ಸರಳ ಜೀವನ ಶೈಲಿ ಅಳವಡಿಸಿಕೊಳ್ಳಿ
ಬದುಕು ಸಾರ್ಥಕಗೊಳಿಸಿಕೊಳ್ಳುವತ್ತ ಗಮನ ಕೊಡಿ: ಶ್ರೀಕುಮಾರ್
Team Udayavani, Jul 28, 2019, 12:35 PM IST
ಚಿತ್ರದುರ್ಗ: 'ಯುವ ಸ್ಪಂದನ' ಕಾರ್ಯಕ್ರಮದಲ್ಲಿ ಎಸ್‌ಎಲ್ವಿ ಪಿಯು ಕಾಲೇಜು ಪ್ರಾಚಾರ್ಯ ಬಿ.ಎಂ. ಕೊಟ್ರೇಶ್ ಮಾತನಾಡಿದರು
ಚಿತ್ರದುರ್ಗ: ಸರಳ ರೀತಿಯಲ್ಲಿ ಬದುಕು ಕಟ್ಟಿಕೊಳ್ಳುವುದು, ಆದರ್ಶಮಯ ಜೀವನ ಮಾಡುವತ್ತ ಯುವ ಸಮೂಹ ಚಿಂತನೆ ಮಾಡಬೇಕು ಎಂದು ಯುವ ಸಮಾಲೋಚಕ ಹಾಗೂ ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಡಿ. ಶ್ರೀಕುಮಾರ್ ಹೇಳಿದರು.
ನಗರದ ಎಸ್‌ಎಲ್ವಿ ಪಿಯು ಕಾಲೇಜಿನಲ್ಲಿ ಶ್ರೀ ಸಿರಿಸಂಪಿಗೆ ಸಾಂಸ್ಕೃತಿಕ, ಸಾಮಾಜಿಕ, ಶೈಕ್ಷಣಿಕ ಸಂಸ್ಥೆ ಚಿತ್ರದುರ್ಗ ಹಾಗೂ ಜನ ಆರೋಗ್ಯ ಕೇಂದ್ರ ನಿಮ್ಹಾನ್ಸ್ ಬೆಂಗಳೂರು ಇವುಗಳ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ‘ಯುವ ಸ್ಪಂದನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸರಳ ರೀತಿಯ ಜೀವನ ಶೈಲಿಯೇ ಉತ್ತಮ ಆರೋಗ್ಯದ ಗುಟ್ಟು ಎಂದರು. ಇಂದಿನ ಯುವಜನರು ಎದುರಿಸುತ್ತಿರುವ ಸಾಮಾನ್ಯ ಸಮಸ್ಯೆಗಳನ್ನು ಉದಾಹರಣೆಗಳೊಂದಿಗೆ ವಿವರಿಸಿದರು.
ಜನ ಆರೋಗ್ಯ ಕೇಂದ್ರದ ಯುವ ಸ್ಪಂದನ ಕ್ಷೇತ್ರ ಸಂಪರ್ಕಾಧಿಕಾರಿ ಅಮೃತ್‌ಕುಮಾರ್ ಮಾತನಾಡಿ, ಇಂದಿನ ದಿನಗಳಲ್ಲಿ ಯುವಜನರು ಅನುಭವಿಸುತ್ತಿರುವ ತಲೆಮಾರುಗಳ ನಡುವಿನ ಹೊಂದಾಣಿಕೆ, ಸುರಕ್ಷತೆ, ಭಾವನಾತ್ಮಕ ಹತೋಟಿ, ಲಿಂಗ ಮತ್ತು ಲೈಂಗಿಕತೆ, ಆರೋಗ್ಯ, ಜೀವನ ಶೈಲಿ ಮತ್ತು ವರ್ತನೆ, ಶಿಕ್ಷಣ ಮತ್ತು ಪಠ್ಯ ವಿಷಯ, ವ್ಯಕ್ತಿತ್ವ ಬೆಳವಣಿಗೆ ಉದ್ಯೋಗ ವಿಷಯಗಳಲ್ಲಿ ನಿರ್ಧಾರ ತೆಗೆದುಕೊಳ್ಳುವಿಕೆಯಲ್ಲಿ ಗೊಂದಲದಲ್ಲಿದ್ದರೆ ಯುವ ಸ್ಪಂದನ ಕೇಂದ್ರವನ್ನು ಸಂಪರ್ಕಿಸಬಹುದು ಎಂದರು.
ಜೀವನದಲ್ಲಿ ಭರವಸೆ ಕಳೆದುಕೊಂಡು ವೈಫಲ್ಯದ ಭಯದಿಂದ, ಪರೀಕ್ಷೆಯ ಆತಂಕದಿಂದ ಖನ್ನತೆಗೆ ಬಲಿಯಾಗುತ್ತಿದ್ದಾರೆ. ಈ ವಯಸ್ಸಿನಲ್ಲಿ ಆಗುವ ಸಮಸ್ಯಗಳಿಗೆ ಮಾರ್ಗದರ್ಶನ ಬಹಳ ಮುಖ್ಯ. ಆದ್ದರಿಂದ ಈಗ ನೀವು ಶಿಕ್ಷಣ ಪಡೆದು ಗುರಿ ಸಾಧಿಸುವ ಕಡೆ ಗಮನ ಹರಿಸಬೇಕು. ಯಾವುದೇ ಅನಾವಶ್ಯಕ ವಿಷಯಗಳಿಗೆ ಕಿವಿಗೊಡಬೇಡಿ ಎಂದು ತಿಳಿಸಿದರು.
ಯುವ ಪರಿವರ್ತಕಿ ಗೀತಾ, ಕಾಲೇಜಿನ ಉಪನ್ಯಾಸಕರಾದ ಕೇಶವಮೂರ್ತಿ, ಕಾವ್ಯಶ್ರೀ ಇತರರು ಇದ್ದರು. ವಾಣಿಜ್ಯ ಶಾಸ್ತ್ರ ವಿಭಾಗದ ಉಪನ್ಯಾಸಕ ಪ್ರಜ್ವಲ್ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.