4.85 ಕೋಟಿ ರೂ. ವೆಚ್ಚದಲ್ಲಿ ಸಮುದಾಯ ಆಸ್ಪತ್ರೆ ಕಟ್ಟಡ
Team Udayavani, Dec 9, 2017, 4:34 PM IST
ಕಡಬ: ಇನ್ನು ಕೆಲವೇ ದಿನಗಳಲ್ಲಿ ಕಡಬ ತಾಲೂಕು ಕೇಂದ್ರವಾಗಲಿದೆ. ಆದರೆ, ಎಂಟು ವರ್ಷಗಳಿಂದ ಹೆಸರಿಗಷ್ಟೇ ಸಮುದಾಯ ಆರೋಗ್ಯ ಕೇಂದ್ರವಾಗಿದ್ದ ಇಲ್ಲಿನ ಆಸ್ಪತ್ರೆಗೆ ಈಗ 30 ಹಾಸಿಗೆಗಳ ಸುಸಜ್ಜಿತ ಕಟ್ಟಡ 4.85 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ಕಾಮಗಾರಿ ಬಿರುಸಿನಿಂದ ನಡೆದಿದೆ.
ತಾಲೂಕು ಕೇಂದ್ರವಾಗುತ್ತಿರುವ ಕಡಬ ಪಟ್ಟಣದಲ್ಲಿ ಸಮುದಾಯ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿರುವ ಸರಕಾರಿ ಆಸ್ಪತ್ರೆಗೆ 30 ಹಾಸಿಗೆಗಳ ಸುಸಜ್ಜಿತ ಕಟ್ಟಡದ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಎಂಟು ವರ್ಷಗಳ ಹಿಂದೆ 6 ಹಾಸಿಗೆಗಳ ಪ್ರಾಥಮಿಕ ಆರೋಗ್ಯ ಕೇಂದ್ರವಾಗಿದ್ದ ಇದು, 30 ಹಾಸಿಗೆಗಳ ಸಮುದಾಯ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿದೆ. 4.85 ಕೋಟಿ ರೂ. ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಾಣ ಕಾಮಗಾರಿ ಬಿರುಸಿನಿಂದ ನಡೆಯುತ್ತಿದೆ.
ಸುಸಜ್ಜಿತ ಆಸ್ಪತ್ರೆಯಾಗಲಿದೆ
ಮೊದಲು ಆರು ಹಾಸಿಗೆಗಳ ಪ್ರಾಥಮಿಕ ಆರೋಗ್ಯ ಕೇಂದ್ರವಾಗಿದ್ದ ಈ ಆಸ್ಪತ್ರೆಯನ್ನು ಸರಕಾರ ಎಂಟು ವರ್ಷಗಳ ಹಿಂದೆಯೇ ಸಮುದಾಯ ಆರೋಗ್ಯ ಕೇಂದ್ರವಾಗಿ ಘೋಷಿಸಿತ್ತು. ನಾಮಫಲಕದಲ್ಲಿ ಸಮುದಾಯ ಆರೋಗ್ಯ ಕೇಂದ್ರವೆಂದು ಹೆಸರು ಬದಲಾದರೂ ಆಸ್ಪತ್ರೆಯಲ್ಲಿ ಇದ್ದುದು ಆರು ಹಾಸಿಗೆಗಳ ಸೌಲಭ್ಯ ಮಾತ್ರ. ದಿನಂಪ್ರತಿ ಸುಮಾರು 300ಕ್ಕೂ ಹೆಚ್ಚು ಹೊರರೋಗಿಗಳು ಚಿಕಿತ್ಸೆಗಾಗಿ ಬರುವ ಈ ಆಸ್ಪತ್ರೆಯನ್ನು ಬಿಟ್ಟರೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಜನರು ಪುತ್ತೂರು ಮತ್ತು ಮಂಗಳೂರಿಗೆ ತೆರಳಬೇಕಾದ ಅನಿವಾರ್ಯತೆ ಇದೆ. ದ.ಕ. ಜಿಲ್ಲೆಯ ಕಡಬ, ಧರ್ಮಸ್ಥಳ, ಉಪ್ಪಿನಂಗಡಿ ಸಹಿತ 24 ಕಡೆಗಳಲ್ಲಿದ್ದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಅಗತ್ಯ ಹೆಚ್ಚುವರಿ ಹುದ್ದೆಗಳ ಸಹಿತ 30 ಹಾಸಿಗೆಗಳ ಸಮುದಾಯ ಆರೋಗ್ಯ ಕೇಂದ್ರಗಳಾಗಿ ಪರಿವರ್ತಿಸಲು 2007ರಲ್ಲೇ ಮಂಜೂರಾತಿ ನೀಡಿತ್ತು.
ಕಡಬ ಆಸ್ಪತ್ರೆಗೆ ಪ್ರಸೂತಿ ತಜ್ಞರು, ಶಿಶು ತಜ್ಞರು ಸಹಿತ ನಾಲ್ವರು ವೈದ್ಯಾಧಿಕಾರಿಗಳು, ಒಬ್ಬರು ದಂತ ವೈದ್ಯರು ಸೇರಿ ಒಟ್ಟು 34 ಹುದ್ದೆಗಳು ಮಂಜೂರಾಗಿವೆ. ಹಾಲಿ ಇರುವ ಹುದ್ದೆಗಳನ್ನು ಹೊರತುಪಡಿಸಿ ಉಳಿದವನ್ನು ಕಟ್ಟಡ ಕಾಮಗಾರಿ ಶೇ. 60ರಷ್ಟು ಪೂರ್ಣಗೊಂಡ ಮೇಲೆ ಭರ್ತಿ ಮಾಡಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿತ್ತು. ಕಟ್ಟಡ ಕಾಮಗಾರಿ ಶೀಘ್ರದಲ್ಲಿ ಮುಗಿದು, ತಜ್ಞ ವೈದ್ಯರ ನೇಮಕವಾಗಿ ಸವಲತ್ತುಗಳು ಸಿಕ್ಕರೆ, ಈ ಪರಿಸರದ ಜನರಿಗೆ ಪ್ರಯೋಜನವಾಗಬಹುದು. ಬೆಂಗಳೂರಿನ ಸ್ಟಾರ್ ಬಿಲ್ಡರ್ಸ್ ಆ್ಯಂಡ್ ಡೆವಲಪರ್ ಕಂಪೆನಿಯು ನಿರ್ಮಾಣ ಕಾಮಗಾರಿಯ ಗುತ್ತಿಗೆ ವಹಿಸಿಕೊಂಡಿದ್ದು, 2018ರ ಫೆಬ್ರವರಿ ತಿಂಗಳ ಕೊನೆಗೆ ಕಾಮಗಾರಿ ಪೂರ್ತಿಗೊಳಿಸುವ ಗುರಿ ಇದೆ.
8 ಗ್ರಾಮಗಳ ವ್ಯಾಪ್ತಿ
ಕಡಬ, ಕೋಡಿಂಬಾಳ, ಬಂಟ್ರ, 102ನೇ ನೆಕ್ಕಿಲಾಡಿ, ಕುಟ್ರಾಪ್ಪಾಡಿ, ಬಲ್ಯ, ನೂಜಿಬಾಳ್ತಿಲ ಹಾಗೂ ರೆಂಜಿಲಾಡಿ – ಈ 8 ಗ್ರಾಮಗಳ ವ್ಯಾಪ್ತಿಯನ್ನು ಕಡಬ ಆಸ್ಪತ್ರೆ ಹೊಂದಿದೆ. ಆದರೆ ಹತ್ತಿರದ ಕುಂತೂರು, ಆಲಂಕಾರು, ಕೊಂಬಾರು, ಸಿರಿಬಾಗಿಲು, ಐತ್ತೂರು, ಕೊಣಾಜೆ, ಕಾಣಿಯೂರು, ಚಾರ್ವಾಕ, ಸುಳ್ಯ ತಾಲೂಕಿನ ಸುಬ್ರಹ್ಮಣ್ಯ, ಪಂಜ, ಏನೆಕಲ್, ಬಳ್ಪ, ಕೇನ್ಯ, ಎಡಮಂಗಲ ಪ್ರದೇಶದ ಜನರೂ ಇದೇ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬರುತ್ತಿರುವುದರಿಂದ ವ್ಯಾಪ್ತಿ ವಿಸ್ತರಿಸಿದೆ .
ಸವಲತ್ತುಗಳು ಸಿಗಲಿವೆ
ಕಡಬದಲ್ಲಿ ಸಮುದಾಯ ಆಸ್ಪತ್ರೆಗೆ ಸುಸಜ್ಜಿತ ಕಟ್ಟಡ ಹಾಗೂ ಅಗತ್ಯ ಸವಲತ್ತುಗಳನ್ನು ನೀಡುವುದು ನಮ್ಮ ಮೊದಲ ಗುರಿ. ಮುಂದಿನ ದಿನಗಳಲ್ಲಿ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಕಚೇರಿಗಳು ಇಲ್ಲಿ ಆರಂಭಗೊಳ್ಳಲಿವೆ. ಆರೋಗ್ಯ ಇಲಾಖೆಯ ತಾಲೂಕು ಮಟ್ಟದ ಸೌಲಭ್ಯಗಳೂ ಲಭಿಸಲು ಕಾಲಾವಕಾಶದ ಅಗತ್ಯವಿದೆ. ಹಂತ ಹಂತವಾಗಿ ಕಡಬಕ್ಕೂ ತಾಲೂಕು ಆಸ್ಪತ್ರೆಯ ಮಾನ್ಯತೆ ಹಾಗೂ ಸವಲತ್ತುಗಳು ಸಿಗಲಿವೆ.
– ಡಾ| ರಾಮಕೃಷ್ಣ ರಾವ್,
ಜಿಲ್ಲಾ ಆರೋಗ್ಯಾಧಿಕಾರಿ
ನಾಗರಾಜ್ ಎನ್.ಕೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.