
ಚಿತ್ರದುರ್ಗ: ಜಿಲ್ಲಾಧಿಕಾರಿ ಆರ್. ವಿನೋತ್ ಪ್ರಿಯಾ ಅವರು ಹಡಪದ ಅಪ್ಪಣ್ಣ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಚಿತ್ರದುರ್ಗ: ವೃತ್ತಿಯಲ್ಲಿ ಭೇದ ಎಣಿಸದೆ ಕಾಯಕ ಸಂಸ್ಕೃತಿಯನ್ನು ಎತ್ತಿ ಹಿಡಿದ ಹಡಪದ ಅಪ್ಪಣ್ಣನವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಿ.ಎಂ. ವಿಶಾಲಾಕ್ಷಿ ನಟರಾಜ್ ಕರೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಸಹಯೋಗದೊಂದಿಗೆ ಮಂಗಳವಾರ ಆಯೋಜಿಸಿದ್ದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾಯಕ ನಿಷ್ಠೆಯ ಮಹತ್ವ ಸಾರಿದ ಶಿವಶರಣ ಹಡಪದ ಅಪ್ಪಣ್ಣನವರು ಯಾವುದೇ ವೃತ್ತಿ ಕೀಳಲ್ಲ, ಎಲ್ಲ ವೃತ್ತಿಗೂ ಅದರದೇ ಆದ ಘನತೆ, ಬೆಲೆ ಇದೆ ಎಂದು ಕಾಯಕ ನಿಷ್ಠೆ ಸಾರಿದರು. ಅಂತಹ ಮಹಾ ಶರಣರನ್ನು ಯಾವುದೇ ಜಾತಿ, ಸಮಾಜಕ್ಕೆ ಸೀಮಿತಗೊಳಿಸುವುದು ಸರಿಯಲ್ಲ ಎಂದರು.
ಎಲ್ಲ ಸಮಾಜದವರಿಗೂ ಹಡಪದ ಅಪ್ಪಣ್ಣನವರ ವಚನಗಳು, ಮಾನವೀಯ ಮೌಲ್ಯಗಳು ಸ್ಫೂರ್ತಿಯಾಗಬೇಕು. ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪಕ್ಕೆ ಅಪ್ಪಣ್ಣನವರು ಆಧಾರಸ್ತಂಭವಾಗಿದ್ದರು. ಅನುಭವ ಮಂಟಪದ ಯಶಸ್ಸಿಗೆ ಶ್ರಮಿಸಿದರು. ಯಾರೂ ಕೂಡ ಯಾವುದೇ ವೃತ್ತಿಯ ಬಗ್ಗೆ ಕೀಳರಿಮೆ ಹೊಂದುವುದು ಬೇಡ. ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯವಾಗಿ ಸಂಘಟಿತರಾಗಬೇಕು ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಆರ್. ವಿನೋತ್ ಪ್ರಿಯಾ ಮಾತನಾಡಿ, ಮಹಾತ್ಮರು, ನಾಯಕರ ಜಯಂತಿ ಆಚರಿಸುತ್ತಿದ್ದೇವೆ ಎಂದರೆ ಆ ಮಹನೀಯರನ್ನು ನಾವು ನೋಡಬೇಕಾಗಿದ್ದು ಜಾತಿಯ ದೃಷ್ಟಿಕೋನದಿಂದಲ್ಲ. ಬದಲಾಗಿ ಅವರ ಸಾಧನೆ ಹಾಗೂ ಮನುಕುಲಕ್ಕೆ ನೀಡಿದ ಕೊಡುಗೆಯ ದೃಷ್ಟಿಕೋನದಿಂದ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಮಹನೀಯರ ವಚನಗಳು, ಅವರ ಜೀವನ ಶೈಲಿ, ಮನುಕುಲಕ್ಕೆ ನೀಡಿದ ಕೊಡುಗೆ ಹಾಗೂ ಒಳ್ಳೆಯ ಸಂದೇಶಗಳನ್ನು ಯುವ ಸಮೂಹಕ್ಕೆ ತಿಳಿಸುವ ಸಲುವಾಗಿ ಮಹಾನ್ ನಾಯಕರ ಜಯಂತಿಯನ್ನು ಆಚರಿಸಲಾಗುತ್ತಿದೆ. ಆದರೆ ಜಯಂತಿಗಳು ಕೇವಲ ಸಂಬಂಧಿಸಿದ ಸಮಾಜಕ್ಕೆ ಸೀಮಿತಗೊಳ್ಳುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಇಂತಹ ಮಹನೀಯರ, ಶರಣರ ವಚನಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಕಾರ್ಯಕ್ರಮ ಅರ್ಥಪೂರ್ಣವಾಗಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಸಂತೆಬೆನ್ನೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಫೈಜುಲ್ಲಾ ವಿಶೇಷ ಉಪನ್ಯಾಸ ನೀಡಿ, ಹಡಪದ ಅಪ್ಪಣ್ಣನವರು ಸುಮಾರು 370ಕ್ಕೂ ಹೆಚ್ಚು ವಚನಗಳನ್ನು ರಚಿಸಿದ್ದಾರೆ. ಅವರ
ಪತ್ನಿ ಲಿಂಗಮ್ಮ ಕೂಡ ಕಾಯಕದ ಜೊತೆಗೆ ವಚನಗಳ ರಚನೆ ಮಾಡಿದರು. ಒಳ್ಳೆಯ ನಡೆ, ನುಡಿ, ಕಾಯಕ್ಕೆ ಬಾಗುವವರೇ ನಿಜವಾದ ಶರಣರು ಎಂಬುದು ಶ್ರೇಷ್ಠ ಸಂತ ಅಪ್ಪಣ್ಣನವರ ನಂಬಿಕೆಯಾಗಿತ್ತು ಎಂದರು.
ಹಡಪದ ಅಪ್ಪಣ್ಣನವರು ಅನ್ಯಾಯದ ವಿರುದ್ಧ ಸಿಡಿದೇಳುತ್ತಿದ್ದರು. ಕನ್ನಡದ ಮೂಲ ಬೇರನ್ನು ಗಟ್ಟಿಗೊಳಿಸಿ ಗುರು ಲಿಂಗ ಜಂಗಮವನ್ನು ಪ್ರತಿಪಾದಿಸಿ ಜಾತಿ ವ್ಯವಸ್ಥೆ ನಿರ್ಮೂಲನೆ ಮಾಡಲು ಶ್ರಮಿಸಿದರು. ಕಾಯಕ ಮಾಡದೆ ಊಟ ಮಾಡಬಾರದೆಂಬ ತತ್ವವನ್ನು ಅಳವಡಿಸಿಕೊಂಡಿದ್ದರು. ಇವರ ಸರಳ ವಚನಗಳಿಂದ ಸಮಾಜವನ್ನು ತಿದ್ದಿ ತೀಡುವ ಕಾರ್ಯ ನಡೆಯುತ್ತಿತ್ತು. ಇಂತಹ ಮಹನೀಯರ ವಚನಗಳನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಜಯಂತಿ ಆಚರಣೆಗೆ ಅರ್ಥ ಬರುತ್ತದೆ ಎಂದರು.
ಉಪವಿಭಾಗಾಧಿಕಾರಿ ವಿಜಯ್‌ಕುಮಾರ್, ತಹಶೀಲ್ದಾರ್ ಕಾಂತರಾಜ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ನಿಜಲಿಂಗಪ್ಪ, ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ಅಧ್ಯಕ್ಷ ಎಂ.ವಿ. ಓಂಕಾರಪ್ಪ, ಕಾರ್ಯದರ್ಶಿ ಚನ್ನಬಸಪ್ಪ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Whale: ಅಂಬರ್ ಗ್ರೀಸ್ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
MUST WATCH
ಹೊಸ ಸೇರ್ಪಡೆ
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.