Mangaluru; 60 ಲಕ್ಷ ರೂ. ಮೌಲ್ಯದ ಸೊತ್ತುಗಳ ಕಳವು: ಮ್ಯಾನೇಜರ್ ವಿರುದ್ದ ದೂರು
Team Udayavani, Aug 19, 2023, 9:19 PM IST
ಮಂಗಳೂರು: ನಗರದ ಎಂ.ಜಿ. ರಸ್ತೆಯ ಕಟ್ಟಡ ಕಾಮಗಾರಿ ಸ್ಥಳದಿಂದ ಸುಮಾರು 60 ಲಕ್ಷ ರೂ. ಮೌಲ್ಯದ ಸೊತ್ತುಗಳು ಕಳವಾದ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಂಪಾರ್ ಕನ್ಸ್ಟ್ರಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯಲ್ಲಿ ಶೇಖರ್ ಎಂಬಾತ ಸುಮಾರು 19 ವರ್ಷಗಳಿಂದ ಕೆಲಸ ನಿರ್ವಹಿಸಿಕೊಂಡಿದ್ದ. ಕಂಪೆನಿಯ ವತಿಯಿಂದ ನಿರ್ಮಾಣ ಮಾಡುತ್ತಿರುವ ಎಂ.ಜಿ. ರಸ್ತೆಯಲ್ಲಿರುವ ಜನತಾ ಕನ್ಸ್ಟ್ರಕ್ಷನ್ಸ್ರವರ ಮಾಲಕತ್ವದ ಕಾಮಗಾರಿಯ ಪ್ರೊಜೆಕ್ಟ್ ಜನರಲ್ ಮ್ಯಾನೇಜರ್ ಹಾಗೂ ಸೈಟ್ ಇನ್ಚಾರ್ಜ್ ಆಗಿದ್ದ. ಅನಂತರ ಕಾಮಗಾರಿ ಕಾರಣಾಂತರಗಳಿಂದ ಅರ್ಧಕ್ಕೆ ನಿಂತು ಹೋದ ಮೇಲೆ ಕಂಪೆನಿಗೆ ಸಂಬಂಧಿಸಿದ ಕಟ್ಟಡ ನಿರ್ಮಾಣ ಸಾಮಾಗ್ರಿಗಳು ಅದೇ ಸೈಟ್ನಲ್ಲಿ ಇದ್ದವು.
ಶೇಖರ್ 2023ನೇ ಜನವರಿಯಲ್ಲಿ ಕಂಪೆನಿಯ ಗಮನಕ್ಕೆ ಬಾರದ ಹಾಗೆ ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಸುಮಾರು 60 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿ ಕಂಪೆನಿಗೆ ನಷ್ಟ ಮಾಡಿದ್ದಾನೆ ಎಂದು ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.