ನೆರೆ ಸಂತ್ರಸ್ತರ ಸ್ಥಿತಿ ಅತಂತ್ರ

ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ರೈತ ಸಂಘ ರಾಜ್ಯಾಧ್ಯಕ್ಷ ಕೋಡಿಹಳ್ಳಿ ವಾಗ್ಧಾಳಿ

Team Udayavani, Sep 18, 2019, 4:17 PM IST

18-Sepctember-12

ಚಿತ್ರದುರ್ಗ: ನಗರದ ಪ್ರವಾಸಿ ಮಂದಿರದಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಸುದ್ದಿಗೋಷ್ಠಿ ನಡೆಸಿದರು

ಚಿತ್ರದುರ್ಗ: ರಾಜ್ಯ ಸರ್ಕಾರ ದುರ್ಬಲವಾಗಿದೆ. ವಿರೋಧ ಪಕ್ಷಕ್ಕೆ ಓರ್ವ ನಾಯಕನನ್ನು ಆಯ್ಕೆ ಮಾಡಿಕೊಳ್ಳುವ ಶಕ್ತಿಯೂ ಇಲ್ಲ. ಇದರ ಪರಿಣಾಮವನ್ನು ನೆರೆ ಸಂತ್ರಸ್ತರು ಅನುಭವಿಸುತ್ತಿದ್ದಾರೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಆರೋಪಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೆರೆ ಬಂದು ಲಕ್ಷಾಂತರ ಜನ ನಿರಾಶ್ರಿತರಾಗಿದ್ದು, ನಿತ್ಯವೂ ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ. ಇಷ್ಟಾದರೂ ಪ್ರಧಾನಿ ನರೇಂದ್ರ ಮೋದಿ ಪರಿಹಾರ ಘೋಷಿಸದಿರುವುದು ರಾಜ್ಯದಲ್ಲಿ ಗಟ್ಟಿಯಾದ ಸರ್ಕಾರ ಇಲ್ಲ ಎನ್ನುವುದನ್ನು ತೋರಿಸುತ್ತಿದೆ ಎಂದರು.

ನೆರೆ ಬಂದಿದ್ದರಿಂದ ಕೃಷಿ ಭೂಮಿ ಹಾಳಾಗಿದ್ದು, ದೊಡ್ಡ ದೊಡ್ಡ ಕಂದಕ ನಿರ್ಮಾಣವಾಗಿವೆ. ನೂರಾರು ಲೋಡ್‌ ಮಣ್ಣು ರಾಶಿ ಬಿದ್ದಿದೆ. ಈ ಬಗ್ಗೆ ತುರ್ತು ಕ್ರಮ ಕೈಗೊಂಡು ಎಲ್ಲವನ್ನೂ ಸರಿ ಮಾಡಿಕೊಡುವಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಒತ್ತಾಯಿಸಿದ್ದೇನೆ ಎಂದರು.

ನೀರು ನಿರ್ವಹಣಾ ಮಂಡಳಿ ರಚಿಸಿ: ಬರಗಾಲದಲ್ಲಿ ಪ್ರತಿಭಟಿಸಿದರೂ ಮಹಾರಾಷ್ಟ್ರ ಸರ್ಕಾರ ನೀರು ಬಿಡಲಿಲ್ಲ. ದುಡ್ಡು ಕೊಟ್ಟು ನೀರು ಪಡೆಯುವ ದುಃಸ್ಥಿತಿ ನಮ್ಮನ್ನಾಳುವವರಿಂದ ಬಂದಿದೆ. ಇದರ ಬದಲು ಕಾವೇರಿ ನದಿಯಂತೆ ಕೃಷ್ಣಾ ನದಿಗೂ ನೀರು ನಿರ್ವಹಣಾ ಮಂಡಳಿ ರಚಿಸಲು ರಾಜ್ಯ ಸರ್ಕಾರ ಕೇಂದ್ರದ ಮೇಲೆ ಒತ್ತಡ ತರಬೇಕು ಎಂದರು.

ನಮಗೆ ಇಷ್ಟವಿಲ್ಲದಿದ್ದರೂ ನಮ್ಮನ್ನೆಲ್ಲಾ ಬಂಧಿಸಿ ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸಿದ್ದಾರೆ. ಈಗ ನಾವು ಒತ್ತಾಯಿಸುತ್ತಿದ್ದೇವೆ. ಕೃಷ್ಣಾ ನದಿಗೂ ಮಂಡಳಿ ರಚಿಸಿ, ಜತೆಗೆ ಆಲಮಟ್ಟಿ ಜಲಾಶಯದ ತೂಬಿನ ಮಟ್ಟ ಎತ್ತರಿಸಬೇಕು. ಸರಿಯಾದ ನೀರು ನಿರ್ವಹಣಾ ಕ್ರಮ ಕೈಗೊಂಡಿದ್ದರೆ 1 ಸಾವಿರ ಟಿಎಂಸಿ ನೀರು ಸಮುದ್ರಕ್ಕೆ ಹರಿಯುವುದು ತಪ್ಪುತ್ತಿತ್ತು ಎಂದರಲ್ಲದೇ ರಾಜ್ಯದ ಸಮಗ್ರ ನೀರಾವರಿ ಪದ್ಧತಿಗಾಗಿ ಮುಂದಿನ ಬಜೆಟ್‌ನಲ್ಲಿ 1 ಲಕ್ಷ ಕೋಟಿ ರೂ. ಮೀಸಲಿಡುವಂತೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಒತ್ತಾಯಿಸಿದರು.

ಅಡ್ಡ ಬೀಳಬೇಕೆ?: ಪರಿಹಾರಕ್ಕಾಗಿ ಪ್ರಧಾನಿಗೆ ರಾಜ್ಯದ ಜನತೆ ಅಡ್ಡ ಬೀಳಬೇಕೇ ಎಂದು ಪ್ರಶ್ನಿಸಿದ ಕೋಡಿಹಳ್ಳಿ,ರಾಜ್ಯದ ಸಂಸದರು ಆಂಧ್ರಪ್ರದೇಶ, ತಮಿಳನಾಡು ಸಂಸದರಂತೆ ಪ್ರಧಾನಿ ಎದುರು ಪೆರೇಡ್‌ ಮಾಡಿ ಪರಿಹಾರ ಕೇಳಬೇಕು. ಆದರೆ ನಮ್ಮ ಸಂಸದರು ಈ ವಿಚಾರದಲ್ಲಿ ವಿಫಲರಾಗಿದ್ದಾರೆ ಎಂದು ಆಕ್ಷೇಪಿಸಿದರು.

ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಈಚಘಟ್ಟದ ಸಿದ್ಧವೀರಪ್ಪ, ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ, ಭಕ್ತರಹಳ್ಳಿ

ಬೈರೇಗೌಡ, ಲಕ್ಷ್ಮಣಸ್ವಾಮಿ, ರಾಜು, ನಾಗಣ್ಣ, ಬಾಬಣ್ಣ, ಜಿಲ್ಲಾಧ್ಯಕ್ಷ ಚಿಕ್ಕಬ್ಬಿಗೆರೆ ನಾಗರಾಜ್‌ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಇದ್ದರು.

ಟಾಪ್ ನ್ಯೂಸ್

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು

Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Delhi-Cong

Delhi Polls: ದಿಲ್ಲಿಯ ಮಹಿಳಾ ಮತದಾರರ ಸೆಳೆಯಲು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ನನ್ನ ಮಗಳ ಬಾಯ್‌ಫ್ರೆಂಡ್‌ ಫೋಟೋ ರಿವೀಲ್‌ ಮಾಡಿದರೆ 21 ಲಕ್ಷ ಬಹುಮಾನ: ಬಿಗ್‌ ಬಾಸ್‌ಗೆ ಸವಾಲು

ನನ್ನ ಮಗಳ ಬಾಯ್‌ಫ್ರೆಂಡ್‌ ಫೋಟೋ ರಿವೀಲ್‌ ಮಾಡಿದರೆ 21 ಲಕ್ಷ ಬಹುಮಾನ: ಬಿಗ್‌ ಬಾಸ್‌ಗೆ ಸವಾಲು

Mahakumbh Mela: ಪ್ರಯಾಗ್ ರಾಜ್‌ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು‌ ಬೆದರಿಕೆ

Mahakumbh Mela: ಪ್ರಯಾಗ್ ರಾಜ್‌ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು‌ ಬೆದರಿಕೆ

siddanna-2

HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cyber crime

MRPL ನಲ್ಲಿ ಉದ್ಯೋಗ ಆಮಿಷ: ಯುವಕನಿಗೆ 1 ಲಕ್ಷ ರೂ.ವಂಚನೆ

1anna

Karkala; ಕೋರ್ಟ್‌ಗೆ ಹಾಜರಾದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ

1-kmc

Manipal KMC; ಮಧುಮೇಹಿ ಮಕ್ಕಳಿಗಾಗಿ ಶೈಕ್ಷಣಿಕ ಕಾರ್ಯಕ್ರಮ

ಸಚಿವ ಸತೀಶ್ ಜಾರಕಿಹೊಳಿ

Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

cyber crime

MRPL ನಲ್ಲಿ ಉದ್ಯೋಗ ಆಮಿಷ: ಯುವಕನಿಗೆ 1 ಲಕ್ಷ ರೂ.ವಂಚನೆ

1anna

Karkala; ಕೋರ್ಟ್‌ಗೆ ಹಾಜರಾದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ

Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು

Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.