ಹುಂಡಿಯಲ್ಲಿ ಕೂಡಿಟ್ಟ ಪಾಕೆಟ್ ಮನಿಯನ್ನು ಪರಿಹಾರ ನಿಧಿಗೆ ಕೊಟ್ಟ 5 ವರ್ಷದ ಬಾಲಕ
Team Udayavani, Apr 2, 2020, 3:19 PM IST
ಮಂಗಳೂರು: ಕೋವಿಡ್-19 ಸೋಂಕಿನ ವಿರುದ್ಧದ ಹೋರಾಟಕ್ಕೆ ಬಹಳಷ್ಟು ಮಂದಿ ದೇಣಿಗೆ ನೀಡುತ್ತಿದ್ದಾರೆ. ಕ್ರೀಡಾಪಟುಗಳು, ಚಿತ್ರ ನಟರು, ಗಣ್ಯ ವ್ಯಕ್ತಿಗಳು ದೊಡ್ಡ ಮಟ್ಟದ ದೇಣಿಗೆಗಳನ್ನು ನೀಡುತ್ತಿದ್ದಾರೆ. ಆದರೆ ಐದು ವರ್ಷದ ಬಾಲಕನೊಬ್ಬ ತಾನು ಕೂಡಿಟ್ಟ ಪಾಕೆಟ್ ಮನಿಯನ್ನೇ ಪರಿಹಾರ ನಿಧಿಗೆ ನೀಡಿ ಮೆಚ್ಚುಗೆಗೆ ಪಾತ್ರನಾಗಿದ್ದಾನೆ.
ಮಂಗಳೂರು ಫಳ್ನೀರ್ ನ ಅತಾ-ವುರ್-ರೆಹ್ಮಾನ್ ಎಂಬ ಐದು ವರ್ಷದ ಬಾಲಕ ತಾನು ಹುಂಡಿಯಲ್ಲಿ ಸಂಗ್ರಹಿಸಿದ್ದ ಹಣವನ್ನು ಜಿಲ್ಲಾಧಿಕಾರಿಯವರ ಮೂಲಕ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದಾನೆ.
ಇಂದು ಪೋಷಕರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಅತಾ-ವುರ್- ರಹ್ಮಾನ್ ಜಿಲ್ಲಾಧಿಕಾರಿಯವರಿಗೆ ಹಣ ವರ್ಗಾಯಿಸಿದ್ದಾರೆ.
ಭಟ್ಕಳ ಮೂಲದವರಾದ ಅತಾ-ವುರ್-ರೆಹ್ಮಾನ್ ಕುಟುಂಬದವರು ಈಗ ಮಂಗಳೂರಿನ ಫಳ್ನೀರ್ ನಲ್ಲಿ ನೆಲೆಸಿದ್ದಾರೆ. ಅತಾ-ವುರ್-ರೆಹ್ಮಾನ್ ಮಂಗಳೂರಿನ ಯನೆಪೊಯ ಮೊಂಟೆಸ್ಸರಿ ಶಾಲೆಯಲ್ಲಿ ಕಲಿಯುತ್ತಿದ್ದಾನೆ. ಇದೀಗ ಈ ಪುಟ್ಟ ಬಾಲಕನ ಈ ಕಳಕಳಿಗೆ ಎಲ್ಲೆಡೆಯಿಂದ ಶ್ಲಾಘನೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Kannada Cinema: ‘ನಾ ನಿನ್ನ ಬಿಡಲಾರೆ’ ಟ್ರೇಲರ್ ಬಂತು: ನ.29ಕ್ಕೆ ಸಿನಿಮಾ ತೆರೆಗೆ
Sagara: ಕರವೇ ತಾಲೂಕು ಅಧ್ಯಕ್ಷರ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.