ಟಿ.ಜಿ.ಹಳ್ಳಿ ಡ್ಯಾಮ್‌ಗೆ 286 ಕೋಟಿ
Team Udayavani, Dec 27, 2018, 11:43 AM IST
ಬೆಂಗಳೂರು: ತಿಪ್ಪಗೊಂಡನಹಳ್ಳಿ ಜಲಾಶಯ ಅಭಿವೃದ್ಧಿಗೆ ಜಲಮಂಡಳಿ 286 ಕೋಟಿ ರೂ. ವೆಚ್ಚದಲ್ಲಿ ವಿವಿಧ ಯೋಜನೆಗಳನ್ನು ರೂಪಿಸಿದ್ದು, 2019ರ ಏಪ್ರಿಲ್‌ನಿಂದ ಕಾಮಗಾರಿಗೆ ಚಾಲನೆ ದೊರೆಯಲಿದೆ.
ತಿಪ್ಪಗೊಂಡನಹಳ್ಳಿ ಜಲಾಶಯವು 3.3 ಟಿಎಂಸಿ ಸಾಮರ್ಥ್ಯ ಹೊಂದಿದ್ದು, ಈ ಹಿಂದೆ ಬೆಂಗಳೂರಿನ ಕುಡಿಯುವ ನೀರಿನ ಮೂಲವಾಗಿತ್ತು. ಕಲುಷಿತ ನೀರು ಹಾಗೂ ಜಲಾಶಯದಲ್ಲಿ ಹೂಳು ತುಂಬಿಕೊಂಡಿದೆ ಎಂಬ ಕಾರಣಕ್ಕೆ ಏಳೇಂಟು ವರ್ಷಗಳ ಹಿಂದೆ ನೀರು ಪೂರೈಕೆ ಸ್ಥಗಿತಗೊಳಿಸಲಾಗಿತ್ತು. ಕಳೆದ ವರ್ಷ ಉತ್ತಮ ಮಳೆಯಾಗಿರುವುದು ಹಾಗೂ ಎತ್ತಿನ ಹೊಳೆ ಯೋಜನೆಯಿಂದ ಜಲಾಶಯಕ್ಕೆ ನೀರು ತರಲು ಸರ್ಕಾರ ಚಿಂತನೆ ನಡೆಸಿರುವುದರಿಂದ ಜಲಾಶಯ ಅಭಿವೃದ್ಧಿಗೆ ಜಲಮಂಡಳಿ ಮುಂದಾಗಿದೆ.
ಒಂದನೇ ಹಂತದ ಕಾಮಗಾರಿಯಲ್ಲಿ ಮೊದಲು ಜಲಾಶಯದಲ್ಲಿ ಸಂಗ್ರಹಗೊಂಡಿ ರುವ 30 ಅಡಿ ಹೂಳು ಮೇಲೆತ್ತಲು 22.7 ಕೋಟಿ ರೂ.ಗಳ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ತಿಪ್ಪಗೊಂಡನಹಳ್ಳಿ ಜಲಾಶಯಕ್ಕೆ ಸೇರುವ ತ್ಯಾಜ್ಯ ನೀರನ್ನು ತಡೆಗಟ್ಟಲು ತ್ಯಾಜ್ಯ ನೀರು ಸಂಸ್ಕರಣಾ ಘಟಕ (ಎಸ್‌ಟಿಪಿ) ನಿರ್ಮಿಸಲಾಗುತ್ತದೆ. ಮುಖ್ಯವಾಗಿ 110 ದಶಲಕ್ಷ ಲೀ. ಸಾಮರ್ಥ್ಯದ ನೀರು ಸಂಸ್ಕರಣಾ ಘಟಕ, 20 ದಶಲಕ್ಷ ಲೀ. ಸಾಮರ್ಥ್ಯದ ಕೊಳಚೆ ನೀರು ಸಂಸ್ಕರಣೆ ಘಟಕಗಳನ್ನು ನಿರ್ಮಾಣ ಮಾಡಲಾಗುತ್ತದೆ. ಆನಂತರ 65.8 ಕೋಟಿ ರೂ. ವೆಚ್ಚದಲ್ಲಿ ತಿಪ್ಪಗೊಂಡನ ಹಳ್ಳಿಯಿಂದ ತಾವರೆಕರೆ ಮೂಲಕ ಬೆಂಗಳೂರಿಗೆ ನೀರುಪೂರೈಕೆ 22 ಕಿ.ಮೀ. ವ್ಯಾಪ್ತಿಯಲ್ಲಿ ಪೈಪ್‌ಲೈನ್ ಅಳವಡಿಕೆ ಆರಂಭಗೊಳ್ಳಲಿದೆ. ಮೊದಲ ಹಂತದ ಕಾಮಗಾರಿ 2019ರ ಏಪ್ರಿಲ್‌ಗೆ ಆರಂಭವಾಗಿ 2021
ಅಕ್ಟೋಬರ್‌ಗೆ ಮುಗಿಯಲಿದೆ ಎಂದು ಜಲಮಂಡಳಿ ಅಧಿಕಾರಿಗಳು ತಿಳಿಸಿದರು.
ಉಪಯೋಗವೇನು?: ತಿಪ್ಪಗೊಂಡನಹಳ್ಳಿ ಜಲಾಶಯ ಅಭಿವೃದ್ಧಿಯಿಂದ ಬೆಂಗಳೂರಿನ ಬಹುಪಾಲು ಕುಡಿಯುವ ನೀರಿನ ಸಮಸ್ಯೆಗೆ ಕಡಿವಾಣ ಬೀಳಲಿದೆ. ಒಂದೆಡೆ ನಗರದ ಜನಸಂಖ್ಯೆ ಹೆಚ್ಚಳವಾಗಿ ಜಲಮಂಡಳಿಯ ಸೇವೆ ದಿನದಿಂದ ದಿನದಕ್ಕೆ ವಿಸ್ತರಣೆಗೊಳ್ಳುತ್ತಿದೆ. ಮುಂದೆ ನೀರಿನ ಕೊರತೆ ಉಂಟಾಗಬಹುದು. ಈ ಕಾರಣಕ್ಕಾಗಿ ಜಲಮಂಡಳಿಯು ಸಹ ಹೆಚ್ಚಿನ ಆಸಕ್ತಿವಹಿಸಿ ಈ ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿದೆ.
ನೀರು ತರುವುದೆಲ್ಲಿಂದ?: ಸರ್ಕಾರ ಕಾರ್ಯಗತಗೊಳಿಸುತ್ತಿರುವ ಎತ್ತಿನಹೊಳೆ ಯೋಜನೆಯ ಮೂಲಕ ಬೆಂಗಳೂರಿಗೆ 2.5 ಟಿಎಂಸಿ ನೀರು ಲಭ್ಯವಾಗಲಿದೆ. ಈ ನೀರಲ್ಲಿ 1.7 ಟಿಎಂಸಿ ನೀರನ್ನು ತಿಪ್ಪಗೊಂಡನಹಳ್ಳಿ ಜಲಾಶಯಕ್ಕೆ ಪೂರೈಸಲು ನಿರ್ಧರಿಸಲಾಗಿದೆ. ಉಳಿದ ನೀರು ಮತ್ತು ಹೆಸರುಘಟ್ಟ ಕೆರೆಯಲ್ಲಿ ಸಂಗ್ರಹವಾಗಲಿದೆ. ಎತ್ತಿನಹೊಳೆ ನೀರು ಬರುವಷ್ಟರಲ್ಲಿ ತಿಪ್ಪಗೊಂಡನಗಳ್ಳಿ ಕೆರೆ ಸ್ಪತ್ಛಗೊಳಿಸಿ ಇತರೆ ಸಿದ್ಧತೆ ಮಾಡಿಕೊಳ್ಳಬೇಕಿದೆ. ಉಳಿದಂತೆ ಈ ಜಲಾಶಯ ಮಳೆ ನೀರನ್ನೇ ಆಶ್ರಯಿಸಲಾಗಿದೆ.
ಈ ಯೋಜನೆಗೆ ಕೆಯುಐಡಿಎಫ್‌ಸಿ ಯಿಂದ ಶೇ.50ರಷ್ಟು, ರಾಜ್ಯ ಸರ್ಕಾರ ಶೇ. 25ರಷ್ಟು ಹಾಗೂ ಜಲಮಂಡಳಿಯ ತನ್ನ ಆದಾಯದಿಂದ ಶೇ.25ರಷ್ಟು ಯೋಜನಾ ಮೊತ್ತವನ್ನು ಅಭಿವೃದ್ಧಿಗಾಗಿ ವ್ಯಯಮಾಡಲಿದೆ. ಇನ್ನು ಈ ಎಲ್ಲಾ ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆ ಆರಂಭವಾಗಿದೆ. ಇನ್ನು ಎರಡನೇ ಹಂತದಲ್ಲಿ ಹೆಸರುಘಟ್ಟ ಕೆರೆಯನ್ನು 120
ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿ ಪಡಿಸುವ ಗುರಿಯನ್ನು ಹೊಂದಲಾಗಿದೆ. ಒಟ್ಟಾರೆ ಈ ಎರಡೂ ಯೋಜನೆಗೆ 406 ಕೋಟಿ ರೂ. ವೆಚ್ಚವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.