Fraud Case ಷೇರು ಟ್ರೇಡಿಂಗ್ ಹೆಸರಿನಲ್ಲಿ 74.18 ಲಕ್ಷ ರೂ. ವಂಚನೆ
Team Udayavani, Jul 5, 2024, 10:08 PM IST
ಮಂಗಳೂರು: ಷೇರು ಟ್ರೇಡಿಂಗ್‌ನಲ್ಲಿ ಹಣ ತೊಡಗಿಸಿ ವ್ಯಕ್ತಿಯೊಬ್ಬರು 74,18,952 ರೂ. ಕಳೆದುಕೊಂಡಿರುವ ಬಗ್ಗೆ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರರು ಮಾ. 15ರಂದು ಇನ್‌ಸ್ಟಾಗ್ರಾಂನಲ್ಲಿ ಷೇರು ಟ್ರೇಡಿಂಗ್ ಜಾಹೀರಾತು ನೋಡಿದ್ದಾರೆ. ಜಾಹೀರಾತಿನ ಮೇಲೆ ಕ್ಲೀಕ್ ಮಾಡಿ ನೋಡಿ, ಷೇರು ಟ್ರೇಡಿಂಗ್ ಬಗ್ಗೆ ಮೇಸೆಜ್ ಮಾಡಿದಾಗ ವಾಟ್ಸಾéಪ್‌ಗೆ ಅಪರಿಚಿತ ವ್ಯಕ್ತಿಯ ಮೊಬೈಲ್‌ನಿಂದ ಲಿಂಕ್ ಬಂದಿದೆ.
ಆ ಲಿಂಕ್ ಅನ್ನು ತೆರೆದು ನೋಡಿದಾಗ ಅದರಲ್ಲಿ ಗ್ರೂಪ್ ಕಂಡು ಬಂದಿದ್ದು, ಅವರನ್ನು ಆ ಗ್ರೂಪ್‌ಗೆ ಸೇರಿಸಿಕೊಂಡಿದ್ದಾರೆ. ಬಳಿಕ ಆನ್‌ಲೈನ್ ಮೂಲಕ ತರಬೇತಿಯನ್ನೂ ನೀಡಿದ್ದಾರೆ.
ಹೆಚ್ಚಿನ ಹಣ ತೊಡಗಿಸಿದ್ದಲ್ಲಿ ಹೆಚ್ಚು ಲಾಭಗಳಿಸಬಹುದು ಎಂದು ಹೇಳಿ ಷೇರು ಟ್ರೇಡಿಂಗ್ ಬಗ್ಗೆ ಪ್ರೇರೇಪಿಸಿದ್ದಾರೆ. ಮೊದಲಿಗೆ 10,000 ರೂ. ತೊಡಗಿಸಲು ತಿಳಿಸಿ ಬ್ಯಾಂಕ್ ಖಾತೆಯ ವಿವರವನ್ನು ಕಳುಹಿಸಿದ್ದಾರೆ. ಅದರಂತೆ ದೂರುದಾರರು ಆ ವ್ಯಕ್ತಿಯ ಬ್ಯಾಂಕ್ ಖಾತೆಗೆ 10,000 ರೂ. ಹಣವನ್ನು ಪಾವತಿಸಿದ್ದಾರೆ. ಅನಂತರ ಮಾ.15ರಿಂದ ಜು. 4ರ ವರೆಗೆ ದೂರುದಾರರು ಹಂತ ಹಂತವಾಗಿ ಅಪರಿಚಿತ ವ್ಯಕ್ತಿಯು ನೀಡಿದ ವಿವಿಧ ಬ್ಯಾಂಕ್ ಖಾತೆಗಳಿಗೆ 73,68,952 ರೂ. ಹಾಗೂ ಉಳಿದ 50,000 ರೂ. ಹಣವನ್ನು ಕಂಪೆನಿಯವರಿಗೆ ಪೋನ್ ಪೇ ಮೂಲಕ ಪಾವತಿಸಿದ್ದಾರೆ.
ಹೂಡಿಕೆ ಮಾಡಿದ ಹಣವನ್ನು ಹಿಂಪಡೆಯಲು ಪ್ರಯತ್ನಿಸಿದಾಗ ಸಾದ್ಯವಾಗದೇ ಇದ್ದುದರಿಂದ ಅನುಮಾನ ಬಂದು ತನ್ನ ಸ್ನೇಹಿತರಲ್ಲಿ ವಿಚಾರಿಸಿ ಮೋಸ ಹೋಗಿರುವ ವಿಚಾರ ಗಮನಕ್ಕೆ ಬಂದು ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA: ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ, ಅದಕ್ಕೆ ಆತ್ಮಸ್ಥೈರ್ಯ ಹೆಚ್ಚಿದೆ: ಐವನ್
ನ. 8, 9 ರಂದು ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ಅಂತರ್ ಕಾಲೇಜು ಮಟ್ಟದ ಮಹಿಳಾ ಕಬಡ್ಡಿ ಪಂದ್ಯಾಟ
Mangalore: ಲೋವರ್ ಬೆಂದೂರ್‌ವೆಲ್-ಕರಾವಳಿ ವೃತ್ತ ರಸ್ತೆ ಅವ್ಯವಸ್ಥೆ
Mudbidri: ನ.9; 15ನೇ ವರ್ಷದ ಪಣಪಿಲ ಕಂಬಳ
Bajpe ಪೇಟೆಯಲ್ಲಿ ಬಸ್ ತಂಗುದಾಣ ತೆರವು; ಬಾಕಿ ಉಳಿದ ಕಾಮಗಾರಿಯ ಆರಂಭ ಯಾವಾಗ
MUST WATCH
ಹೊಸ ಸೇರ್ಪಡೆ
WPL Auction: ಎಲ್ಲಾ ಆರು ತಂಡಗಳು ಉಳಿಸಿಕೊಂಡ ಆಟಗಾರರ ಪಟ್ಟಿ ಇಲ್ಲಿದೆ
Udupi: ಮುನಿಯಾಲ್ ಅಯುರ್ವೇದ ಕಾಲೇಜಿಗೆ ರಾಷ್ಟ್ರ ಮಟ್ಟದಲ್ಲಿ “ಎ’ ಗ್ರೇಡ್
ಜೀವನ ಪರ್ಯಂತ ವೀಲ್ ಚೇರ್‌ನಲ್ಲೇ ಇರುವ ಪುತ್ರನಿಗೆ ಅದ್ಧೂರಿಯಾಗಿ ಮದುವೆ ಮಾಡಿಸಿದ ಖ್ಯಾತ ನಟ
WPL 2025: ಆರ್ ಸಿಬಿ ಆಟಗಾರರ ರಿಟೆನ್ಶನ್ ಪಟ್ಟಿ ಬಿಡುಗಡೆ; ಪ್ರಮುಖ ಆಟಗಾರ್ತಿ ಔಟ್
Madras: ಮರಿಕೋತಿಗೆ ಚಿಕಿತ್ಸೆ ನೀಡಿದ್ದ ಪಶುವೈದ್ಯರು ಮತ್ತೆ ಭೇಟಿ ಮಾಡಬಹುದು: ಹೈಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.