ವಲ್ಲಭಬಾಯ್ ಪಟೇಲರ ಕೊಡುಗೆ ಸ್ಮರಣೀಯ
ಭಾರತದ ಪ್ರಧಾನಿಯಾಗಿದ್ದರೆ ದೇಶದ ಚಿತ್ರಣ-ಭವಿಷ್ಯವೇ ಬದಲಾಗುತ್ತಿತ್ತು: ನವೀನ್
Team Udayavani, Nov 1, 2019, 12:41 PM IST
ಚಿತ್ರದುರ್ಗ: ಸರ್ದಾರ್ ವಲ್ಲಭಬಾಯ್ ಪಟೇಲರು ಈ ದೇಶದ ಪ್ರಧಾನಿಯಾಗಿದ್ದರೆ ದೇಶದ ಚಿತ್ರಣವೇ ಬದಲಾಗಿರುತ್ತಿತ್ತು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎಸ್. ನವೀನ್ ಅಭಿಪ್ರಾಯಪಟ್ಟರು.
ಭಾರತದ ಪ್ರಪ್ರಥಮ ಉಪಪ್ರಧಾನಿ ಹಾಗೂ ಗೃಹ ಸಚಿವ ಸರ್ದಾರ್ ವಲ್ಲಭಭಾಯ್ ಪಟೇಲ್ ಜನ್ಮದಿನದ ಅಂಗವಾಗಿ ಗುರುವಾರ ಬಿಜೆಪಿ ವತಿಯಿಂದ ಆಯೋಜಿಸಿದ್ದ ಏಕತಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.
ಸರ್ದಾರ್ ವಲ್ಲಭಭಾಯ್ ಪಟೇಲರು ಪ್ರಧಾನಿ ಹುದ್ದೆಯನ್ನು ಅಲಂಕರಿಸಬೇಕಿತ್ತು. ಹಾಗಾಗಿದ್ದರೆ ದೇಶದ ಭವಿಷ್ಯವೇ ಬದಲಾಗುತ್ತಿತ್ತು. ಭಾರತ ಉಜ್ವಲವಾಗುತ್ತಿತ್ತು ಎಂದು ಕೆಲವು ಹಿರಿಯರು ಅಭಿಪ್ರಾಯಪಟ್ಟಿದ್ದಾರೆ.
ಜಮ್ಮು-ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂಬುದು ಅವರ ಅಚಲವಾದ ನಂಬಿಕೆಯಾಗಿತ್ತು. ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನ ನೀಡುವ ಕುರಿತು ಸರ್ದಾರ್ ವಲ್ಲಬ್‌ಭಾಯ್ ಪಟೇಲ್ ಅವರಿಗೆ ಇಷ್ಟವಿರಲಿಲ್ಲ. ಹಾಗಾಗಿ ಅವರು ಅಂದೇ ಇದನ್ನು ವಿರೋಧಿ ಸಿದ್ದರು ಎಂದರು.
ಭಾರತದ ಏಕತೆ ಹಾಗೂ ಸಾರ್ವಭೌಮತೆಗೆ ತಮ್ಮ ಬದುಕನ್ನು ಮೀಸಲಿಟ್ಟಿದ್ದ ಸರ್ದಾರ್ ವಲ್ಲಭಭಾಯಿ ಪಟೇಲ್ ಭಾರತ ಒಕ್ಕೂಟ ರಚನೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಅವರ ಜನ್ಮದಿನವಾದ ಇಂದು ಏಕತಾ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಅದರಂತೆ ಏಕತಾ ಓಟ ನಡೆಸುವ ಮೂಲಕ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಗುತ್ತಿದೆ ಎಂದು ತಿಳಿಸಿದರು.
ಭಾರತ ಒಕ್ಕೂಟ ವ್ಯವಸ್ಥೆಯಲ್ಲಿ ಸರ್ದಾರ್ ವಲ್ಲಭಬಾಯ್ ಪಟೇಲ್ ನಿರ್ವಹಿಸಿದ ಕಾರ್ಯವನ್ನು ಯಾರೂ ಮರೆಯುವಂತಿಲ್ಲ. ನಿಜಾಮರ ಆಳ್ವಿಕೆಯಲ್ಲಿದ್ದ ಹೈದರಾಬಾದ್ ಅನ್ನು ಭಾರತದ ಒಕ್ಕೂಟಕ್ಕೆ ಸೇರಿಸುವಲ್ಲಿ ಮಹತ್ವದ ಪಾತ್ರ ವಹಿಸಿದರು. ಇದರಿಂದ ಹೈದರಾಬಾದ್‌ನಲ್ಲಿ ನಿಜಾಮರ ಆಡಳಿತ ಕೊನೆಯಾಯಿತು. ಭಾರತದ ಅಖಂಡತೆ, ಸಾರ್ವಭೌಮತೆಯನ್ನು ಸಾರುವಲ್ಲಿ ಸರ್ದಾರ್ ಪಟೇಲರು ಹಲವು ಮಹತ್ವದ ನಿರ್ಣಯಗಳನ್ನು ಕೈಗೊಂಡರು ಎಂದು ಸ್ಮರಿಸಿದರು.
ಬಿಜೆಪಿ ವಿಭಾಗೀಯ ಪ್ರಭಾರಿ ಜಿ.ಎಂ. ಸಿದ್ದೇಶ್, ಮುಖಂಡರಾದ ಸಿದ್ದೇಶ್ ಯಾದವ್, ಮಲ್ಲಿಕಾರ್ಜುನ್, ಮುರುಳಿ, ರತ್ನಮ್ಮ, ಜಿತೇಂದ್ರ ಎನ್. ಹುಲಿಕುಂಟೆ, ರೇಖಾ, ಶಂಭು, ಚಂದ್ರಿಕಾ ಲೋಕನಾಥ್, ಶಾಂತಮ್ಮ, ದಗ್ಗೆ ಶಿವಪ್ರಕಾಶ್, ನಾಗರಾಜ್ ಬೇದ್ರೆ, ನಗರಸಭೆ ಸದಸ್ಯ ಸುರೇಶ್, ಸತ್ಯನಾರಾಯಣ, ವೆಂಕಟೇಶ್ ಯಾದವ್, ಕಲ್ಲೇಶಯ್ಯ, ತಿಪ್ಪೇಸ್ವಾಮಿ, ಎಬಿವಿಪಿ ಚಂದ್ರು ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ
Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.