ಕುಟ್ರಾಪ್ಪಾಡಿ ಗ್ರಾ.ಪಂ.ಗೆ 2ನೇ ಬಾರಿ ಗಾಂಧಿ ಗ್ರಾಮ ಪುರಸ್ಕಾರ

ಅನುದಾನ ಸಮರ್ಪಕ ಬಳಕೆ, ಬಯಲು ಬಹಿರ್ದೆಸೆ ಮುಕ್ತ ಗ್ರಾಮ, ನೈರ್ಮಲ್ಯಕ್ಕೆ ಆದ್ಯತೆ

Team Udayavani, Sep 26, 2019, 5:48 AM IST

2509KDB1

ಕಡಬ: ಪುತ್ತೂರು ತಾ.ಪಂ. ವ್ಯಾಪ್ತಿಯಲ್ಲಿ ಬರುವ ಕುಟ್ರಾಪ್ಪಾಡಿ ಗ್ರಾಮ ಪಂಚಾಯತ್‌ 2018-19ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದೆ. ಕಳೆದ ವರ್ಷವೂ ಕುಟ್ರಾಪ್ಪಾಡಿ ಗ್ರಾ.ಪಂ. ಗಾಂಧಿ ಗ್ರಾಮ ಪುರಸ್ಕಾರ ಪಡೆದಿತ್ತು.

ಗ್ರಾಮೀಣ ಅಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಒಟ್ಟು ಸಾಧನೆಯನ್ನು ಪರಿಗಣಿಸಿ ಪಂಚಾಯತ್‌ ರಾಜ್‌ ಮತ್ತು ಗ್ರಾಮೀಣ ಅಭಿವೃದ್ಧಿ ಇಲಾಖೆ ಈ ಪುರಸ್ಕಾರವನ್ನು ನೀಡುತ್ತಿದೆ. ಅ. 2ರಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮುಖ್ಯಮಂತ್ರಿ ಗ್ರಾ.ಪಂ. ಅಧ್ಯಕ್ಷರು ಹಾಗೂ ಅಭಿವೃದ್ಧಿ ಅಧಿಕಾರಿಗೆ ಈ ಪುರಸ್ಕಾರವನ್ನು ನೀಡಲಿದ್ದು, ಪುರಸ್ಕಾರವು 5 ಲಕ್ಷ ರೂ. ನಗದು ಬಹುಮಾನ, ಸ್ಮರಣಿಕೆ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ. ರಾಜ್ಯದ ಪ್ರತೀ ತಾಲೂಕಿನ ಒಂದು ಪಂಚಾಯತ್‌ಗೆ ಪ್ರತೀ ವರ್ಷ ಗಾಂಧಿ ಜಯಂತಿ ಸಂದರ್ಭ ಈ ಪುರಸ್ಕಾರ ನೀಡಲಾಗುತ್ತಿದೆ.

2018-19ನೇ ಸಾಲಿನಲ್ಲಿ ಗ್ರಾ.ಪಂ. ಸ್ವಂತ ಸಂಪನ್ಮೂಲಗಳ ಕ್ರೋಡೀàಕರಣ, ಅನುದಾನಗಳ ಸಮರ್ಪಕ ಬಳಕೆ, ಜಮಾಬಂದಿ, ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೂಲಿ ಪಾವತಿ, ಮೂಲ ಸೌಕರ್ಯ ವ್ಯವಸ್ಥೆ, ಗ್ರಾ.ಪಂ. ವಿವಿಧ ಸಭೆಗಳು, ವಸತಿ ಯೋಜನೆ, ನೈರ್ಮಲೀಕರಣ, ಸ್ವತ್ಛತೆ, ನಗದು ರಹಿತ ವ್ಯವಹಾರ ಜಾರಿ, ಕಚೇರಿಗೆ ಸಂಪೂರ್ಣ ಸೋಲಾರ್‌ ವ್ಯವಸ್ಥೆ ಕಲ್ಪಿಸಿ ರುವುದು, ವಿದ್ಯುತ್‌ ಬಿಲ್‌ ಸಂಪೂರ್ಣ ಪಾವತಿಸಿ ಉಳಿಕೆ ಅನುದಾನವನ್ನು ಗ್ರಾ.ಪಂ.ಗೆ ಬಳಸಿಕೊಂಡಿರುವುದು, ಸಕಾಲ ಸೇವೆ ಒದಗಿಸಿರುವುದು ಸಹಿತ ಗ್ರಾ.ಪಂ. ಅಳವಡಿಸಿಕೊಂಡ ವಿಶೇಷ ವಿಧಾನ ಆಧರಿಸಿ ಪುರಸ್ಕಾರ ನೀಡಲಾಗುತ್ತಿದೆ.

ಸಮಾಜಮುಖೀ ಕಾರ್ಯ
ಪ್ರತಿ ಗ್ರಾ.ಪಂ.ಗಳು ಪಂಚತಂತ್ರ ತಂತ್ರಾಂಶದ ಮೂಲಕ ಉತ್ತರಿಸಲು ಗ್ರಾ.ಪಂ. ಸ್ವತ್ಛತೆಗೆ ಹೆಚ್ಚಿನ ಪ್ರಾಧಾನ್ಯವನ್ನು ನೀಡಿದ್ದು, ಪ್ರತಿ ತಿಂಗಳ ಒಂದು ರವಿವಾರ ಸ್ವತ್ಛ ಕುಟ್ರಾಪಾಡಿ ಎಂಬ ಧ್ಯೇಯ ವಾಕ್ಯದೊಂದಿಗೆ ಸ್ವತ್ಛತಾ ಕಾರ್ಯವನ್ನು ನಡೆಸುತ್ತಿದೆ. ಅದರಲ್ಲಿ ಗ್ರಾಮಸ್ಥರನ್ನು ತೊಡಗಿಸಿಕೊಳ್ಳುವಂತೆ ಮಾಡಲು ಗ್ರಾ.ಪಂ.ನಿಂದ ವಾಟ್ಸ್‌ ಆ್ಯಪ್‌ ತಂಡವನ್ನು ರಚಿಸಲಾಗಿದ್ದು, ಗ್ರಾಮಸ್ಥರಿಂದ ಸಲಹೆ ಸೂಚನೆಗಳನ್ನು ಪಡೆಯಲಾಗುತ್ತಿದೆ. ಗ್ರಾ.ಪಂ. ಸರ್ವ ಸದಸ್ಯರು, ಸಂಘ ಸಂಸ್ಥೆಗಳು, ಗ್ರಾಮಸ್ಥರು ಈ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಗ್ರಾ.ಪಂ. ವ್ಯಾಪ್ತಿಯಲ್ಲಿ ಸಂಪೂರ್ಣ ಪ್ಲಾಸ್ಟಿಕ್‌ ನಿಷೇಧಿಸಲಾಗಿದ್ದು, ಪ್ಲಾಸ್ಟಿಕ್‌ ಬಳಕೆಯ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ.

ಉತ್ತಮ ಕೆಲಸಕ್ಕೆ ಸಂದ ಪ್ರಶಸ್ತಿ
ಗಾಂಧಿ ಗ್ರಾಮ ಪುರಸ್ಕಾರಕ್ಕೆ ತಾಲೂಕಿನಿಂದ ಸತತ 2ನೇ ಬಾರಿ ಕುಟ್ರಾಪ್ಪಾಡಿ ಗ್ರಾ.ಪಂ. ಆಯ್ಕೆಗೊಂಡಿರುವುದು ಗ್ರಾಮದ ಜನತೆ ಹಾಗೂ ಪಂಚಾಯತ್‌ಗೆ ಹೆಮ್ಮೆಯ ವಿಷಯ. ಪಂಚಾಯತ್‌ನಲ್ಲಿ ಆಡಳಿತಾತ್ಮಕವಾಗಿ ಉತ್ತಮ ಕೆಲಸಗಳು ನಡೆದು ಜನರ ಸಮಸ್ಯೆಗಳಿಗೆ ಶೀಘ್ರ ಸ್ಪಂದ‌ನೆ ದೊರೆತಿದೆ. ಪಂಚಾಯತ್‌ನ ಅಧಿಕಾರಿ ವರ್ಗ ಹಾಗೂ ಆಡಳಿತ ಮಂಡಳಿಯ ಹೊಂದಾಣಿಕೆ, ಜನರ ಸಹಕಾರದಿಂದಾಗಿ ಉತ್ತಮ ಕೆಲಸಗಳು ನಡೆದು ಪ್ರಶಸ್ತಿ ದೊರೆತಿದೆ.
– ವಿದ್ಯಾ ಕೆ. ಗೋಗಟೆ,
ಅಧ್ಯಕ್ಷೆ, ಕುಟ್ರಾಪ್ಪಾಡಿ ಗ್ರಾ.ಪಂ.

ಸಮರ್ಪಕ ಅಭಿವೃದ್ಧಿ
ಅನುದಾನಗಳನ್ನು ಸರಕಾರದ ಮಾರ್ಗಸೂಚಿಯಂತೆ ಸಮರ್ಪಕ ರೀತಿಯಲ್ಲಿ ಬಳಸಿಕೊಂಡು ಗ್ರಾಮದ ಅಭಿವೃದ್ಧಿ ಮಾಡಲಾಗಿದೆ. ಮುಖ್ಯವಾಗಿ ಪಂಚಾಯತ್‌ ಅಧ್ಯಕ್ಷರು, ಸದಸ್ಯರು, ಸಿಬಂದಿ ಹಾಗೂ ಗ್ರಾಮಸ್ಥರ ಸಂಘಟಿತ ಮುತುವರ್ಜಿಯಿಂದಾಗಿ ಅಭಿವೃದ್ಧಿ ಕಾರ್ಯಗಳನ್ನು ನಡೆಸಿರುವುದು ಪ್ರಶಸ್ತಿ ಲಭಿಸಲು ಪೂರಕವಾಗಿತ್ತು. ಪ್ರಶಸ್ತಿ ಇನ್ನಷ್ಟು ಉತ್ತಮ ಕೆಲಸ ಮಾಡಲು ನಮಗೆ ಸ್ಫೂರ್ತಿಯಾಗಿದೆ.
– ವಿಲ್ಫೆಡ್‌ ಲಾರೆನ್ಸ್‌ ರೋಡ್ರಿಗಸ್‌
ಪಿಡಿಒ, ಕುಟ್ರಾಪ್ಪಾಡಿ ಗ್ರಾ.ಪಂ.

ಟಾಪ್ ನ್ಯೂಸ್

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

High-Court

High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

Nagendra-ED

Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ

CS-Shadakshari

Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್‌.ಷಡಾಕ್ಷರಿ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Puttur: ಟೆಂಪೋ-ಬೈಕ್‌ ನಡುವೆ ಅಪಘಾತ

Puttur: ಟೆಂಪೋ-ಬೈಕ್‌ ನಡುವೆ ಅಪಘಾತ

Belthangady: ವಿದ್ಯುತ್‌ ಲೈನ್‌ ಮೇಲೆ ಬಿದ್ದ ಮರ: ಬೆಂಕಿ

Belthangady: ವಿದ್ಯುತ್‌ ಲೈನ್‌ ಮೇಲೆ ಬಿದ್ದ ಮರ: ಬೆಂಕಿ

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

High-Court

High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

Nagendra-ED

Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ

CS-Shadakshari

Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್‌.ಷಡಾಕ್ಷರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.