325 ಕೆ.ಜಿ. ಶ್ರೀಗಂಧದ ತುಂಡುಗಳ ಕಳವು

ಬೆಳ್ತಂಗಡಿ ಅರಣ್ಯ ಇಲಾಖೆ ಗೋದಾಮಿನ ಬೀಗ ಮುರಿದ ಕಳ್ಳರು

Team Udayavani, Jul 14, 2019, 10:36 AM IST

sandal

ಬೆಳ್ತಂಗಡಿ: ಇಲ್ಲಿನ ಸಂತೆಕಟ್ಟೆ ಬಳಿಯಿರುವ ಅರಣ್ಯ ಇಲಾಖೆ ಗೋದಾಮಿನ ಬೀಗ ಮುರಿದು 8.60 ಲಕ್ಷ ರೂ. ಮೌಲ್ಯದ 325 ಕೆ.ಜಿ. ಶ್ರೀಗಂಧದ ತುಂಡುಗಳನ್ನು ಕಳವು ಮಾಡಿರುವ ಘಟನೆ ಶನಿವಾರ ಬೆಳಕಿಗೆ ಬಂದಿದೆ.

ಅರಣ್ಯ ಇಲಾಖೆಯವರು ವಿವಿಧ ಪ್ರಕರಣಗಳಲ್ಲಿ ವಶಕ್ಕೆ ಪಡೆದ ಶ್ರೀಗಂಧ ಮರದ ತುಂಡುಗಳನ್ನು ಭದ್ರತೆಯ ಗೋದಾಮಿನಲ್ಲಿ ದಾಸ್ತಾನಿರಿಸುತ್ತಿದ್ದು, ಕಳವು ವಿಚಾರ ಅನುಮಾನಕ್ಕೆ ಕಾರಣವಾಗಿದೆ.

ಶ್ರೀಗಂಧದ ತುಂಡುಗಳ ಜತೆಗೆ ಇಲಾಖೆಯ ತಡೆಬೇಲಿ ತಂತಿಗಳನ್ನೂ ದಾಸ್ತಾನಿರಿಸಲಾಗಿದೆ. ಶನಿವಾರ ಸಿಬಂದಿಯೊಬ್ಬರು ತಂತಿಗಳನ್ನು ತೆಗೆಯುವುದಕ್ಕೆ ತೆರಳಿದಾಗ ಬೀಗ ಮುರಿ ದಿದ್ದು, ಶ್ರೀಗಂಧದ ತುಂಡು ಗಳು ಕಳವಾಗಿರುವುದು ತಿಳಿದುಬಂದಿದೆ.

ಜು. 2ರಂದು ಇಲಾಖೆಯ ಸಿಬಂದಿ ಕೊನೆಯ ಬಾರಿಗೆ ಗೋದಾಮಿನ ಬೀಗ ತೆರೆದು ತಂತಿ ಬೇಲಿಯನ್ನು ತೆಗೆದಿದ್ದು, ಬಳಿಕ ಅದರೊಳಗೆ ಯಾರೂ ಪ್ರವೇಶಿಸಿಲ್ಲ. ಕಳ್ಳರು ಬೀಗವನ್ನು ತುಂಡು ಮಾಡಿ ಒಳಗೆ ಪ್ರವೇಶಿಸಿದ್ದು, ಬಳಿಕ ಯಾರ ಗಮನಕ್ಕೂ ಬಾರದಂತೆ ಗಮ್ಮಿನ ಮೂಲಕ ಅಂಟಿಸಿದ್ದಾರೆ. ಘಟನೆಯು ಒಂದು ವಾರದ ಮುಂಚೆ ನಡೆದಿರುವ ಸಾಧ್ಯತೆ ಇದೆ. ಗಂಧ ತುಂಡುಗಳನ್ನು ಕಾಂಪೌಡಿನ ಹೊರಗೆ ಸಾಗಿಸಿ ಬಳಿಕ ವಾಹನದ ಮೂಲಕ ಕೊಂಡೊಯ್ದಿರ‌ಬೇಕು ಎಂದು ಪೊಲೀಸರು ತಿಳಿಸಿದ್ದಾರೆ.

ಫಾರೆಸ್ಟರ್‌ ನಿವಾಸದ ಸಮೀಪದಲ್ಲೇ ಕೃತ್ಯ
ಬೆಳ್ತಂಗಡಿ ಫಾರೆಸ್ಟರ್‌ ಅವರ ವಸತಿ ಗೃಹ ಗೋದಾಮಿನ ಪಕ್ಕದಲ್ಲಿದ್ದು, ಅವರು ಕಳೆದ ಕೆಲವು ದಿನಗಳ ಹಿಂದೆ ರಜೆಯ ಮೇಲೆ ಊರಿಗೆ ತೆರಳಿದ್ದು, ಕಳ್ಳರು ಅವರು ಇಲ್ಲದಿರುವ ಮಾಹಿತಿ ತಿಳಿದುಕೊಂಡೇ ಕಳವು ಮಾಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಗೋದಾಮಿನಲ್ಲಿ ಸುಮಾರು 400 ಕೆಜಿಯಷ್ಟು ಶ್ರೀಗಂಧ ದಾಸ್ತಾನಿದ್ದು, ಅದರಲ್ಲಿ 75 ಕೆಜಿಯಷ್ಟು ಅಲ್ಲೇ ಇವೆ ಎಂದು ಅರಣ್ಯಾಧಿಕಾರಿ ಮಾಹಿತಿ ನೀಡಿದ್ದಾರೆ.

ಇಲಾಖೆಯ ಮಾಹಿತಿಯ ಮೇರೆಗೆ ಬೆಳ್ತಂಗಡಿ ಪೊಲೀಸ್‌ ಸರ್ಕಲ್‌ ಇನ್ಸ್‌ಪೆಕ್ಟರ್‌ ಸಂದೇಶ್‌ ಪಿ.ಜಿ. ಅವರು ಜಿಲ್ಲಾ ಪೊಲೀಸ್‌ ವರಿಷ್ಠಾಧಿ ಕಾರಿಗಳಿಗೆ ಘಟನೆಯ ಮಾಹಿತಿ ನೀಡಿದ್ದು, ಅವರ ನಿರ್ದೇಶನದಂತೆ ಪ್ರಕರಣ ದಾಖಲಿಸಿ ಕೊಂಡು ತನಿಖೆಯ ನಡೆಸುತ್ತಿದ್ದಾರೆ. ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಸುಬ್ಬಯ್ಯ ನಾಯ್ಕ ಅವರು ಡಿಎಫ್‌ಒಗೆ ಘಟನೆಯ ಕುರಿತು ವಿವರಿಸಿದ್ದಾರೆ. ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

2

Uppinangady: ನೇಜಿಕಾರ್‌ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ

1(1

Sullia: ಮುಳುಗಿದ ಅಂಗನವಾಡಿಗೆ ಹೊಸ ಜಾಗ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

3(2

Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

2

Uppinangady: ನೇಜಿಕಾರ್‌ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.