ಯೋಗ ಮಾಡಿ ಆರೋಗ್ಯದಿಂದಿರಿ

ದೈನಂದಿನ ಬದುಕಿನ ಚಟುವಟಿಕೆಯ ಭಾಗವಾಗಲಿ ಯೋಗ •ಯೋಗದಿಂದ ದೇಹ-ಮನಸ್ಸು ಸದೃಢ

Team Udayavani, Jun 22, 2019, 11:39 AM IST

22–June-17

ಚಿತ್ರದುರ್ಗ: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಸಾರ್ವನಿಕರು ಯೋಗಾಭ್ಯಾಸ ಮಾಡಿದರು.

ಚಿತ್ರದುರ್ಗ: ಯೋಗದಿಂದ ದೇಹ ಮಾತ್ರವಲ್ಲ ಮನಸ್ಸನ್ನೂ ಕೂಡ ಸದೃಢವಾಗುತ್ತದೆ ಎಂದು ಜಿಪಂ ಅಧ್ಯಕ್ಷೆ ವಿಶಾಲಾಕ್ಷಿ ನಟರಾಜ್‌ ಹೇಳಿದರು.

ಇಲ್ಲಿನ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಹಾಗೂ ಆಯುಷ್‌ ಇಲಾಖೆ, ಪತಂಜಲಿ ಯೋಗ ಸಂಸ್ಥೆ, ಚಿತ್ರದುರ್ಗ ಯೋಗ ಸಂಸ್ಥೆ, ಪತಂಜಲಿ ಯೋಗ ಶಿಕ್ಷಣ ಸಂಸ್ಥೆ, ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯ, ಆರ್ಟ್‌ ಆಫ್‌ ಲಿವಿಂಗ್‌, ನೆಹರು ಯುವ ಕೇಂದ್ರ ಹಾಗೂ ಇತರೆ ಯೋಗಾಸಕ್ತ ಸಂಘಗಳ ವತಿಯಿಂದ ಶುಕ್ರವಾರ ಆಯೋಜಿಸಿದ್ದ 5ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಯೋಗವನ್ನು ಒಂದು ದಿನದ ಆಚರಣೆಯನ್ನಾಗಿಸದೆ, ದೈನಂದಿನ ಬದುಕಿನ ಚಟುವಟಿಕೆಯ ಭಾಗವಾಗಬೇಕು ಎಂದರು.

ಭಾರತ ಪರಿಚಯಿಸಿದ ಯೋಗದ ಮಹತ್ವದಿಂದಾಗಿ ಇಡೀ ಜಗತ್ತು ಭಾರತದತ್ತ ತಿರುಗು ನೋಡುವಂತಾಗಿದೆ. ಜಗತ್ತಿಗೆ ಭಾರತದ ಕೊಡುಗೆಯಾಗಿರುವ ಯೋಗದಿಂದ ದೇಹವನ್ನಷ್ಟೇ ಅಲ್ಲ ಮನಸ್ಸನ್ನೂ ಕೂಡ ಗಟ್ಟಿಗೊಳಿಸಬಹುದಾಗಿದೆ. ಒತ್ತಡದ ನಡುವೆ ಬದುಕು ಸಾಗಿಸುವ ಇಂದಿನ ಜೀವನ ಶೈಲಿಗೆ ಯೋಗ ಅವಶ್ಯಕವಾಗಿ ಬೇಕಾಗಿದ್ದು, ಯೋಗದಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದರು.

ಯೋಗವನ್ನು ಒಂದು ದಿನದ ಆಚರಣೆಗೆ ಸೀಮಿತಗೊಳಿಸದೆ, ಎಲ್ಲರೂ ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ದಿನನಿತ್ಯ ಯೋಗಾಭ್ಯಾಸ ಮಾಡಬೇಕು. ಪ್ರತಿಯೊಬ್ಬರು ತಮ್ಮ ದೈನಂದಿನ ಜೀವನದಲ್ಲಿ ದಿನಕ್ಕೆ ಕೆಲ ಸಮಯ ಯೋಗಕ್ಕೆ ಮೀಸಲಿಡುವುದು ಅಗತ್ಯ ಎಂದು ಹೇಳಿದರು.

ವಿಧಾನ ಪರಿಷತ್‌ ಸದಸ್ಯೆ ಜಯಮ್ಮ ಬಾಲರಾಜ್‌ ಮಾತನಾಡಿ, ಶ್ರಮ ಸಂಸ್ಕ ೃತಿ ಕಣ್ಮರೆಯಾಗಿದ್ದು, ಬೆವರಿನ ಜೀವನ ಕಡಿಮೆಯಾಗಿರುವುದರಿಂದ ವಯಸ್ಸಿನ ಅಂತರವಿಲ್ಲದೆ ಎಲ್ಲರೂ ಒಂದಲ್ಲ ಒಂದು ರೀತಿಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಹೀಗಾಗಿ ಕಡ್ಡಾಯವಾಗಿ ಯೋಗ ಮಾಡಬೇಕು. ಪೂರ್ವಿಕರು ಅದರಲ್ಲೂ ವಿಶೇಷವಾಗಿ ಹಳ್ಳಿಗಾಡಿನ ಜನ ಹೊಲ-ಮನೆ ಕೆಲಸ ಮಾಡಿ ಮೈಮುರಿದು ದುಡಿಯುತ್ತಿದ್ದರಿಂದ ಸದಾ ಆರೋಗ್ಯವಾಗಿರುತ್ತಿದ್ದರು. ಇಂದಿನ ಯಾಂತ್ರಿಕ ಜೀವನದಲ್ಲಿ ಆರೋಗ್ಯವಂತರು ಸಿಗುವುದೇ ಕಡಿಮೆಯಾಗಿದೆ. ಚಿಕ್ಕಂದಿನಿಂದಲೇ ಮಕ್ಕಳಿಗೆ ಯೋಗ ಕಲಿಸಿದರೆ ಮಾನಸಿಕ ಹಾಗೂ ದೈಹಿಕ ಒತ್ತಡದಿಂದ ದೂರವಿರಬಹುದು ಎಂದು ಹೇಳಿದರು.

ಜಿಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಅನಂತ್‌ ಮಾತನಾಡಿ, ಶರೀರ ಮತ್ತು ಮನಸ್ಸನ್ನು ಏಕಾಗ್ರತೆಯಿಂದಿಡುವ ಶಕ್ತಿ ಯೋಗಕ್ಕಿದೆ. ಯೋಗವನ್ನು ವಿಜ್ಞಾನವನ್ನಾಗಿ ನೋಡಬೇಕು. ಯಾವುದೇ ಒಂದು ದೇಶ ಅಭಿವೃದ್ಧಿಯಾಗಬೇಕಾದರೆ ಆರೋಗ್ಯ, ಶಿಕ್ಷಣ, ಭೂಮಿ, ಬಂಡವಾಳ ಬೇಕು. ಸದೃಢ ಸಮಾಜ ನಿರ್ಮಾಣಕ್ಕೆ ಪ್ರತಿದಿನವೂ ಅಭ್ಯಾಸ ಮಾಡಬೇಕು ಎಂದು ತಿಳಿಸಿದರು.

ಜಿಲ್ಲಾ ಆಯುಷ್‌ ಅಧಿಕಾರಿ ಡಾ| ಶಿವಕುಮಾರ್‌ ಪ್ರಾಸ್ತಾವಿಕವಾಗಿ ಮಾತನಾಡಿ. ಚಿಕಿತ್ಸೆಯೇ ಬೇರೆ, ಯೋಗವೇ ಬೇರೆ. ಯೋಗದಿಂದ ಆರೋಗ್ಯ ಸಂಪಾದಿಸಿಕೊಳ್ಳಬಹುದು. ಜೂ. 21 ಪರ್ವ ಕಾಲವಾಗಿರುವುದರಿಂದ ಮಳೆ ಶೀತವಿರುತ್ತದೆ. ಅದಕ್ಕಾಗಿ ಈ ಕಾಲದಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಗುತ್ತದೆ. ಆರೋಗ್ಯವೆಂದರೆ ಶಾರೀರಿಕ, ಮಾನಸಿಕ, ಆಧ್ಯಾತ್ಮಿಕವಾಗಿ ಸ್ವಸ್ಥರಾಗಿರಬೇಕು. 180 ರಾಷ್ಟ್ರಗಳಲ್ಲಿ ಯೋಗ ದಿನ ಆಚರಿಸಲಾಗುತ್ತಿದೆ ಎಂದರು.

ಜಿಲ್ಲಾಧಿಕಾರಿ ಆರ್‌.ವಿನೋತ್‌ಪ್ರಿಯಾ ಮಾತನಾಡಿ, ಪ್ರತಿಯೊಬ್ಬರು ಯೋಗ ಮಾಡಬೇಕು. ಸಮಯವಿಲ್ಲವೆಂದು ಹೇಳಿ ಯೋಗಾಭ್ಯಾಸದಿಂದ ಯಾರು ವಂಚಿತರಾಗಬಾರದು. ಯೋಗದಿಂದ ಎಲ್ಲ ರೀತಿಯ ಕಾಯಿಲೆಗಳನ್ನು ಗುಣಪಡಿಸಿಕೊಳ್ಳಬಹುದು ಎಂದು ಹೇಳಿದರು.

ಸಮಾರಂಭಕ್ಕೂ ಮುನ್ನ ಮುಂಜಾನೆ 7 ಗಂಟೆಗೆ 800ಕ್ಕೂ ಹೆಚ್ಚು ಯೋಗಾಸಕ್ತರು, ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿ, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿ, ಯೋಗಾಭ್ಯಾಸ, ಪ್ರಾಣಾಯಾಮ ಹಾಗೂ ಧ್ಯಾನವನ್ನು 2 ಗಂಟೆಗಳ ಕಾಲ ಸುಮಾರು 800 ಜನ ಯೋಗಾಸಕ್ತರು ಯೋಗಾಭ್ಯಾಸ ನಡೆಸಿದರು.

ಜಿಪಂ ಸಿಇಒ ಸಿ. ಸತ್ಯಭಾಮ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನಾಗರಾಜ್‌, ಬ್ರಹ್ಮಕುಮಾರಿ ರಶ್ಮಿಅಕ್ಕ, ಯೋಗ ಶಿಕ್ಷಕರಾದ ಎಲ್.ಎಸ್‌. ಚಿನ್ಮಯಾನಂದ, ಪತಂಜಲಿ ಮಲ್ಲಿಕಾರ್ಜುನಪ್ಪ, ರಾಮಲಿಂಗಪ್ಪ, ಕುಮಾರಸ್ವಾಮಿ, ಕೃಷ್ಣಮೂರ್ತಿ, ಆಯುಷ್‌ ಇಲಾಖೆಯ ವೈದ್ಯರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನು ಮಂಜೂರು

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

19

New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.