ಗಮನ ಸೆಳೆದ ಪುರಾತನ ವಸ್ತು ಪ್ರದರ್ಶನ, ಸಾಂಸ್ಕೃತಿಕ ವೈವಿಧ್ಯ

ಹಂಪನಕಟ್ಟೆ: ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿಗೆ 150ರ ಸಡಗರ

Team Udayavani, Feb 6, 2020, 10:11 PM IST

big-31

ಪುರಾತನ ವಸ್ತು ಸಂಗ್ರಹದ ಪ್ರದರ್ಶನವನ್ನು ಡಾ| ಡಿ. ವೀರೇಂದ್ರ ಹೆಗ್ಗಡೆ ಉದ್ಘಾಟಿಸಿದರು.

ಮಹಾನಗರ: ಕರಾವಳಿಯ ಸಹಸ್ರಾರು ವಿದ್ಯಾರ್ಥಿಗಳ ಪಾಲಿಗೆ ಶಿಕ್ಷಣದ ಕಾಶಿಯಂತೆ ವಿದ್ಯಾರ್ಜನೆಗೈದು, ಸಮಾಜದ ವಿವಿಧ ಸ್ತರಗಳಲ್ಲಿ ಅವರನ್ನು ಪ್ರಜ್ವಲಿಸುವಂತೆ ಮಾಡಿದ ನಗರದ ಹಂಪ ನ ಕಟ್ಟೆಯಲ್ಲಿರುವ “ಕೆಂಪು ಕೋಟೆ’ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಗುರುವಾರ 150ರ ವರ್ಷಾಚರಣೆಯ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಕಾಲೇಜಿನಲ್ಲಿ ಕಲಿತ ಸಾವಿರಾರು ಹಳೆ ವಿದ್ಯಾರ್ಥಿಗಳು 150ರ ಸಂಭ್ರಮದಲ್ಲಿ ಪಾಲ್ಗೊಂಡರು. ಹಳೆ ವಿದ್ಯಾರ್ಥಿಗಳು ತಮ್ಮ ಕಾಲೇಜಿನ ದಿನವನ್ನು ನೆನಪು ಮಾಡಿಕೊಂಡು ಗೆಳೆಯರೊಂದಿಗೆ ಅನುಭವ ಹಂಚಿಕೊಂಡರು.

ಆಕರ್ಷಕ ವೇದಿಕೆ
150ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಕೆಂಪುಕೋಟಯನ್ನು ಅದ್ಭುತವಾಗಿ ಸಿದ್ಧಪಡಿಸಲಾಗಿತ್ತು. ಕಾಲೇಜಿನ ಎಲ್ಲ ಕಟ್ಟಡಗಳನ್ನು ವಿದ್ಯುದೀಪಗಳೊಂದಿಗೆ ಜಗಮಗಿಸುವಂತೆ ಮಾಡಲಾಗಿತ್ತು. ಸಭಾ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮಕ್ಕಾಗಿ ವಿ.ವಿ. ಕಾಲೇ ಜಿನ ಹೊರಭಾಗದ ಆವರಣದಲ್ಲಿ ಆಕರ್ಷಕ ವೇದಿಕೆ ನಿರ್ಮಿಸಲಾಗಿತ್ತು. ಗುರು ವಾರ ಸಂಜೆ ಆಕ ರ್ಷಕ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮ ಜರಗಿತು.

ಹೊಸ ಮೆರುಗು ನೀಡಿದ ಪುರಾತತ್ವ ಇಲಾಖೆಯ ವಸ್ತು ಪ್ರದರ್ಶನ
ಕಾಲೇಜಿನ ರವೀಂದ್ರ ಕಲಾಭವನದಲ್ಲಿ ತುಳುನಾಡಿನ ಗತಕಾಲದ ವೈಭವವನ್ನು ಪ್ರಸ್ತುತ ಪಡಿಸುವ ಪುರಾತನ ವಸ್ತು ಸಂಗ್ರಹದ ಪ್ರದರ್ಶನ ಸಂಭ್ರಮಾಚರಣೆಗೆ ಹೊಸ ಮೆರುಗು ನೀಡಿತು. ಕಾಲೇಜಿನ ವಿವಿಧ ವಿಭಾಗಗಳ ವಿದ್ಯಾರ್ಥಿಗಳ ಕೈಚಳ ಕದ ಮಾದರಿಗಳು ಗಮನ ಸೆಳೆದವು.ಗುರುವಾರ ಆರಂಭವಾದ ವಸ್ತು ಪ್ರದರ್ಶನ ಮೂರು ದಿನಗಳ ಕಾಲ ನಡೆಯಲಿದೆ.

ಸಂಸತ್ತಿನ ಮಾದರಿಗಳು
ಸಮಾಜ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪ್ರದರ್ಶನದಲ್ಲಿ ವಿಧಾನಸೌಧ, ಸಂಸತ್ತಿನ ಮಾದರಿಗಳು ಗಮನ ಸೆಳೆಯುತ್ತಿವೆ. ತಿಮಿಂಗಿಲ, ಕಾಡುಕೋಣ, ಆಮೆ, ಕಾಡೆಮ್ಮೆಗಳ ತಲೆಬುರುಡೆಗಳು ಕೂಡ ವಿವಿ ಕಾಲೇಜಿನಲ್ಲಿ ನಡೆಯುತ್ತಿರುವ ಪುರಾತತ್ವ ಇಲಾಖೆಯ ಪ್ರದರ್ಶನದಲ್ಲಿವೆ.

ಕರೆನ್ಸಿ , ಅಂಚೆ ಚೀಟಿ ಪ್ರದರ್ಶನ
ರವೀಂದ್ರ ಕಲಾಭವನದ 10 ಕೊಠಡಿಗಳಲ್ಲಿ ನಡೆಯುತ್ತಿರುವ ಪ್ರದ ರ್ಶ ನದಲ್ಲಿ ತುಳುನಾಡಿನ ಪ್ರಾಚೀನ ವಸ್ತು ಗಳು, ಪೈಟಿಂಗ್‌ ಗಳು, ಸಾವಿರಾರು ಸಂಖ್ಯೆಯ ಹಳೆ ನಾಣ್ಯ- ಕರೆನ್ಸಿಗಳು ಅಂಚೆ ಚೀಟಿಗಳ ವೈವಿಧ್ಯತೆಗಳನ್ನು ಸಂಗ್ರಹದಲ್ಲಿ ಅನಾವರಣ ಗೊಂಡಿದೆ. ವಿದ್ಯಾರ್ಥಿಗಳ ವಿಜ್ಞಾನದ ಮಾದರಿಗಳು, ಭತ್ತದ ಸುಮಾರು 70ರಷ್ಟು ವೈವಿ ಧ್ಯಮಯ ಬೀಜಗಳು, ಕಸದಿಂದ ರಸ, ಬೀಜ ಗಳ ವೈವಿಧ್ಯತೆ, ಹಳೆಯ ಎಂಜಿನ್‌, ಅಳತೆ- ಮಾಪಕಗಳ ಪಳೆಯುಳಿಕೆಗಳು ವಿಜ್ಞಾನ, ಪ್ರಕೃತಿ ಸಾಗಿ ಬಂದ ಹಾದಿಯನ್ನು ಮೆಲುಕು ಹಾಕುವಂತಿದೆ.

ಟಾಪ್ ನ್ಯೂಸ್

PriyankKharge

Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್‌

VIjayendra

MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ

HDK-Chennapattana

By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

jairam 2

Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್‌

1-kashmir

Kashmir; ನಿಲ್ಲದ ಸ್ಥಾನಮಾನ ಗದ್ದಲ: ಸದನದಲ್ಲಿ ಜಟಾಪಟಿ

DK-Shivakuamar

Congress: ಸಿದ್ದರಾಮಯ್ಯ ಮಾಸ್‌ ಲೀಡರ್‌, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

KVK: ಸಾಂಪ್ರದಾಯಿಕ ಭತ್ತ ತಳಿಗಳ ಕ್ಷೇತ್ರೋತ್ಸವ

KVK: ಸಾಂಪ್ರದಾಯಿಕ ಭತ್ತ ತಳಿಗಳ ಕ್ಷೇತ್ರೋತ್ಸವ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

PriyankKharge

Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್‌

VIjayendra

MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ

HDK-Chennapattana

By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

CBI

Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.