ಮಂಗಳೂರು: ಬಾಲಕಿ ಮೇಲೆ ಅತ್ಯಾಚಾರ; 10 ವರ್ಷ ಜೈಲು
Team Udayavani, Dec 15, 2022, 9:14 PM IST
ಮಂಗಳೂರು: ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದವನಿಗೆ ಇಲ್ಲಿನ ನ್ಯಾಯಾಲಯವು 10 ವರ್ಷ ಕಠಿನ ಜೈಲು ಶಿಕ್ಷೆ ಹಾಗೂ 30 ಸಾವಿರ ರೂ. ದಂಡ ವಿಧಿಸಿ ತೀರ್ಪಿತ್ತಿದೆ.
ಪಚ್ಚನಾಡಿ ವೈದ್ಯನಾಥ ನಗರದ ನವೀನ್ ಅಲಿಯಾಸ್ ನವೀನ್ ಪೂಜಾರಿ ಅಲಿಯಾಸ್ ನವೀನ್ ಸುವರ್ಣ (42) ಶಿಕ್ಷೆಗೊಳಗಾದವ. ಪ್ರಕರಣದಲ್ಲಿ ಇತರ ಮೂವರನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ಖುಲಾಸೆಗೊಳಿಸಲಾಗಿದೆ.
ಪ್ರಕರಣದ ವಿವರ:
ಸಂತ್ರಸ್ತೆ 9ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ವಾಮಂಜೂರು ತಿರುವೈಲಿನ ಸಂದೀಪ್ ಕುಲಾಲ್‌ನೊಂದಿಗೆ ಪ್ರೇಮ ಹೊಂದಿದ್ದಳು. ಅವರಿಬ್ಬರು ಜತೆಯಲ್ಲಿರುವುದನ್ನು ನೋಡಿದ್ದ ನವೀನ್ ಸುವರ್ಣ ಬಾಲಕಿಯ ಈ ವಿಚಾರವನ್ನು ಹೊರಗೆ ತಿಳಿಸುವುದಾಗಿ ಬ್ಲಾಕ್‌ಮೇಲ್ ಮಾಡಿದ್ದ. ಆ. 16 ರಂದು ಮಧ್ಯಾಹ್ನ 2 ಗಂಟೆಗೆ ಆಕೆಯನ್ನು ಬೆದರಿಸಿ ತನ್ನ ಪರಿಚಯದ ಸುಧಾ ಅವರ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ. ಆ ಬಳಿಕ ನಿರಂತರವಾಗಿ ನವೆಂಬರ್ ಕೊನೆಯವರೆಗೂ ಆಗಿಂದಾಗ್ಗೆ ಇದೇ ರೀತಿ ಅತ್ಯಾಚಾರ ಎಸಗಿದ್ದ. ಸುಧಾಗೆ ನವೀನ್‌ನ ಪರಿಚಯವಿದ್ದು, ಕೃತ್ಯಕ್ಕೆ ಸಹಕಾರ ನೀಡಿದ್ದಳೆಂದು ಆರೋಪಿಸಲಾಗಿತ್ತು.
ಇಷ್ಟೇ ಅಲ್ಲದೆ ದಾವಣಗೆರೆಯ ಹರಪನಹಳ್ಳಿ ಮಾಚಿಹಳ್ಳಿ ತಾಂಡಾ ಮೂಲದ ಹಾಗೂ ವಾಮಂಜೂರಿನ ಎಂಜಿನಿಯರಿಂಗ್ ವಿದ್ಯಾರ್ಥಿ ಪುನೀತ್ ಕುಮಾರ್ ಕೂಡಾ ಬಾಲಕಿಯನ್ನು ಬ್ಲಾಕ್‌ಮೇಲ್ ಮಾಡಿ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿತ್ತು. ಬಾಲಕಿ ಗರ್ಭಿಣಿಯಾಗಿದ್ದು, ಆಸ್ಪತ್ರೆಗೆ ಹೋದ ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಅದರಂತೆ ಮಂಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಬಾಲಕಿ ಜತೆ ದೈಹಿಕ ಸಂಪರ್ಕ ಬೆಳೆಸಿದ್ದು, ಸಂದೀಪ್ ಕುಲಾಲ್ ಸಹಿತ ಒಟ್ಟು ನಾಲ್ವರ ಮೇಲೆ ಪೋಕ್ಸೋ ಕೇಸು ದಾಖಲಾಗಿತ್ತು.
ಡಿಎನ್‌ಎ ಪರೀಕ್ಷೆ ಪಾಸಿಟಿವ್:
ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ್ದು, ಆ ಬಳಿಕ ಮಗುವಿನ ಡಿಎನ್‌ಎ ಪರೀಕ್ಷೆ ನಡೆಸಿದಾಗ ಅದು ನವೀನ್ ಸುವರ್ಣನ ಜತೆ ತಾಳೆಯಾಗಿದ್ದು, ಆತ ಅತ್ಯಾಚಾರ ಎಸಗಿದ್ದು ದೃಢಪಟ್ಟಿತ್ತು. ಪ್ರಕರಣದ ತನಿಖೆ ಕೈಗೊಂಡಿದ್ದ ಗ್ರಾಮಾಂತರ ಇನ್‌ಸ್ಪೆಕ್ಟರ್ ಸಿದ್ದನಗೌಡ ಎಚ್. ಬಜಂತ್ರಿ ಅವರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಒಟ್ಟಾರೆ 51 ದಾಖಲೆಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, 21 ಸಾಕ್ಷಿದಾರರನ್ನು ವಿಚಾರಣೆಗೊಳಪಡಿಸಲಾಗಿತ್ತು.
ವಿಚಾರಣೆ ಕೈಗೊಂಡ ಹೆಚ್ಚುವರಿ ಸತ್ರ ನ್ಯಾಯಾಲಯ ಎಫ್‌ಟಿಎಸ್‌ಸಿ-2 (ಪೋಕ್ಸೋ) ನ್ಯಾಯಾಧೀಶ ಕೆ.ಎಂ. ರಾಧಾಕೃಷ್ಣ ಅವರು ಐಪಿಸಿ 376 ಹಾಗೂ ಪೋಕ್ಸೋ ಕಾಯ್ದೆ ಸೆಕ್ಷನ್ 6ರಡಿ ನವೀನ್ ಸುವರ್ಣನಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 30 ಸಾವಿರ ರೂ. ದಂಡ ವಿಧಿಸಿದ್ದರು. ಉಳಿದ ಮೂವರು ಆರೋಪಿಗಳನ್ನು ಖುಲಾಸೆಗೊಳಿಸಿದ್ದಾರೆ. ಸರಕಾರದ ಪರ ಸಾರ್ವಜನಿಕ ಅಭಿಯೋಜಕ ಸಿ. ವೆಂಕಟರಮಣ ಸ್ವಾಮಿ ಅವರು ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
Pushpa 2: ಕಿಸಿಕ್ ಎಂದು ಕುಣಿದ ಶ್ರೀಲೀಲಾ
ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.