ಕರಾವಳಿಯಲ್ಲಿ 61 ದಿನ ಮೀನುಗಾರಿಕೆ ನಿಷೇಧ
Team Udayavani, May 24, 2023, 10:04 AM IST
ಮಂಗಳೂರು/ಉಡುಪಿ: ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು ಅಥವಾ ಸಾಧನಗಳನ್ನು ಉಪಯೋಗಿಸಿ ಎಲ್ಲ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟರೀ ಕೃತ ದೋಣಿ ಹಾಗೂ ಸಾಂಪ್ರ ದಾಯಿಕ ದೋಣಿಗಳ ಮೂಲಕ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1ರಿಂದ ಜುಲೈ 31ರ ವರೆಗೆ ಒಟ್ಟು 61 ದಿನಗಳ ಕಾಲ ನಿಷೇಧಿಸಲಾಗಿದೆ.
ದೋಣಿಯನ್ನು ಸಾಗಿಸುವ ಉದ್ದೇಶ ಕ್ಕಾಗಿಯೇ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ಎಂಜಿನ್ ಹಾಗೂ ಸಾಂಪ್ರದಾಯಿಕ ಮತ್ತು ನಾಡದೋಣಿಗಳಲ್ಲಿ ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿದೆ.
ಮೀನುಗಾರಿಕೆ ನಿಷೇಧದ ಸರಕಾರದ ಆದೇಶವನ್ನು ಉಲ್ಲಂಘಿಸುವ ದೋಣಿಗಳು ಮತ್ತು ಮೀನು ಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ-1986ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೆ ಒಂದು ವರ್ಷದ ಅವಧಿಗೆ ಡೀಸೆಲ್ ಮೇಲಿನ ಸಹಾಯಧನ ಪಡೆಯಲು ಅನರ್ಹರಾಗುತ್ತಾರೆ.
ಕರಾವಳಿಯ ಎಲ್ಲ ಮೀನುಗಾರರ ಹಿತದೃಷ್ಟಿ ಯನ್ನು ಗಮನದಲ್ಲಿಟ್ಟುಕೊಂಡು ಹೊರಡಿಸಿರುವುದರಿಂದ ಎಲ್ಲ ಮೀನು ಗಾರರು ಈ ಆದೇಶವನ್ನು ಪಾಲಿಸಿ ಸರಕಾರದೊಂದಿಗೆ ಸಹಕರಿಸುವಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranga Chavadi: ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ
Kateel: ತಾರಾನಾಥ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು… ಅಕ್ಕನಿಂದಲೇ ಕೊಲೆಯಾದ ತಮ್ಮ
ಮಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ: ದಂಪತಿ ಸಹಿತ ಆರೋಪಿಗಳಿಗೆ ಮುಂದುವರಿದ ನ್ಯಾಯಾಂಗ ಬಂಧನ
Mangaluru: ಸಿಸಿಬಿ ಪೊಲೀಸರ ಕಾರ್ಯಾಚರಣೆ… ಅಪಾರ ಪ್ರಮಾಣದ ಮಾದಕ ವಸ್ತು ಸಹಿತ ಓರ್ವನ ಸೆರೆ
Mangaluru: ನೇತ್ರಾವತಿ ಸೇತುವೆ ಬಳಿ ಬೈಕ್ ಅಪಘಾತ… ಓರ್ವ ಮೃತ್ಯು, ಮತ್ತೋರ್ವ ಗಂಭೀರ
MUST WATCH
ಹೊಸ ಸೇರ್ಪಡೆ
Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.