ದೀಪಕ್ ಹತ್ಯೆಗೆ 2 ದಿನ ಮೊದಲೇ ಹೊಂಚು
Team Udayavani, Jan 6, 2018, 10:12 AM IST
ಮಂಗಳೂರು: ಕಾಟಿಪಳ್ಳದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತ ದೀಪಕ್ ರಾವ್ ಅವರನ್ನು ಹತ್ಯೆ ಮಾಡಲು ದುಷ್ಕರ್ಮಿಗಳು ಎರಡು ದಿನ ಮೊದಲೇ ಹೊಂಚು ಹಾಕಿದ್ದರಾದರೂ ಕೊನೆಯ ಗಳಿಗೆಯಲ್ಲಿ ವಿಫಲವಾಗಿತ್ತು ಎಂಬ ಸಂಗತಿ ಬೆಳಕಿಗೆ ಬಂದಿದೆ.
ಬುಧವಾರ ಮಧ್ಯಾಹ್ನ 1.15ಕ್ಕೆ ದೀಪಕ್ ರಾವ್ ಕೊಲೆಯಾಗಿದ್ದಾರೆ. ಆದರೆ ಅದಕ್ಕೆ ಎರಡು ದಿನ ಹಿಂದೆಯೇ ಅವರನ್ನು ಕೊಲೆ ಮಾಡುವ ಉದ್ದೇಶದಿಂದ ಆರೋಪಿಗಳು ವಾಹನದಲ್ಲಿ ಆಯುಧಗಳನ್ನು ಹಿಡಿದು ಕೊಂಡು ಕಾಟಿಪಳ್ಳ, ಕೈಕಂಬ ಪ್ರದೇಶದಲ್ಲಿ ಓಡಾಡುತ್ತಿದ್ದರು ಎಂಬ ವಿಚಾರ ನೌಶಾದ್ ಮತ್ತು ಮಹಮದ್ ಇಶಾìನ್ ವಿಚಾರಣೆಯ ವೇಳೆ ಪೊಲೀಸರಿಗೆ ಗೊತ್ತಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಬಂಧಿಸ ಲಾಗಿದ್ದು, ನೌಶಾದ್ ಮತ್ತು ಮಹಮದ್ ಇಶಾìನ್ ಅವರನ್ನು ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಇನ್ನಿಬ್ಬರು ಆರೋಪಿಗಳಾದ ಪಿಂಕಿ ನವಾಜ್ ಮತ್ತು ರಿಜ್ವಾನ್ ಪೊಲೀಸ್ ಕಾರ್ಯಾಚರಣೆ ವೇಳೆ ಪೊಲೀಸರ ಗುಂಡೇಟಿನಿಂದ ಗಾಯ ಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಚೇತರಿಸು ತ್ತಿದ್ದಾರೆ ಎಂದು ಪೊಲೀಸರ ಉನ್ನತ ಮೂಲ ಗಳು ತಿಳಿಸಿವೆ.
ನಾಲ್ವರು ಆರೋಪಿಗಳನ್ನು ಪ್ರತ್ಯೇಕ ವಾಗಿ ಪೊಲೀಸರು ವಿಚಾರಣೆ ನಡೆಸಲು ನಿರ್ಧರಿಸಿದ್ದು, ಚಿಕಿತ್ಸೆ ಪಡೆಯುತ್ತಿರುವ ಆರೋಪಿ ಗಳನ್ನು ಆಸ್ಪತ್ರೆಯಿಂದ ಬಿಡುಗಡೆ ಯಾದ ಬಳಿಕ ಪ್ರತ್ಯೇಕ ವಿಚಾರಣೆ ಮಾಡಲು ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.
ಕೊಲೆಗೆ ಕಾರಣ
ದೀಪಕ್ ರಾವ್ ತನ್ನ ಪರಿಸರದಲ್ಲಿ ಹೆಚ್ಚು ಕ್ರಿಯಾಶೀಲವಾಗಿದ್ದು, ನಾನಾ ಕಾರ್ಯಕ್ರಮಗಳಲ್ಲಿ ಮುಂಚೂಣಿಯಲ್ಲಿ ನಿಂತು ಕಾರ್ಯನಿರ್ವಹಿಸುತ್ತಿದ್ದರು. ಅವರ ಚಟುವಟಿಕೆ, ಕ್ರಿಯಾಶೀಲತೆ ದುಷ್ಕರ್ಮಿಗಳ ಕೆಂಗಣ್ಣಿಗೆ ಕಾರಣವಾಗಿತ್ತು. ದೀಪಕ್ ಕೊಲೆಗೆ ಇದೂ ಒಂದು ಕಾರಣ ಎಂಬ ಅಂಶ ಆರೋಪಿಗಳ ವಿಚಾರಣೆ ವೇಳೆ ಬಹಿರಂಗವಾಗಿದೆ.
ಜನ ಜೀವನ ಸಹಜ ಸ್ಥಿತಿಗೆ
ಕಳೆದ 2 ದಿನಗಳಿಂದ ಅಘೋಷಿತ ಬಂದ್‌ನಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದ ಸುರತ್ಕಲ್, ಕಾಟಿಪಳ್ಳ, ಕೃಷ್ಣಾಪುರ ಪ್ರದೇಶ ಗಳಲ್ಲಿ ಶುಕ್ರ ವಾರ ಜನಜೀವನ ಸಾಮಾನ್ಯ ಸ್ಥಿತಿಗೆ ಬಂದಿದೆ. ಪರಿಸ್ಥಿತಿ ಶಾಂತವಾಗಿದ್ದು, ಅಹಿತಕರ ಘಟನೆ ನಡೆದಿಲ್ಲ. ಆದರೆ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ ದಂತಿದೆ.
ಶುಕ್ರವಾರ ಅಂಗಡಿ ಮುಂಗಟ್ಟುಗಳು ತೆರೆದಿದ್ದು, ಬಸ್ ಸಂಚಾರ ಪುನರಾರಂಭ ಗೊಂಡಿದೆ. ಆದರೆ ಜನರಲ್ಲಿ ಆತಂಕ ದೂರ ವಾಗಿಲ್ಲ. ಸುರತ್ಕಲ್, ಕೃಷ್ಣಾಪುರ, ಕಾಟಿಪಳ್ಳ, ಕೈಕಂಬ, ಸೂರಿಂಜೆ ಮತ್ತಿತರ ಪ್ರದೇಶ ಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತು ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jasprit Bumrah ಬೌಲಿಂಗ್ ಶೈಲಿಯನ್ನೇ ಶಂಕಿಸಿದ ಆಸೀಸ್ ಮಾಧ್ಯಮಗಳು!
Mangaluru: ಎರಡು ಸೈಬರ್ ವಂಚನೆ ಪ್ರಕರಣ: ಸೆನ್ ಪೊಲೀಸರಿಂದ ಇಬ್ಬರ ಬಂಧನ
High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್
Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ
Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್.ಷಡಾಕ್ಷರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.