ದ.ಕ.: 8-10ನೇ ತರಗತಿ ಸೆ. 17ಕ್ಕೆ ಆರಂಭ
Team Udayavani, Sep 14, 2021, 6:22 AM IST
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಸೆ. 17ರಿಂದ 8, 9 ಮತ್ತು 10ನೇ ತರಗತಿ ಹಾಗೂ ಸೆ. 20ರಿಂದ 6 ಮತ್ತು 7ನೇ ತರಗತಿಗಳನ್ನು ಆರಂಭಿಸಲು ಜಿಲ್ಲಾಡಳಿತ ತೀರ್ಮಾನಿಸಿದೆ. ಇದೇ ವೇಳೆ ಪ್ರಥಮ ಪಿಯುಸಿ ತರಗತಿಗಳು ಕೂಡ ಶೀಘ್ರ ಆರಂಭವಾಗುವ ಸಾಧ್ಯತೆಯಿದೆ.
ಜಿಲ್ಲೆಯಲ್ಲಿ ಶಾಲೆಗಳನ್ನು ತೆರೆಯುವ ಬಗ್ಗೆ ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್ ನಿಯಮ ಗಳನ್ನು ಪಾಲಿಸಿಕೊಂಡು ಶಾಲೆಗಳನ್ನು ತೆರೆಯಬೇಕು ಹಾಗೂ ಮಕ್ಕಳಿಗೆ ತೊಂದರೆಯಾಗದಂತೆ ಅಧಿಕಾರಿ ಗಳು ನೋಡಿಕೊಳ್ಳಬೇಕು. ಜಿಲ್ಲೆಯಲ್ಲಿ ಈಗಾಗಲೇ ಶೇ. 99ರಷ್ಟು ಶಾಲಾ ಶಿಕ್ಷಕರು ಮತ್ತು ಸಿಬಂದಿಗೆ ಲಸಿಕೆ ನೀಡಲಾಗಿದ್ದು, ಕೋವಿಡ್ ಪರೀಕ್ಷೆಗಳನ್ನು ಹೆಚ್ಚಾಗಿ ನಡೆಸಬೇಕು ಎಂದರು.
ಜಿಲ್ಲೆಯಲ್ಲಿ 261 ಮಕ್ಕಳು ಕೋವಿಡ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಕ್ಕಳಲ್ಲಿ ಕೋವಿಡ್ ಲಕ್ಷಣ ಕಂಡುಬಂದಲ್ಲಿ ಸೂಕ್ತ ಚಿಕಿತ್ಸೆ ನೀಡಬೇಕು ಹಾಗೂ ಪ್ರಾಥಮಿಕ ಸಂಪರ್ಕದಲ್ಲಿದ್ದವರಿಗೂ ಚಿಕಿತ್ಸೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಬೇಕು ಎಂದರು.
ವಿದ್ಯಾರ್ಥಿಗಳು ಮಾಸ್ಕ್ ಧರಿಸಲೇಬೇಕು ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವಂತೆ ಶಿಕ್ಷಕರು ಸೂಕ್ತ ಮಾಹಿತಿ ನೀಡಬೇಕು. ಜತೆಗೆ ಮಕ್ಕಳಲ್ಲಿ ಶುಲ್ಕ ಪಾವತಿಸಲು ಒತ್ತಾಯಿಸಬಾರದು. ಶಾಲೆಗಳಲ್ಲಿ ಶೌಚಾಲಯ ವ್ಯವಸ್ಥೆ, ಮೂಲಸೌಕರ್ಯಗಳನ್ನು ಒದಗಿಸಬೇಕು ಎಂದು ತಿಳಿಸಿದರು.
ಪೋಷಕರ ಅನುಮತಿ ಅಗತ್ಯ:
ಭೌತಿಕ ತರಗತಿ ಆರಂಭದ ಬಳಿಕವೂ ಆನ್‌ಲೈನ್ ತರಗತಿಗಳನ್ನು ಮುಂದು ವರಿಸಬೇಕು. ಭೌತಿಕ ತರಗತಿಗೆ ಹಾಜ ರಾಗುವ ಸಂಬಂಧ ಪೋಷಕರ ಅನು ಮತಿಯನ್ನು ಕಡ್ಡಾಯವಾಗಿ ತೆಗೆದು ಕೊಳ್ಳಬೇಕು ಎಂದರು.
ಕೇರಳದಿಂದ ಬರುವ ಮಕ್ಕಳಿಗೆ ವಿದ್ಯಾರ್ಥಿ ನಿಲಯಗಳಲ್ಲಿ ಉಳಿದು ಕೊಳ್ಳು ವಂತೆ ನೋಡಿಕೊಳ್ಳಬೇಕು. ಇಲ್ಲದಿದ್ದಲ್ಲಿ ಆನ್‌ಲೈನ್ ಮೂಲಕ ತರಗತಿಗಳನ್ನು ತೆಗೆದುಕೊಳ್ಳಬೇಕು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಎನ್. ಮಾಣಿಕ್ಯ (ಪ್ರಭಾರ), ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಲ್ಲೇಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಕಿಶೋರ್, ಪ.ಪೂ. ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಣ್ಣ, ಖಾಸಗಿ ಶಾಲಾ ಅಸೋಸಿಯೇಶನ್‌ನ ಮುಖ್ಯಸ್ಥರು, ಜಿಲ್ಲೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
1ರಿಂದ 5 ಸದ್ಯಕ್ಕಿಲ್ಲ :
1ರಿಂದ 5ನೇ ತರಗತಿ ಆರಂಭಿಸುವ ಕುರಿತು ಇನ್ನೂ ತೀರ್ಮಾನವಾಗಿಲ್ಲ
ಉಡುಪಿಯಲ್ಲಿ ಸದ್ಯವೇ ಆರಂಭ :
ಉಡುಪಿ: ಜಿಲ್ಲೆಯಾದ್ಯಂತ 1ರಿಂದ 5ನೇ ತರಗತಿ ಆರಂಭಿಸುವ ಚಿಂತನೆ ಇದ್ದು, ರಾಜ್ಯ ಸರಕಾರ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕಿದೆ. ಈಗಾಗಲೇ ಕೋವಿಡ್ ಪ್ರಕರಣಗಳು ಇಳಿಮುಖ ಆಗಿರುವುದಲ್ಲದೆ ವೀಕೆಂಡ್ ಕರ್ಫ್ಯೂವಿನಲ್ಲಿ ವಿನಾಯಿತಿ ಕಲ್ಪಿಸಿರುವುದರಿಂದ 1ರಿಂದ 5ನೇ ತರಗತಿಗಳನ್ನು ಆರಂಭಿಸಲು ಶೀಘ್ರ ಆದೇಶ ಹೊರಡಿಸುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ
Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.