Dakshina Kannada ಜಿಲ್ಲೆಯಲ್ಲಿ 14,840 ಪ್ರಕರಣ ಇತ್ಯರ್ಥ
ದಕ್ಷಿಣ ಕನ್ನಡ, ಉಡುಪಿಯಲ್ಲಿ ರಾಷ್ಟ್ರೀಯ ಲೋಕ ಅದಾಲತ್
Team Udayavani, Sep 10, 2023, 12:26 AM IST
ಮಂಗಳೂರು/ಉಡುಪಿ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಶನಿವಾರ ದಕ್ಷಿಣ ಕನ್ನಡ ಜಿಲ್ಲಾ ಹಾಗೂ ತಾಲೂಕುಗಳ ನ್ಯಾಯಾಲಯಗಳ ಆವರಣದಲ್ಲಿ ಶನಿವಾರ ರಾಷ್ಟ್ರೀಯ ಲೋಕ ಅದಾಲತ್ ನಡೆಯಿತು.
48 ಬೈಠಕ್‌ಗಳು ನಡೆದಿದ್ದು 21,763 ಪ್ರಕರಣಗಳನ್ನು ಪರಿಗಣಿಸಲಾಗಿತ್ತು. ಅದರಲ್ಲಿ 14,840 ಪ್ರಕರಣಗಳು ರಾಜಿಯಾಗಿದ್ದು, 17,97,64,778 ರೂ. ಪರಿಹಾರ ಹಣವನ್ನು ವಸೂಲಿ ಮಾಡಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ನ್ಯಾಯಾಧೀಶರಾದ ರವೀಂದ್ರ ಎಂ. ಜೋಷಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶೋಭಾ ಬಿ.ಜಿ. ತಿಳಿಸಿದ್ದಾರೆ.
ಅದಾಲತ್‌ನಲ್ಲಿ ಸಾರ್ವಜನಿಕರ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿತ ಪ್ರಕರಣಗಳು, ಚೆಕ್ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧಿಕರಣದ ಪ್ರಕರಣಗಳು, ಸಿವಿಲ್ ಪ್ರಕರಣಗಳು, ಆಸ್ತಿ ವಿಭಾಗದ ಪ್ರಕರಣಗಳು ಹಾಗೂ ಇತರ ರಾಜಿಯಾಗಬಹುದಾದ ಪ್ರಕರಣಗಳನ್ನು ಯಾವುದೇ ನ್ಯಾಯಾಲಯದ ಶುಲ್ಕವಿಲ್ಲದೇ ಇತ್ಯರ್ಥಪಡಿಸಲಾಯಿತು.
91 ಲ.ರೂ.ಗೆ ರಾಜಿ ಸಂಧಾನ ಪತ್ರ ಸಲ್ಲಿಸಿದ ವಿಮಾ ಸಂಸ್ಥೆ !
ಉಡುಪಿ: ಅಪಘಾತ ವಿಮಾ ಪರಿಹಾರಕ್ಕೆ ಸಂಬಂಧಪಟ್ಟಂತೆ ಯುನಿವರ್ಸಲ್ ಸೋಂಪೊ ಜನರಲ್ ಇನ್ಶೂರೆನ್ಸ್ ವಿಮಾ ಸಂಸ್ಥೆಯು 91ಲ.ರೂ. ಪರಿಹಾರವನ್ನು ಶನಿವಾರ ನಡೆದ ಲೋಕ ಅದಾಲತ್‌ನಲ್ಲಿ ರಾಜಿ ಮಾಡಿ ರಾಜಿ ಸಂಧಾನ ಪತ್ರವನ್ನು ಸಲ್ಲಿಸಿತು.
ಉಡುಪಿ ನಗರಸಭೆಯ ಉದ್ಯೋಗಿ ಯೊಬ್ಬರು 2021ರ ಜ. 16ರಂದು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಮೃತರ ವಾರಸುದಾರರು ಉಡುಪಿಯ ಪ್ರದಾನ ಸಿವಿಲ್ ಜಡ್ಜ್ ಅವರ ನ್ಯಾಯಾಲಯದಲ್ಲಿ ವಿಮಾ ಪರಿಹಾರ ಕೋರಿ ಅರ್ಜಿ ಸಲ್ಲಿಸಿದ್ದರು. ಅಪಘಾತ ನಡೆಸಿದ ಕಾರಿನ ವಿಮೆಯು ಯುನಿವರ್ಸಲ್ ಸೊಂಪೊ ಜನರಲ್ ಇನ್ಶೂರೆನ್ಸ್ ಸಂಸ್ಥೆಗೆ ಒಳಪಟ್ಟಿತ್ತು. ವಿಮಾ ಸಂಸ್ಥೆಯು ಈ ಪ್ರಕರಣವನ್ನು ಸಂಸ್ಥೆಯ ನ್ಯಾಯವಾದಿಯ ಅಭಿಪ್ರಾಯ ಪಡೆದು ರಾಜಿ ಯೋಗ್ಯ ಪ್ರಕರಣವೆಂದು ತೀರ್ಮಾನಿಸಿ ಅರ್ಜಿದಾರರಿಗೆ ಶೀಘ್ರ ನ್ಯಾಯ ದೊರಕಿಸಿಕೊಡುವಲ್ಲಿ ಯಶಸ್ವಿಯಾಗಿದೆ.
ಅರ್ಜಿದಾರರು ಮತ್ತು ವಿಮಾ ಸಂಸ್ಥೆ ರಾಜಿ ಸಂಧಾನ ಪತ್ರಕ್ಕೆ ಸಹಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಖಾಸಗಿ ವಿಮಾಸಂಸ್ಥೆ ಅಪಘಾತ ವಿಮಾ ಪ್ರಕರಣದಲ್ಲಿ ಇಷ್ಟೊಂದು ದೊಡ್ಡಮಟ್ಟದ ಪರಿಹಾರ ಘೋಷಿಸಿರುವುದು ಉಡುಪಿ ಜಿಲ್ಲಾ ಲೋಕ ಅದಾಲತ್‌ನಲ್ಲಿ ಇದೇ ಮೊದಲ ಪ್ರಕರಣವಾಗಿದೆ ಎಂದು ವಿಮಾ ಸಂಸ್ಥೆಯ ನ್ಯಾಯವಾದಿ ಎಚ್. ಆನಂದ ಮಡಿವಾಳ ತಿಳಿಸಿದ್ದಾರೆ.
ಸಂಧಾನದ ಮೂಲಕ ಒಂದಾದ ಹಿರಿಯ ದಂಪತಿ
ಉಡುಪಿ: ಭಿನ್ನಾಭಿಪ್ರಾಯದಿಂದ ದೂರವಾಗಿದ್ದ 64 ವರ್ಷದ ವ್ಯಕ್ತಿ ಮತ್ತು 52 ವರ್ಷದ ಮಹಿಳೆ ನ್ಯಾಯಾಧೀಶರು ಹಾಗೂ ನ್ಯಾಯವಾದಿಯ ಮಧ್ಯಸ್ಥಿಕೆಯಿಂದ ಮತ್ತೆ ಒಂದಾದ ಘಟನೆ ಅದಾಲತ್‌ನಲ್ಲಿ ನಡೆಯಿತು. ಇವರಿಗೆ ಓರ್ವ ಪುತ್ರ (17) ಹಾಗೂ ಪುತ್ರಿ (21) ಇದ್ದಾರೆ. 2000ರಲ್ಲಿ ಇವರ ಮದುವೆಯಾಗಿದ್ದು, ಕಾರಣಾಂತರಗಳಿಂದ 2021ರಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. 2022ರಲ್ಲಿ ತಿಂಗಳಿಗೆ 10 ಸಾವಿರ ರೂ. ಜೀವನಾಂಶ ನೀಡುವಂತೆ ಕೋರ್ಟ್ ಪತಿಗೆ ಆದೇಶಿಸಿತ್ತು. ಬಳಿಕ ಪ್ರತ್ಯೇಕವಾಗಿ ಪತಿ ಹಾಗೂ ಹೆಂಡತಿ ಮಕ್ಕಳು ವಾಸಮಾಡಿಕೊಂಡಿದ್ದರು. ಈ ನಡುವೆ ಪತ್ನಿಗೆ ಅನಾರೋಗ್ಯ ಇದ್ದ ಕಾರಣ ಕಳೆದ 3 ತಿಂಗಳುಗಳಿಂದ ದಂಪತಿ, ಮಕ್ಕಳು ಒಟ್ಟಿಗೆ ವಾಸಮಾಡಿಕೊಂಡಿದ್ದಾರೆ. ಈ ನಡುವೆ ಅದಾಲತ್‌ನಲ್ಲಿ ಶನಿವಾರ ಸಂಧಾನ ನಡೆದು ಹಿರಿಯ ಜೀವಗಳು ಮತ್ತೆ ಒಂದಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
ಉಮ್ರಾ ಯಾತ್ರೆಗೆ ತೆರಳಿ ವಂಚನೆ : ಸಂತ್ರಸ್ತರನ್ನು ಊರಿಗೆ ಕರೆಸಿಕೊಂಡ ಮೊಯ್ದಿನ್ ಬಾವ
ಜ.6- 9: ಜೋಕಟ್ಟೆ ಲೆವೆಲ್‌ಕ್ರಾಸ್ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.