ವಿವಿ ಸಾಗರಕ್ಕೆ ಹರಿದು ಬರುವಳೇ ಭದ್ರೆ?

ಭದ್ರಾ ಅಣೆಕಟ್ಟೆ ಭರ್ತಿಯಾಗಿರುವುದರಿಂದ ವಾಣಿವಿಲಾಸ ಸಾಗರಕ್ಕೆ ನೀರು ಹರಿಸಲು ಸಕಾಲ

Team Udayavani, Aug 9, 2019, 12:29 PM IST

9-Agust-18

ಚಿತ್ರದುರ್ಗ: ಹಿರಿಯೂರು ತಾಲೂಕಿನ ವಾಣಿವಿಲಾಸ ಸಾಗರ ಜಲಾಶಯ.

ಚಿತ್ರದುರ್ಗ: ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಜಲಾಶಯಗಳು ಭರ್ತಿಯಾಗುತ್ತಿವೆ. ಈ ಸಂದರ್ಭವನ್ನು ಬಳಸಿಕೊಂಡು ಜಿಲ್ಲೆಯ ವಾಣಿವಿಲಾಸ ಸಾಗರಕ್ಕೆ ಭದ್ರಾ ನೀರು ಹರಿಸಲು ಇದು ಸಕಾಲವಾಗಿದೆ.

ಜಿಲ್ಲೆಯಲ್ಲಿ ಇದುವರೆಗೆ ಸಮೃದ್ಧ ಎನ್ನಬಹುದಾದಷ್ಟು ಮಳೆಯಾಗಿಲ್ಲ. ಉತ್ತರಕರ್ನಾಟಕ ಭಾಗದಲ್ಲಿ ಪ್ರವಾಹ ಉಂಟಾಗಿ ನದಿ, ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿದ್ದರೆ, ಚಿತ್ರದುರ್ಗ ಜಿಲ್ಲೆಯ ಜನ ಸೋನೆ ಮಳೆಗೆ ತೃಪ್ತಿಪಟ್ಟುಕೊಳ್ಳುವಂತಾಗಿದೆ. ಈ ನಿರಾಸೆಯ ನಡುವೆಯೂ ಜಿಲ್ಲೆಯ ಜನರ ಪಾಲಿಗೆ ಭದ್ರಾ ಮೇಲ್ದಂಡೆ ಯೋಜನೆ ಆಶಾಕಿರಣವಾಗಿ ಗೋಚರಿಸುತ್ತಿದೆ. ಕಳೆದೊಂದು ದಶಕದಿಂದ ಕುಂಟುತ್ತಾ ಸಾಗುತ್ತಿರುವ ಈ ಯೋಜನೆಯಿಂದ ಹಿರಿಯೂರು ತಾಲೂಕಿನಲ್ಲಿರುವ ವಾಣಿವಿಲಾಸ ಸಾಗರಕ್ಕೆ ನೀರು ಹರಿಸುವ ದಿನಗಳು ಸನ್ನಿಹಿತವಾಗುತ್ತಿವೆ.

ಈಗ ಸಿದ್ಧವಾಗಿರುವ ಕಾಲುವೆಗಳನ್ನು ಬಳಸಿಕೊಂಡು ‘ವೈ’ ಜಂಕ್ಷನ್‌ವರೆಗೆ ನೀರು ಹರಿಸಿ ಅಲ್ಲಿಂದ ಹಳ್ಳದ ಮೂಲಕ ವೇದಾವತಿ ನದಿ ಮೂಲಕ ವಾಣಿವಿಲಾಸ ಸಾಗರಕ್ಕೆ ನೀರು ಹರಿಸುವುದು ಸದ್ಯದ ಯೋಜನೆ. ಇದಕ್ಕೆ ಪೂರಕವಾಗಿ ನೀರೆತ್ತುವ ಯಂತ್ರಗಳ ಟ್ರಯಲ್ ರನ್‌ ಆಗಿದೆ. ರೈಲ್ವೇ ಕ್ರಾಸಿಂಗ್‌ಗೆ ಸಂಬಂಸಿ ಇನ್ನೂ ಶೇ. 30 ರಷ್ಟು ಕೆಲಸ ಬಾಕಿ ಇದ್ದು, ಕೆಲವು ದಿನಗಳಲ್ಲೇ ಪೂರ್ಣಗೊಳ್ಳಲಿದೆ. ಬೆಟ್ಟದತಾವರೆಕೆರೆ ಬಳಿ ಇರುವ ವಿದ್ಯುತ್‌ ಲೈನ್‌ ಚಾರ್ಜ್‌ ಆಗಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಆ. 15 ರಿಂದ 20 ರೊಳಗಾಗಿ ಭದ್ರೆ ವಿವಿ ಸಾಗರದತ್ತ ಮುಖ ಮಾಡಲಿದ್ದಾಳೆ ಎಂಬುದು ಭದ್ರಾ ಮೇಲ್ದಂಡೆ ಯೋಜನೆಯ ತಂತ್ರಜ್ಞರ ಅಂಬೋಣ.

ಇದೆಲ್ಲವೂ ಒಂದು ಕಡೆಯಾದರೆ, ಭದ್ರಾ ನೀರು ವಾಣಿ ವಿಲಾಸಸಾಗರಕ್ಕೆ ಹರಿಯಲು ಭದ್ರಾ ಅಣೆಕಟ್ಟೆಯಲ್ಲಿ 129 ಅಡಿ ಮೇಲ್ಪಟ್ಟು 144 ಅಡಿವರೆಗೆ ನೀರಿರಬೇಕು. ಸುದೈವವೋ ಎಂಬಂತೆ ಮಲೆನಾಡಲ್ಲಿ ಭರಪೂರ ಮಳೆಯಾಗುತ್ತಿದೆ. ಆ. 8ಕ್ಕೆ ಭದ್ರಾ ಅಣೆಕಟ್ಟೆ ನೀರಿನ ಮಟ್ಟ 154.3 ಅಡಿಯಷ್ಟಿದೆ. ಒಳಹರಿವಿನ ಪ್ರಮಾಣ 41,487 ಕ್ಯೂಸೆಕ್‌ ಇದೆ. 226 ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗುತ್ತಿದೆ. ಇನ್ನೂ ಹತ್ತು ಅಡಿ ನೀರು ಹೆಚ್ಚು ಇರುವುದರಿಂದ ಭದ್ರೆಯನ್ನು ಹರಿಸಲು ಯಾವುದೇ ಸಮಸ್ಯೆ ಇದ್ದಂತಿಲ್ಲ.

ಭದ್ರಾ ಮೇಲ್ದಂಡೆ ಯೋಜನೆ ಅಧಿಕಾರಿಗಳು ಹಾಗೂ ಸರ್ಕಾರ ಮನಸ್ಸು ಮಾಡಿದರೆ ಈಗ ಮಳೆ ಹೆಚ್ಚಾಗಿ ಸಮುದ್ರಕ್ಕೆ ಹರಿಯುವ ನೀರನ್ನು ವಾಣಿವಿಲಾಸ ಸಾಗರಕ್ಕೆ ಹರಿಸಬಹುದು. ಮಳೆ ಬಾರದಿದ್ದರೂ ಭದ್ರಾ ಅಣೆಕಟ್ಟೆಯಿಂದ ಪ್ರಾಯೋಗಿಕವಾಗಿ ಕನಿಷ್ಠ ಕುಡಿಯುವ ನೀರಿಗಾದರೂ ನೀರು ಹರಿಸುವ ಲೆಕ್ಕಾಚಾರ ಹೊಂದಲಾಗಿತ್ತು. ಈಗ ಸಾಕಷ್ಟು ಮಳೆಯಾಗುತ್ತಿರುವುದರಿಂದ ಆಗಬೇಕಾಗಿರುವ ಕೆಲಸಗಳನ್ನು ತ್ವರಿತವಾಗಿ ಮುಗಿಸಿ ಸಮುದ್ರಕ್ಕೆ ಹರಿಯುವ ನೀರನ್ನು ವಾಣಿವಿಲಾಸ ಸಾಗರಕ್ಕೆ ಹರಿಸಿದರೆ ಜಿಲ್ಲೆಗೆ ಅನುಕೂಲವಾಗಲಿದೆ.

ಟಾಪ್ ನ್ಯೂಸ್

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

1-kanchi

Kanchi swamiji; ದೇವಸ್ಥಾನಗಳ ಭೂಮಿ ದೇವಸ್ಥಾನಗಳಿಗೇ ಇರಲಿ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.