1 ಕೋ. ರೂ. ರವಾನೆ: ಬೆಂಗಳೂರು ವ್ಯಕ್ತಿ ಸೆರೆ
Team Udayavani, May 18, 2019, 6:01 AM IST
ಮಂಗಳೂರು: ದಾಖಲೆ ಪತ್ರಗಳಿಲ್ಲದೆ ಬೆಂಗಳೂರಿನಿಂದ ಮಂಗಳೂರಿಗೆ ಅಕ್ರಮವಾಗಿ ಒಂದು ಕೋಟಿ ರೂ. ನಗದು ಸಾಗಿಸುತ್ತಿದ್ದ ಮಲ್ಲೇಶ್ವರಂ ನಿವಾಸಿ ಮಂಜುನಾಥ್ (56) ಅವರನ್ನು ಬಂದರು ಪೊಲೀಸರು ಶುಕ್ರವಾರ ಬೆಳಗ್ಗೆ ನಗರದ ಕಾರ್‌ಸ್ಟ್ರೀಟ್‌ನಲ್ಲಿ ಬಂಧಿಸಿದ್ದಾರೆ.
ಶುಕ್ರವಾರ ಬೆಳಗ್ಗೆ ಮಂಗಳೂರಿಗೆ ಆಗಮಿಸಿದ ಮಂಜುನಾಥ್ ಕೈಯಲ್ಲಿ ಬ್ಯಾಗ್ ಹಿಡಿದುಕೊಂಡು ಕಾರ್‌ಸ್ಟ್ರೀಟ್ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದಾಗ ಗಸ್ತು ನಿರತ ಬಂದರು ಠಾಣೆ ಇನ್ಸ್‌ಪೆಕ್ಟರ್ ಗೋವಿಂದರಾಜು ಮತ್ತು ಸಿಬಂದಿ ಬ್ಯಾಗ್ ಪರಿಶೀಲಿಸಿದಾಗ 2,000 ರೂ. ಹಾಗೂ 500 ರೂ. ಮುಖಬೆಲೆಯ ಒಟ್ಟು 1 ಕೋಟಿ ರೂ. ಹಣ ಪತ್ತೆಯಾಯಿತು ಎಂದು ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಸುದ್ದಿಗಾರರಿಗೆ ತಿಳಿಸಿದರು.
ಹಣಕ್ಕೆ ಸಂಬಂಧಿಸಿ ದಾಖಲೆ ಪತ್ರ ತೋರಿಸುವಂತೆ ಹೇಳಿದಾಗ ಯಾವುದೇ ದಾಖಲೆ ಪತ್ರಗಳು ಆತನ ಬಳಿ ಇರಲಿಲ್ಲ. ಸಮರ್ಪಕವಾದ ಉತ್ತರವನ್ನೂ ನೀಡದ ಕಾರಣ ಬಂಧಿಸಲಾಯಿತು. ಬೆಂಗಳೂರಿನ ವ್ಯಕ್ತಿಯೊಬ್ಬರು ನೀಡಿದ ಈ ಹಣವನ್ನು ಮಂಗಳೂರಿನ ವ್ಯಕ್ತಿಯೊಬ್ಬರಿಗೆ ನೀಡಲು ಬಂದಿದ್ದೇನೆ ಎಂದಷ್ಟೇ ಆತತಿಳಿಸಿದ್ದು ಹೆಚ್ಚಿನ ತನಿಖೆ ನಡೆಯುತ್ತಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಎಂದು ಆಯುಕ್ತರು ಹೇಳಿರು.
ಬಿಗು ತಪಾಸಣೆ
ನಗರದಲ್ಲಿ ಅಕ್ರಮವಾಗಿ ಹಣದ ರವಾನೆಯಾಗುತ್ತಿದೆ ಎಂಬ ಮಾಹಿತಿ ಬಂದಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಕಳೆದ 3 ದಿನಗಳಿಂದ ಪೊಲೀಸರು ಬಿಗು ತಪಾಸಣೆ ನಡೆಸುತ್ತಿದ್ದಾರೆ.
2 ವರ್ಷಗಳಲ್ಲಿ 2ನೇ ಪ್ರಕರಣ
ಇತ್ತೀಚಿನ ವರ್ಷಗಳಲ್ಲಿ ನಗರದಲ್ಲಿ ಇಷ್ಟು ದೊಡ್ಡ ಮೊತ್ತದ ನಗದನ್ನು ಅಕ್ರಮವಾಗಿ ಸಾಗಿಸುತ್ತಿದ್ದಾಗ ಪತ್ತೆ ಹಚ್ಚಿರುವ ಎರಡನೇ ಪ್ರಕರಣ ಇದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.