ಜನರಲ್ಲಿ ಆರೋಗ್ಯ ಜಾಗೃತಿ ಮೂಡಿಸುವುದು ಅಗತ್ಯ

ಮನೆ ಹಾಗೂ ಪರಿಸರದಲ್ಲಿ ಸ್ವಚ್ಛತೆ-ನೈರ್ಮಲ್ಯ ಕಾಪಾಡುವ ಬಗ್ಗೆಯೂ ಗಮನ ಕೊಡಿ: ಡಾ| ಅನಂತ್‌

Team Udayavani, Jul 24, 2019, 4:24 PM IST

24-July-37

ಚಿತ್ರದುರ್ಗ: ತರಬೇತಿ ಕಾರ್ಯಕ್ರಮವನ್ನು ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಡಾ| ಕೆ. ಅನಂತ್‌ ಉದ್ಘಾಟಿಸಿದರು.

ಚಿತ್ರದುರ್ಗ: ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡಿಕೊಳ್ಳುವುದು ಜನರ ಕೈಯಲ್ಲಿದೆ. ಗ್ರಾಮ ಹಾಗೂ ನಗರಗಳಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಯುವಕರು, ಆಶಾ ಕಾರ್ಯಕರ್ತೆಯರು ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಪಂಚಾಯತ್‌ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಡಾ| ಕೆ. ಅನಂತ್‌ ಕರೆ ನೀಡಿದರು.

ನಗರದ ಐಎಂಎ ಹಾಲ್ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ ವಿಶ್ವಾಸ್‌ ಹಾಗೂ ಗ್ರಾಮ ಆರೋಗ್ಯ ನೈರ್ಮಲ್ಯ ಮತ್ತು ಪೌಷ್ಟಿಕ ಸಮಿತಿ ಸದಸ್ಯರ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಉತ್ತಮ ಜೀವನ ನಡೆಸಲು ಹಾಗೂ ಅಭಿವೃದ್ಧಿಯತ್ತ ಸಾಗಲು ನಾಲ್ಕು ಅಂಶಗಳಾದ ಶಿಕ್ಷಣ, ಆರೋಗ್ಯ, ಭೂಮಿ ಮತ್ತು ಬಂಡವಾಳ ಪ್ರಮುಖವಾಗಿವೆ. ಅವುಗಳಲ್ಲಿ ಆರೋಗ್ಯ ಬಹಳ ಮುಖ್ಯ. ಆರೋಗ್ಯವೊಂದಿದ್ದರೆ ಉಳಿದ ಮೂರು ಅಂಶಗಳು ನಮ್ಮೆಡೆಗೆ ಬರುತ್ತವೆ. ಸರ್ಕಾರಿ ಕಾರ್ಯಕ್ರಮಗಳು ದೇಶದ ಕಟ್ಟ ಕಡೆಯ ವ್ಯಕ್ತಿಗೂ ತಲುಪುವಂತೆ ಮಾಡಬೇಕು ಎಂದರು.

ಒಂದು ಗ್ರಾಮದ ಸ್ವಚ್ಛತೆ ಅಲ್ಲಿನ ಜನಪ್ರತಿನಿಧಿಗಳು, ಸ್ಥಳೀಯ ಅಧಿಕಾರಿಗಳ ಕೈಯಲ್ಲಿರುತ್ತದೆ. ಸ್ವಚ್ಛತೆಗಾಗಿ ಸರ್ಕಾರ ಬಿಡುಗಡೆ ಮಾಡುವ ಹಣವನ್ನು ಸದುಪಯೋಗಪಡಿಸಿಕೊಳ್ಳಬೇಕು. ಶುದ್ಧ ನೀರಿನ ಘಟಕದ ಸದ್ಬಳಕೆ ಆಗಬೇಕು. ಸಮುದಾಯದ ಜೊತೆಯಲ್ಲಿ ಜನಪ್ರತಿನಿಧಿಗಳು ಕೆಲಸ ಮಾಡಬೇಕು. ಜನರು ಸ್ವಚ್ಛತೆ ಬಗ್ಗೆ ಗಮನ ಹರಿಸಿ ಸ್ವತಃ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಪಾಲಾಕ್ಷ ಮಾತನಾಡಿ, ‘ಎಲ್ಲೆಡೆ ಆರೋಗ್ಯ ಎಲ್ಲೆಡೆ ವಿಶ್ವಾಸ’ ಎಂಬ ಘೋಷವಾಕ್ಯದೊಂದಿಗೆ ಆರೋಗ್ಯ ವೃದ್ಧಿಸುವ ಸಲುವಾಗಿ ವಿಶ್ವಾಸ್‌(ಗ್ರಾಮೀಣ ಪ್ರದೇಶಾಧಾರಿತ ಆರೋಗ್ಯ, ಜಲ ಮತ್ತು ನೈರ್ಮಲ್ಯ ಸಹಕ್ರಿಯೆಯ ಉಪಕ್ರಮ) ಎಂಬ ಯೋಜನೆಯನ್ನು ಜಿಲ್ಲಾದ್ಯಂತ ಹಮ್ಮಿಕೊಳ್ಳಲಾಗಿದೆ. ಸ್ಥಳೀಯವಾಗಿ ಗ್ರಾಮ ಮತ್ತು ನಗರ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ 81 ಪ್ರಾಥಮಿಕ ಆರೋಗ್ಯ ಕೇಂದ್ರಗಳು, 11 ಸಮುದಾಯ ಆರೋಗ್ಯ ಕೇಂದ್ರಗಳು, ಒಂದು ಜಿಲ್ಲಾಸ್ಪತ್ರೆ ಮತ್ತು 347 ಉಪಕೇಂದ್ರಗಳಿವೆ. ಇವುಗಳು ಶುದ್ಧ ನೀರು, ಗಾಳಿ, ಆಹಾರ ಮತ್ತು ನೈರ್ಮಲ್ಯದ ಕಡೆಗೆ ಹೆಚ್ಚು ಒತ್ತು ನೀಡುತ್ತಿವೆ. ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡಲು ಸಮುದಾಯ, ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ತಾಲೂಕು ಆರೋಗ್ಯಾಧಿಕಾರಿ ಡಾ| ಗಿರೀಶ್‌, ಐನಳ್ಳಿ ಗ್ರಾಮ ಪಂಚಾಯತ್‌ ಅಧ್ಯಕ್ಷ ಕರಿಯಪ್ಪ, ಜಿಲ್ಲಾ ಕುಟುಂಬ ಕಲ್ಯಾಣ ಯೋಜನಾಧಿಕಾರಿ ಡಾ| ಸುಧಾ, ಡಾ| ಕುಮಾರಸ್ವಾಮಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎನ್‌.ಎಸ್‌. ಮಂಜುನಾಥ್‌ ಇದ್ದರು. ತರಬೇತಿ ಕಾರ್ಯಕ್ರಮದಲ್ಲಿ ತಾಲೂಕಿನ ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಪಂ ಸದಸ್ಯರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.