ಕಾಳಘಟ್ಟ-ಲಂಬಾಣಿಹಟ್ಟಿ ಈಗ ಪ್ರಿಯಾ ನಗರ!

•ಜಿಲ್ಲಾಧಿಕಾರಿಗಳ ಅಭಿವೃದ್ಧಿ ಕಾರ್ಯ ಮೆಚ್ಚಿ ಅವರ ಹೆಸರನ್ನೇ ಗ್ರಾಮಕ್ಕೆ ಇಟ್ಟ ಜನ •ಗ್ರಾಮ ವಾಸ್ತವ್ಯದಿಂದ ಬದಲಾಯ್ತು ಕುಗ್ರಾಮದ ಚಿತ್ರಣ

Team Udayavani, Jul 3, 2019, 12:31 PM IST

3-July-16

ಚಿತ್ರದುರ್ಗ: 'ಪ್ರಿಯಾ ನಗರ' ಕಂದಾಯ ಗ್ರಾಮದ ಉದ್ಘಾಟನೆಯನ್ನು ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ ನೆರವೇರಿಸಿದರು.

ಚಿತ್ರದುರ್ಗ: ಕುಗ್ರಾಮಗಳಲ್ಲಿ ಜನಪ್ರತಿನಿಧಿಗಳು ಮಾತ್ರವಲ್ಲ, ಅಧಿಕಾರಿಗಳೂ ವಾಸ್ತವ್ಯ ಮಾಡಿ ಅಭಿವೃದ್ಧಿ ಪಡಿಸಬಹುದು ಎಂಬುದನ್ನು ಅನೇಕ ಜಿಲ್ಲಾಧಿಕಾರಿಗಳು ಸಾಧಿಸಿ ತೋರಿಸಿದ್ದಾರೆ. ಅಂಥವರಲ್ಲಿ ಚಿತ್ರದುರ್ಗ ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಕೂಡ ಒಬ್ಬರು.

ಹಿಂದುಳಿದ ಜಿಲ್ಲೆಯಲ್ಲಿ ಅಧಿಕಾರಿಗಳು ಬದ್ಧತೆ ಹಾಗೂ ಪ್ರಾಮಾಣಿಕತೆಯಿಂದ ಕೆಲಸ ಮಾಡಿದರೆ ಜನರ ಮನಸ್ಸಿನಲ್ಲಿ ಚಿರಸ್ಥಾಯಿಯಾಗಿರಬಹುದು ಎಂಬುದನ್ನು ಇವರು ಸಾಧಿಸಿ ತೋರಿಸಿದ್ದಾರೆ. ಜಿಲ್ಲಾಧಿಕಾರಿಯಾಗಿ ಆಗಮಿಸಿದ ನಂತರ ಕಳೆದ ಫೆಬ್ರವರಿ 19 ರಂದು ಜಿಲ್ಲೆಯ ಗಡಿ ಭಾಗವಾದ ಹೊಳಲ್ಕೆರೆ ತಾಲೂಕಿನ ಕುಗ್ರಾಮ ಕಾಳಘಟ್ಟ ಲಂಬಾಣಿಹಟ್ಟಿಯಲ್ಲಿ ಗ್ರಾಮ ವಾಸ್ತವ್ಯ ಮಾಡಿದ್ದರು. ಆ ಕುಗ್ರಾಮದ ಜನರ ಸಮಸ್ಯೆ ಆಲಿಸಿ ಪರಿಹಾರವನ್ನೂ ಕಲ್ಪಿಸಿದರು. ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯದಿಂದ ಕಾಳಘಟ್ಟ ಲಂಬಾಣಿಹಟ್ಟಿಯ ಚಿತ್ರಣವೇ ಬದಲಾಯಿತು. ಇದರಿಂದ ಖುಷಿಯಾದ ಗ್ರಾಮಸ್ಥರು, ಜಿಲ್ಲಾಧಿಕಾರಿಗಳ ಹೆಸರನ್ನೇ ಗ್ರಾಮಕ್ಕೆ ಇಟ್ಟು ಕೃತಜ್ಞತೆ ಅರ್ಪಿಸಿದ್ದಾರೆ. ಜುಲೈ 1 ರಂದು ಗ್ರಾಮದ ನಾಮಕರಣ ಸಮಾರಂಭವೂ ನಡೆದಿದೆ.

ಕಂದಾಯ ಗ್ರಾಮವಾಗಿ ಪರಿವರ್ತಿಸಿದ್ರು: ಗ್ರಾಮದಲ್ಲಿ ಅಭಿವೃದ್ಧಿ ಕಾರ್ಯವನ್ನಷ್ಟೇ ಕೈಗೊಂಡು ಜಿಲ್ಲಾಧಿಕಾರಿಗಳು ಸುಮ್ಮನೆ ಕೂರಲಿಲ್ಲ. ಕಾಳಘಟ್ಟ ಲಂಬಾಣಿಹಟ್ಟಿ ಗ್ರಾಮವನ್ನು ಕಂದಾಯ ಗ್ರಾಮವನ್ನಾಗಿ ಪರಿವರ್ತಿಸಿದರು. ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಗ್ರಾಮಕ್ಕೆ ತಲುಪಲು ಸರಿಯಾದ ರಸ್ತೆಯೇ ಇರಲಿಲ್ಲ. ಹೇಗೋ ಕಷ್ಟ ಪಟ್ಟು ಗ್ರಾಮ ತಲುಪಿದ ಜಿಲ್ಲಾಧಿಕಾರಿಗಳ ಎದುರು ಗ್ರಾಮಸ್ಥರು, ನಮ್ಮ ಗ್ರಾಮಕ್ಕೆ ಸರಿಯಾದ ರಸ್ತೆ ಇಲ್ಲ, ಕುಡಿಯಲು ಶುದ್ಧ ನೀರು ದೊರೆಯುತ್ತಿಲ್ಲ, ಪಿಂಚಣಿ ಸೌಲಭ್ಯವೂ ಸಮರ್ಪಕವಾಗಿಲ್ಲ, ಅಂಗನವಾಡಿ ಕೇಂದ್ರ ಶಿಥಿಲಾವಸ್ಥೆಯಲ್ಲಿದೆ ಎಂಬಿತ್ಯಾದಿ ಸಮಸ್ಯೆಗಳ ಸರಮಾಲೆಯನ್ನೇ ಮುಂದಿಟ್ಟರು.

ಗ್ರಾಮಸ್ಥರ ಅಹವಾಲುಗಳನ್ನು ಸಮಾಧಾನ ಚಿತ್ತದಿಂದ ಆಲಿಸಿದ ಜಿಲ್ಲಾಧಿಕಾರಿಗಳಿಗೆ 212 ಅರ್ಜಿಗಳು ಸಲ್ಲಿಕೆಯಾಗಿದ್ದವು. ಬಹುತೇಕ ಜನರ ಬೇಡಿಕೆ ಗ್ರಾಮಕ್ಕೆ ಮೂಲ ಸೌಲಭ್ಯ ಕಲ್ಪಿಸಿ ಎಂಬುದಾಗಿತ್ತು. ಗ್ರಾಮಸ್ಥರಿಗೆ ಭರವಸೆ ನೀಡಿ ಹಿಂದಿರುಗಿದ ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ದೃಢಸಂಕಲ್ಪ ಮಾಡಿದರು.

ಜಿಲ್ಲಾಡಳಿತದ ವತಿಯಿಂದ ಗ್ರಾಮ ವಾಸ್ತವ್ಯ ಮಾಡಿದ ಮೂರ್‍ನಾಲ್ಕು ತಿಂಗಳಲ್ಲೇ ಕಾಳಘಟ್ಟ ಲಂಬಾಣಿ ಹಟ್ಟಿ ಅಭಿವೃದ್ಧಿ ಪಥದತ್ತ ಸಾಗಿದೆ. ಸುಸಜ್ಜಿತ ಡಾಂಬರ್‌ ರಸ್ತೆ, ಶುದ್ಧ ಕುಡಿಯುವ ನೀರಿನ ಘಟಕ, ಅಂಗನವಾಡಿ ಕಟ್ಟಡ ಕಾಮಗಾರಿ ಆರಂಭಗೊಂಡಿದೆ. ಗ್ರಾಮದ ಅರ್ಹ 50 ಜನರಿಗೆ ಮಾಸಾಶನ ಮಂಜೂರು ಮಾಡಲಾಗಿದ್ದು, ಫಲಾನುಭವಿಗಳಿಗೆ ಹೆಲ್ತ್ ಕಾರ್ಡ್‌ ವಿತರಿಸಲಾಗಿದೆ. ಕೃಷಿಹೊಂಡ ನಿರ್ಮಾಣದಂತಹ ಕಾಮಗಾರಿ ಕೈಗೊಂಡು ಅಭಿವೃದ್ಧಿ ಪರ್ವವನ್ನು ಆರಂಭಿಸಲಾಗಿದೆ.

ಏನೇನು ಅಭಿವೃದ್ಧಿ ಕಾರ್ಯ?: ಕಾಳಘಟ್ಟದಿಂದ ಕಾಳಘಟ್ಟ ಲಂಬಾಣಿಹಟ್ಟಿಗೆ 1.10 ಕೋಟಿ ರೂ. ವೆಚ್ಚದಲ್ಲಿ 2.2 ಕಿಮೀ ಸಂಪರ್ಕ ರಸ್ತೆ, ಸಾಸಲು ಗ್ರಾಮದಿಂದ ಕಾಳಘಟ್ಟ ಲಂಬಾಣಿಹಟ್ಟಿಗೆ 1.10 ಕೋಟಿ ರೂ. ವೆಚ್ಚದಲ್ಲಿ 2.2 ಕಿಮೀ ಕೂಡು ರಸ್ತೆ ಕಾಮಗಾರಿ ಪೂರ್ಣಗೊಂಡಿದೆ. ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಡಿ 10 ಲಕ್ಷ ರೂ. ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, 5 ಲಕ್ಷ ರೂ. ವೆಚ್ಚದಲ್ಲಿ ಶಾಂತಿಸಾಗರದಿಂದ ಗ್ರಾಮಕ್ಕೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.

ಪೈಪ್‌ಲೈನ್‌ ಇತರೆ ಕಾಮಗಾರಿಗೆ 15 ಲಕ್ಷ ರೂ. ಮಂಜೂರು ಮಾಡಲಾಗಿದೆ. 13 ಜನರಿಗೆ ಸಂಧ್ಯಾ ಸುರಕ್ಷಾ ಯೋಜನೆ ಸೌಲಭ್ಯ ಕಲ್ಪಿಸಲಾಗಿದೆ. 29 ಜನರಿಗೆ ವೃದ್ಧಾಪ್ಯ ವೇತನ, ಇಬ್ಬರಿಗೆ ಮನಸ್ವಿನಿ, ಆರು ಫಲಾನುಭವಿಗಳಿಗೆ ವಿಧವಾ ವೇತನ ಮಂಜೂರಾಗಿದೆ. 340 ಫಲಾನುಭವಿಗಳಿಗೆ ಆಯುಷ್ಮಾನ್‌ ಭಾರತ್‌ ಯೋಜನೆಯಡಿ ಹೆಲ್ತ್ ಕಾರ್ಡ್‌ ವಿತರಣೆ, 28 ಫಲಾನುಭವಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಸಾಲ ಸೌಲಭ್ಯ ಒದಗಿಸಲಾಗಿದೆ.

ಟಾಪ್ ನ್ಯೂಸ್

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌

1-cris

Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.