ಪಾಳುಬಿದ್ದ ಬಂಗಲೆ ದುರಸ್ತಿಗೆ 5 ಲಕ್ಷ ರೂ.!

Team Udayavani, Sep 30, 2018, 10:12 AM IST

30-sepctember-2.gif

ಕಡಬ: ಸುಮಾರು 8 ದಶಕಗಳ ಇತಿಹಾಸವನ್ನು ಹೊಂದಿರುವ ಕಡಬದ ಪ್ರವಾಸಿ ಬಂಗಲೆ ಸಂಬಂಧಪಟ್ಟವರ ನಿರ್ಲಕ್ಷ್ಯ ಧೋರಣೆಯಿಂದ ಕೆಲವು ವರ್ಷಗಳಿಂದ ನಿರ್ವಹಣೆಯಿಲ್ಲದೆ ಸಂಪೂರ್ಣ ಶಿಥಿಲಗೊಂಡಿದ್ದು, ಕಾಯಕಲ್ಪಕ್ಕಾಗಿ ಕಾಯುತ್ತಿದೆ.

ಚಟುವಟಿಕೆಯ ತಾಣವಾಗಿತ್ತು
ಒಂದು ಕಾಲದಲ್ಲಿ ಅತ್ಯಂತ ಚಟುವಟಿಕೆಯ ತಾಣವಾಗಿದ್ದ ಈ ಪ್ರವಾಸಿ ಬಂಗಲೆ ಇದೀಗ ಯಾವುದೇ ಚಟುವಟಿಕೆಗಳಿಲ್ಲದೆ ಅನಾಥವಾಗಿದೆ. ಸಮುದಾಯ ಆಸ್ಪತ್ರೆಯ ಆವರಣದಲ್ಲಿರುವ ಈ ಕಟ್ಟಡ ಆರಂಭದಲ್ಲಿ ವೈದ್ಯಾಧಿಕಾರಿಗಳ ವಸತಿ ಗೃಹವಾಗಿತ್ತು. ಪುತ್ತೂರು ಬಿಡಿಒ ಕಚೇರಿ ಇದರ ನಿರ್ವಹಣೆಯನ್ನು ನೋಡಿಕೊಳ್ಳುತ್ತಿತ್ತು. ಅನಂತರ 2 ಕೊಠಡಿಗಳನ್ನು ಸೇರಿಸಿ ಪುನಶ್ಚೇತನಗೊಳಿಸಿ ಈ ಕಟ್ಟಡವನ್ನು ಪ್ರವಾಸಿ ಬಂಗಲೆಯಾಗಿ ಪರಿವರ್ತಿಸಲಾಗಿತ್ತು. ಇತ್ತೀಚಿನ ಕೆಲ ವರ್ಷಗಳಲ್ಲಿ ತಾ.ಪಂ., ಗ್ರಾ.ಪಂ. ಆಡಳಿತ ಇದರ ನಿರ್ವಹಣೆಯ ಹೊಣೆ ಹೊತ್ತು ಕೊಂಡಿತಾದರೂ ಈಗ ಈ ಕಟ್ಟಡವನ್ನು ಯಾರೂ ಕೇಳುವವರಿಲ್ಲದಂತಾಗಿದೆ.

ಭೂತ ಬಂಗಲೆಯಂತಿದೆ
ಉಪಯೋಗವಿಲ್ಲದೆ ಪಾಳುಬಿದ್ದಿರುವ ಈ ಕಟ್ಟಡ ಈಗ ಭೂತ ಬಂಗಲೆ ಯಂತೆ ಕಂಡುಬರುತ್ತಿದೆ. ಆವರಣ ಗೋಡೆ ಕುಸಿದುಬಿದ್ದಿರುವ ಈ ಪ್ರದೇಶವನ್ನು ಸಾರ್ವಜನಿಕರು ತಮ್ಮ ದೇಹಬಾಧೆ ತೀರಿಸಿಕೊಳ್ಳಲು ಉಪಯೋಗಿಸುತ್ತಿರುವುದರಿಂದಾಗಿ ಈ ಪರಿಸರ ಬಯಲು ಶೌಚಾಲಯವಾಗಿ ಮಾರ್ಪಟ್ಟಿದೆ. ಗಬ್ಬು ನಾರುತ್ತಿರುವ ಹಾಸಿಗೆಗಳು, ಪೀಠೊಪಕ ರಣಗಳು, ಸೋಫಾಗಳು, ಅಸಹ್ಯ ಉಂಟು ಮಾಡುವ ಶೌಚಾಲಯಗಳು, ಜೇಡರ ಬಲೆ, ಬಿರುಕು ಬಿಟ್ಟಿರುವ ಗೋಡೆಗಳು, ವಿದ್ಯುತ್‌ ಉಪಕರಣಗಳು ಸ್ತಬ್ದಗೊಂಡಿದೆ. ಮೂಲತಃ ಸರಕಾರಿ ಸಮುದಾಯ ಆಸ್ಪತ್ರೆಗೆ ಸೇರಿದ ಈ ಕಟ್ಟಡವನ್ನು ಮತ್ತೆ ಆಸ್ಪತ್ರೆಯ ಉಪಯೋಗಕ್ಕೆ ನೀಡಬೇಕೆಂದು ಈ ಹಿಂದೆ ಜಿಲ್ಲಾ ಆರೋಗ್ಯಾಧಿಕಾರಿಯವರ ಮುಖಾಂತರ ಜಿ.ಪಂ.ಗೆ ಮನವಿ ಸಲ್ಲಿಸಲಾಗಿತ್ತು. ಜಿ.ಪಂ.ಸಿಇಒ ಈ ನಿಟ್ಟಿನಲ್ಲಿ ಪೂರಕವಾಗಿ ಸ್ಪಂದಿಸಿದ್ದರೂ ಯಾವುದೇ ಲಿಖಿತ ಆದೇಶ ನೀಡದಿರುವುದರಿಂದಾಗಿ ಯಾವುದೇ ಪ್ರಯೋಜನವಾಗಿಲ್ಲ.

ಮತ್ತೆ ಚಟುವಟಿಕೆಯ ತಾಣವಾಗಲಿ
ಪೇಟೆಯ ಹೃದಯ ಭಾಗದಲ್ಲಿರುವ ಈ ಕಟ್ಟಡದಲ್ಲಿ ಯಾವುದಾದರೊಂದು ಪ್ರಮುಖ ಇಲಾಖೆಯ ಕಚೇರಿ ತೆರೆಯುವ ಅವಕಾಶವಿದೆ. ಇದೀಗ ಕಟ್ಟಡವನ್ನು ದುರಸ್ತಿಗೊಳಿಸಿ ತಾ| ಮಟ್ಟದ ಯಾವುದಾದರೂ ಸರಕಾರಿ ಕಚೇರಿಗೆ ಬಳಸಿಕೊಳ್ಳುವು ಉದ್ದೇಶದಿಂದ 5 ಲಕ್ಷ ರೂ. ಗಳ ಅಂದಾಜುಪಟ್ಟಿ ತಯಾರಿಸಲಾಗಿದೆ. ಕಡಬವು ಪೂರ್ಣಪ್ರಮಾಣದ ತಾಲೂಕು ಕೇಂದ್ರವಾಗಿ ರೂಪುಗೊಳ್ಳುವುದರೊಂದಿಗೆ ನಿರುಪಯುಕ್ತವಾಗಿರುವ ಈ ಕಟ್ಟಡ ಮತ್ತೆ ಚಟುವಟಿಕೆಯ ತಾಣವಾಗಿ ಸಾರ್ವಜನಿಕರಿಗೆ ಪ್ರಯೋಜನಕ್ಕೆ ಬರಲಿ ಎನ್ನುವುದು ಎಲ್ಲರ ಆಶಯವಾಗಿದೆ.

ಅಂದಾಜು ಪಟ್ಟಿ 
ಪ್ರವಾಸಿ ಮಂದಿರವನ್ನು ದುರಸ್ತಿಗೊಳಿಸಿ ಮತ್ತೆ ಉಪಯೋಗಕ್ಕೆ ಸಿದ್ಧಗೊಳಿಸುವ ಪ್ರಕ್ರಿಯೆಗೆ ಚಾಲನೆ ದೊರೆತಿದೆ. ಶಿಥಿಲಗೊಂಡಿರುವ ಗೋಡೆ ಹಾಗೂ ಛಾವಣಿಯನ್ನು ದುರಸ್ತಿಗೊಳಿಸಿ ಸುಸ್ಥಿತಿಗೆ ತರಲು ಜಿ.ಪಂ.ಎಂಜಿನಿಯರಿಂಗ್‌ ವಿಭಾಗದ ಅಧಿಕಾರಿಗಳು 5 ಲಕ್ಷ ರೂ.ಗಳ ಅಂದಾಜುಪಟ್ಟಿ ತಯಾರಿಸಿದ್ದಾರೆ. ಕಟ್ಟಡದ ಆವರಣವನ್ನು ಶುಚಿಗೊಳಿಸಿ ನೀರು ನಿಲ್ಲದಂತೆ ಮಣ್ಣು ಹಾಕಿ ಎತ್ತರಿಸಿ ಸ್ವಲ್ಪ ಭಾಗಕ್ಕೆ ಇಂಟರ್‌ಲಾಕ್‌ ಅಳವಡಿಸಲು ಚಿಂತಿಸಲಾಗಿದೆ. ಶೀಘ್ರದಲ್ಲಿ ದುರಸ್ತಿ ಕಾರ್ಯ ಆರಂಭಿಸುವ ಪ್ರಯತ್ನದಲ್ಲಿದ್ದೇವೆ.
– ಪಿ.ಪಿ. ವರ್ಗೀಸ್‌,
ಜಿ.ಪಂ. ಸದಸ್ಯರು, ಕಡಬ ಕ್ಷೇತ್ರ

. ನಾಗರಾಜ್‌ ಎನ್‌.ಕೆ.

ಟಾಪ್ ನ್ಯೂಸ್

BGT: Another shock for Team India; After Virat and Rahul, another batsman is injured

BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್‌, ರಾಹುಲ್‌ ಬಳಿಕ ಮತ್ತೊಬ್ಬ ಬ್ಯಾಟರ್‌ ಗೆ ಗಾಯ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Kota-Shrinivas

Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ

BGT: Another shock for Team India; After Virat and Rahul, another batsman is injured

BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್‌, ರಾಹುಲ್‌ ಬಳಿಕ ಮತ್ತೊಬ್ಬ ಬ್ಯಾಟರ್‌ ಗೆ ಗಾಯ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.