ಕ್ರೆಡಿಟ್ ಕಾರ್ಡ್ ಮರುನೋಂದಣಿ ನೆಪದಲ್ಲಿ 1.37 ಲ.ರೂ. ವಂಚನೆ
Team Udayavani, May 4, 2023, 5:30 AM IST
ಮಂಗಳೂರು: ಕ್ರೆಡಿಟ್ ಕಾರ್ಡ್ ಮರುನೋಂದಣಿ ನೆಪದಲ್ಲಿ ಲಿಂಕ್ ಕಳುಹಿಸಿ ವ್ಯಕ್ತಿಯೋರ್ವರಿಗೆ 1.37 ಲ.ರೂ. ವಂಚಿಸಲಾಗಿದೆ.
ದೂರುದಾರರ ಇಮೇಲ್ ಐಡಿಗೆ ಮೇ 1ರಂದು [email protected] ಇ-ಮೇಲ್ ಐಡಿಯಿಂದ Netflix Order Failed-action needed ಎಂಬ ಸಂದೇಶ ಬಂದಿತ್ತು. ಅದನ್ನು ತೆರೆದಾಗ ಅದರಲ್ಲಿ “ನಿಮ್ಮ ಕ್ರೆಡಿಟ್ ಕಾರ್ಡ್ ವಿಫಲವಾಗಿದೆ. ಅದನ್ನು ರಿ ರಿಜಿಸ್ಟರ್ ಮಾಡಬೇಕು’ ಎಂದು ಬರೆಯಲಾಗಿತ್ತು.
ಅದರ ಜತೆಗೆ ಲಿಂಕ್ ಕಳುಹಿಸಲಾಗಿತ್ತು. ದೂರುದಾರ ಆ ಲಿಂಕ್ ತೆರೆದು ನೋಡಿದಾಗ ಅದರಲ್ಲಿ ಕ್ರೆಡಿಟ್ ಕಾರ್ಡ್ ವಿವರಗಳನ್ನು ಹಾಕುವಂತೆ ತಿಳಿಸಲಾಗಿತ್ತು. ಅದನ್ನು ನಂಬಿದ ದೂರುದಾರರು ತಮ್ಮ ಕ್ರೆಡಿಟ್ ಕಾರ್ಡ್ ವಿವರಗಳನ್ನು ಅದರಲ್ಲಿ ನಮೂದಿಸಿದ್ದರು. ಅನಂತರ ಅದನ್ನು ವೆರಿಫಿಕೇಶನ್ ಮಾಡಲು ಒಟಿಪಿ ಬಂದಿದ್ದು ಆ ಒಟಿಪಿಯನ್ನು ಹಾಕಿದ್ದರು. ಆ ಕೂಡಲೆ ಅವರ ಕ್ರೆಡಿಟ್ ಕಾರ್ಡ್‌ನಿಂದ 1,37,432 ರೂ. ವರ್ಗಾವಣೆಯಾದ ಬಗ್ಗೆ ಸಂದೇಶ ಬಂದಿದೆ. ಈ ಬಗ್ಗೆ ಮಂಗಳೂರು ನಗರ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.