11 ಕೋ.ರೂ. ವೆಚ್ಚದಲ್ಲಿ ಕೈಗಾರಿಕಾ ಪ್ರದೇಶದ ಮುಖ್ಯ ರಸ್ತೆ ಉದ್ಘಾಟನೆ
Team Udayavani, Mar 12, 2018, 11:09 AM IST
ಬೈಕಂಪಾಡಿ : ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ 11 ಕೋ.ರೂ. ವೆಚ್ಚದಲ್ಲಿ ಕೆಐಎಡಿಬಿ ರಸ್ತೆಯನ್ನು ವಿಸ್ತರಣೆ, ಕಾಂಕ್ರೀಟ್ ಕಾಮಗಾರಿಯನ್ನು ಶಾಸಕ ಮೊಯಿದಿನ್ ಬಾವಾ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ರಾಜ್ಯದ ಇತಿಹಾಸದಲ್ಲಿಯೇ ಬೈಕಂಪಾಡಿ ಕೈಗಾರಿಕಾ ಪ್ರಾಂಗಣಕ್ಕೆ ದೊಡ್ಡ ಮೊತ್ತ ನೀಡಲಾಗಿದೆ. ಚರಂಡಿ, ಫುಟ್ ಪಾತ್, ಉತ್ತಮ ರಸ್ತೆ ನಿರ್ಮಾಣ ಮಾಡಿ ಕೈಗಾರಿಕಾ ವಲಯದ ಬೆಳವಣಿಗೆಗೆ ಇದು ಪೂರಕವಾಗಲಿದೆ ಎಂದರು. ಮುಂದಿನ ದಿನಗಳಲ್ಲಿ ಕೆಐಎಡಿಬಿ ಕಚೇರಿಯಿಂದ ಅಂಗರಗುಂಡಿ ಮೂಲಕ ಜೋಕಟ್ಟೆ ಮಾಡಿಲ ಸೇತುವೆಯವರೆಗೆ ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು.
ಪರ್ಯಾಯ ರಸ್ತೆ ನಿರ್ಮಾಣ
ವಿಮಾನ ನಿಲ್ದಾಣಕ್ಕೆ ನೇರ ಸಂಪರ್ಕ ರಸ್ತೆ ಉಡುಪಿ, ಸುರತ್ಕಲ್ ಮತ್ತಿತರೆಡೆಗಳಿಂದ ವಿಮಾನ ನಿಲ್ದಾಣಕ್ಕೆ ಆಗಮಿಸುವವರಿಗೆ ಅನುಕೂಲ ಕಲ್ಪಿಸಲು ಜೋಕಟ್ಟೆ ಮಾರ್ಗವಾಗಿ ಕೆಂಜಾರು ವಿಮಾನ ನಿಲ್ದಾಣಕ್ಕೆ ಪರ್ಯಾಯ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗುವುದು. ಇದರಿಂದಾಗಿ ಸುಮಾರು ಐದು ಕಿ.ಮೀ. ಪ್ರಯಾಣ ಕಡಿತವಾಗಲಿದೆ. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿ ಕೊಡಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಉದ್ಯಮಿಗಳಾದ ಹೇಮಂತ್, ನಾಸೀರ್ ಲಕ್ಕಿಸ್ಟಾರ್, ನಝೀರ್, ಅಸ್ಗರ್ ಆಲಿ, ಸದಾಶಿವ ಶೆಟ್ಟಿ, ನವೀನ್ ಶ್ರೀಯಾನ್, ಹಾರೀಸ್, ಇಲ್ಯಾಸ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.