ಕೊಟ್ಟಗ್ಯಾಗ ಜೀವನಾ ನಡದೇತಿ!

Team Udayavani, Sep 12, 2019, 5:45 PM IST

12-Sepctember-20

ಚಿಕ್ಕೋಡಿ: ಹಿರಿಹೊಳೆ ಮಹಾಪೂರದಲ್ಲಿ ನಮ್ಮ ಮನೆಗಳು ಸಂಪೂರ್ಣ ಬಿದ್ದು ಹೋಗಿವೆ. ಸಾಂತ್ವನ ಹೇಳಲು ಬಂದ ಮಂತ್ರಿಗೋಳ, ಆಫೀಸರ್‌ ತಾತ್ಕಾಲಿಕ ಶೆಡ್‌ ಹಾಕಿ ಕೊಡತೀವಿ ಅಂತ ಬರೇ ಸುಳ್ಳ ಹೇಳಿ ಸಮಾಧಾನಪಡಿಸಿ ಹೋದವರು ಮರಳಿ ಬಂದಿಲ್ಲ, ಈಗ ಸಮುದಾಯ ಭವನ, ದನದ ಕೊಟ್ಟಿಗ್ಯಾಗ ನಮ್ಮ ಜೀವನ ನಡೆದಿದೆ ಎಂದು ಸಂತ್ರಸ್ತರು ಮಮ್ಮಲನೆ ಮರುಗುತ್ತಿರುವ ದೃಶ್ಯ ನಿಜಕ್ಕೂ ಕಣ್ಣಿರು ತರಿಸುವಂತಿದೆ.

ಕೃಷ್ಣಾ ನದಿ ಭೀಕರ ಪ್ರವಾಹ ಬಂದು ಅದೆಷ್ಟೋ ಗ್ರಾಮಗಳ ಜನರ ಬದುಕು ಮೂರಾಬಟ್ಟೆ ಮಾಡಿಹೋಗಿದೆ. ಅದರಲ್ಲಿ ಮಾಂಜರಿ ಗ್ರಾಮವೂ ಒಂದು. ಇಲ್ಲಿಯ ನೂರಾರು ಕುಟುಂಬಗಳು ಬೀದಿಗೆ ಬಿದ್ದಿವೆ. ಇಂದಿಗೂ ಮನೆ ಮಠ ಕಳೆದುಕೊಂಡು ಸಂತ್ರಸ್ತರು ಸಮುದಾಯ ಭವನ ಮತ್ತು ದನದ ಕೊಟ್ಟಿಗೆಯಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ. ಆದರೂ ಸರಕಾರ ಮಾತ್ರ ತಾತ್ಕಾಲಿಕ ಶೆಡ್‌ ನಿರ್ಮಿಸಿ ಸಂತ್ರಸ್ತರ ಕಣ್ಣಿರು ಒರೆಸಲು ಮುಂದೆ ಬರುತ್ತಿಲ್ಲ ಎಂಬ ಕೊರಗು ಸಂತ್ರಸ್ತರನ್ನು ಕಾಡತೊಡಗಿದೆ.

ಕಳೆದ ಒಂದು ತಿಂಗಳು ಹಿಂದೆ ಯಾರೂ ಕಂಡರಿಯದ ಭೀಕರ ಪ್ರವಾಹ ಬಂದು ಕೃಷ್ಣಾ ನದಿ ದಡದಲ್ಲಿರುವ ಮಾಂಜರಿ ಗ್ರಾಮದ ಜನರ ಬದುಕನ್ನು ಕಸಿದುಕೊಂಡು ಹೋಗಿದೆ. ಗ್ರಾಮದಲ್ಲಿ ಸುಮಾರು 500 ಕ್ಕೂ ಹೆಚ್ಚಿನ ಮನೆಗಳು ನೆಲಕ್ಕೆ ಉರುಳಿವೆ. ಮತ್ತು ದಲಿತ ಕಾಲೋನಿಯಲ್ಲಿ ವಾಸ ಮಾಡುವ ಸುಮಾರು 100 ಕ್ಕೂ ಹೆಚ್ಚಿನ ಕುಟುಂಬಗಳ ಮನೆಗಳು ಸಂಪೂರ್ಣವಾಗಿ ಬಿದ್ದು ಹೋಗಿವೆ. ಕೆಲ ಸಂತ್ರಸ್ತರು ಸಮುದಾಯ ಭವನದಲ್ಲಿ ಆಶ್ರಯ ಪಡೆದುಕೊಂಡರೆ ಇನ್ನೂ ಕೆಲವರು ದನಗಳ ಕೊಟ್ಟಿಗೆಯಲ್ಲಿ ಆಶ್ರಯ ಪಡೆದುಕೊಂಡು ಸರಕಾರದ ಸಹಾಯ ಹಸ್ತದ ಎದುರು ನೋಡುತ್ತಿದ್ದಾರೆ.

ಗ್ರಾಮದ ಅಂಬೇಡ್ಕರ ಸಮುದಾಯ ಭವನದಲ್ಲಿ ನಾಲ್ಕೈದು ಕುಟುಂಬಗಳು ಅಲ್ಪಸ್ವಲ್ಪ ಜಾಗದಲ್ಲಿ ಸುತ್ತುಕಡೆ ಸೀರೆ ಪರದೆ ಕಟ್ಟಿಕೊಂಡು ಅಷ್ಟರಲ್ಲಿ ಜೀವನ ನಡೆಸುತ್ತಿದ್ದಾರೆ. ಇನ್ನುಳಿದವರು ಗ್ರಾಮದ ದನದ ಕೊಟ್ಟಿಗೆಯಲ್ಲಿ ಆಶ್ರಯ ಪಡೆದುಕೊಂಡು ಜೀವನ ನಡೆಸುತ್ತಿರುವ ಸ್ಥಿತಿ ಪ್ರಾಣಿಗಳಿಗಿಂತ ಕಡೆಯಾಗಿದೆ. ಪ್ರವಾಹದಲ್ಲಿ ಅರ್ಧಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಮನೆಗಳು ಬಿದ್ದು ಹೋಗಿದ್ದವು. ಆದರೂ ಜಗ್ಗದ ಸಂತ್ರಸ್ತರು ಬಿದ್ದಿರುವ ಮನೆಯಲ್ಲಿಯೇ ಹೊಸ ಬದುಕು ಕಟ್ಟಿಕೊಳ್ಳಲು ಎಲ್ಲ ರೀತಿಯ ಕಸರತ್ತು ನಡೆಸಿದರು. ಆದರೆ ಆ ವಿಧಿ ಇವರನ್ನು ಮತ್ತೆ ಸಂಕಷ್ಟಕ್ಕೆ ದೂಡುತ್ತ ಹೋಗಿದೆ. ಕಳೆದ ನಾಲ್ಕೈದು ದಿನಗಳ ಹಿಂದೆಯಷ್ಟೇ ಮತ್ತೆ ಮಳೆ ಸುರಿದು ಮನೆಗಳು ಸಂಪೂರ್ಣವಾಗಿ ಕುಸಿಯುವ ಹಾಗೆ ಮಾಡಿದೆ.

ತಾತ್ಕಾಲಿಕ ಶೆಡ್‌ ಬೇಕು: ಪ್ರವಾಹದಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ರಾಜ್ಯ ಸರಕಾರ ತಾತ್ಕಾಲಿಕವಾಗಿ ಶೆಡ್‌ ನಿರ್ಮಿಸಿ ಕೊಡಲಿದೆ ಎಂಬ ಭರವಸೆಯ ಮಾತುಗಳೇ ಹೆಚ್ಚಾಗಿವೆ. ಆದರೆ ಇನ್ನೂವರಿಗೂ ಒಂದೂ ಕುಟುಂಬಕ್ಕೆ ಒಂದು ತಾತ್ಕಾಲಿಕ ಶೆಡ್‌ ನಿರ್ಮಾಣವಾಗಿಲ್ಲ ಎಂಬುದು ಅಲ್ಲಿಯ ಸಂತ್ರಸ್ತರ ಅಳಲು. ಸರಕಾರ ಹಂತ ಹಂತವಾಗಿ ಮನೆ ನಿರ್ಮಿಸಿಕೊಡಲಿ. ಆದರೆ ಈಗ ಕುಟುಂಬದ ಜೊತೆ ಜೀವನ ನಡೆಸಲು ತಾತ್ಕಾಲಿಕ ಶೆಡ್‌ ನಿರ್ಮಿಸಿ ಕೊಡಬೇಕೆಂಬುದು ನಮ್ಮ ಬೇಡಿಕೆಯಾಗಿದೆ ಎನ್ನುತ್ತಾರೆ ಸಂತ್ರಸ್ತ ಮಹಾದೇವ ಇರ್ಯಾಯಿ.

ಸಮನ್ವಯತೆ ಕೊರತೆ: ಪ್ರವಾಹದಿಂದ ಕೋಟ್ಯಂತರ ರೂ. ಹಾನಿಯಾಗಿದೆ. ಎಲ್ಲ ಕಡೆ ಸಮೀಕ್ಷೆ ನಡೆದಿದೆ. ಆದರೆ ಮಾಂಜರಿ ಗ್ರಾಮದಲ್ಲಿ ಮನೆಗಳ ಸಮೀಕ್ಷೆ ಕಾರ್ಯ ನಡೆದಿಲ್ಲ, ಕಂದಾಯ ಇಲಾಖೆ ಮತ್ತು ಗ್ರಾಪಂ ನಡುವೆ ಮುಸುಕಿನ ಗುದ್ದಾಟ ನಡೆದಿದೆ. ಕಂದಾಯ ಇಲಾಖೆ ಅಧಿಕಾರಿಗಳನ್ನು ಸಂಪರ್ಕ ಮಾಡಿದರೆ ಪಂಚಾಯತ್‌ ಅಧಿಕಾರಿಗಳನ್ನು ಕೇಳಿ ಎನ್ನುತ್ತಾರೆ. ಅವರನ್ನು ಕೇಳಿದರೆ ತಹಶೀಲ್ದಾರರನ್ನು ಕೇಳಿ ಎನ್ನುವ ಮೂಲಕ ಕಂದಾಯ ಮತ್ತು ಪಂಚಾಯತ್‌ ಅಧಿಕಾರಿಗಳು ನಮ್ಮನ್ನು ಬೀದಿಗೆ ತಳ್ಳಿದ್ದಾರೆ ಎನ್ನುವುದು ಸಂತ್ರಸ್ತರ ಆಕ್ರೋಶ.

ಟಾಪ್ ನ್ಯೂಸ್

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

shindhe

Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು

Champions Trophy: If Modi’s visit to Pakistan was right, then Team India should also go: Tejaswi Yadav

Champions Trophy: ಮೋದಿ ಪಾಕ್‌ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

16-cm

Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Yuva rajkumar’s Ekka movie muhurtha

Ekka: ಯುವ ರಾಜಕುಮಾರ್‌ ಹೊಸ ಸಿನಿಮಾ ʼಎಕ್ಕʼ ಮುಹೂರ್ತ

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.