ಪ್ರವಾಸೋದ್ಯಮಕ್ಕೆ 7 ಕೋ.ರೂ. ಬಿಡುಗಡೆ: ಡಾ| ಭರತ್ ಶೆಟ್ಟಿ
Team Udayavani, Jan 20, 2020, 2:05 AM IST
ಪಣಂಬೂರು: ಗೋವಾ, ಕೇರಳಗಳಂತೆ ಕರ್ನಾಟಕದಲ್ಲೂ ಉತ್ತಮ ಸಮುದ್ರ ತೀರದ ತಾಣಗಳಿದ್ದು, ಅಭಿವೃದ್ಧಿ ಪಡಿಸಿ ಪ್ರವಾಸೋ ದ್ಯಮಕ್ಕೆ ಉತ್ತೇಜನ ನೀಡಲು ಸರಕಾರ 7 ಕೋ. ರೂ. ಮೀಸಲಿರಿಸಿದೆ ಎಂದು ಶಾಸಕ ಡಾ| ಭರತ್ ಶೆಟ್ಟಿ ಹೇಳಿದರು.
ಕರಾವಳಿ ಉತ್ಸವ ಪ್ರಯುಕ್ತ ಪಣಂಬೂರು ಬೀಚ್‌ನಲ್ಲಿ ಮೂರು ದಿನಗಳಿಂದ ಆಯೋಜಿಸಲಾದ ಬೀಚ್ ಉತ್ಸವದ ಸಮಾರೋಪ ಸಮಾರಂಭ ದಲ್ಲಿ ಕರಾವಳಿ ಗೌರವ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
ತಣ್ಣೀರುಬಾವಿ, ಸಸಿಹಿತ್ಲು ಬೀಚ್ ಅಭಿವೃದ್ಧಿಗೆ ಚಿಂತಿಸಲಾಗಿದೆ. ನಮ್ಮ ಬೀಚ್‌ಗಳಲ್ಲಿ ಅಭಿವೃದ್ಧಿಗೆ ಸ್ಥಳಾವ ಕಾಶದ ಕೊರತೆ ನಮಗೆ ಹಿನ್ನಡೆ ತಂದಿದೆ. ಈ ಎಲ್ಲ ಸಮಸ್ಯೆಗಳನ್ನು ನಿವಾರಿಸಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಸರಕಾರ ಸಮಗ್ರ ಅಭಿವೃದ್ಧಿ ಯೋಜನೆ ರೂಪಿಸಲಿದೆ ಎಂದರು.
ಮನೋಹರ್ ಪ್ರಸಾದ್‌ಗೆ ಪ್ರಶಸ್ತಿ ಪ್ರದಾನ
ಉದಯವಾಣಿ ಸಹಾಯಕ ಸಂಪಾದಕ ಮನೋಹರ್ ಪ್ರಸಾದ್ ಅವರಿಗೆ ಕರಾವಳಿ ಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮನೋಹರ ಪ್ರಸಾದ್ ಮಾತನಾಡಿ, ವೃತ್ತಿ ಜೀವನದಲ್ಲಿ ಅನೇಕ ಪ್ರಶಸ್ತಿಗಳು ಬಂದಿವೆ. ಈ ಬಾರಿ ಮಹತ್ವದ ಗೌರವಕ್ಕೆ ಜಿಲ್ಲಾಡಳಿತ ಆರಿಸಿರುವುದಕ್ಕೆ ಸಂತಸವಾಗಿದೆ ಎಂದರು.
ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಅಪರ ಜಿಲ್ಲಾಧಿಕಾರಿ ಎಂ.ಜಿ. ರೂಪಾ, ಮನಪಾ ಆಯುಕ್ತ ಅಜಿತ್ ಕುಮಾರ್ ಹೆಗ್ಡೆ ಶಾನಾಡಿ, ಮುಡಾ ಆಯುಕ್ತ ಶ್ರೀಕಾಂತ್ ರಾವ್, ಅರಣ್ಯಾಧಿಕಾರಿ ಶ್ರೀಧರ್, ಕಸಾಪ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಕಾ.ನಿ. ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಅಧಿಕಾರಿಗಳಾದ ಖಾದರ್ ಶಾ, ವೆಂಕಟೇಶ್, ಮಧು, ರಾಜೇಶ್, ನವೀನ್, ಪಣಂಬೂರು ಬೀಚ್ ಅಭಿವೃದ್ಧಿ ಸಮಿತಿಯ ಸಿಇಒ ಯತೀಶ್ ಬೈಕಂಪಾಡಿ ಮತ್ತಿತರರು ಉಪಸ್ಥಿತರಿದ್ದರು. ರಾಜೇಂದ್ರ ಕಲಾºವಿ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.