ಪಿಲಿಕುಳದ 9 ವರ್ಷದ “ಓಲಿವರ್’ ಹುಲಿ ಸಾವು
Team Udayavani, Jan 5, 2022, 7:40 AM IST
ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದ 9 ವರ್ಷದ ಹುಲಿ “ಓಲಿವರ್’ ಸೋಮವಾರ ರಾತ್ರಿ ಮೃತಪಟ್ಟಿದೆ.
ಆರೋಗ್ಯವಾಗಿ ಸದೃಢವಾಗಿದ್ದ ಹುಲಿಯು ಚುರುಕಾಗಿದ್ದು ಒಮ್ಮಿಂದೊಮ್ಮೆಲೇ ಕುಸಿದು ಬಿದ್ದಿದ್ದು, ತತ್ಕ್ಷಣವೇ ಮೃಗಾಲಯದ ವೈದ್ಯಾಧಿಕಾರಿಗಳು ಚಿಕಿತ್ಸೆ ನೀಡಿದರೂ ಜೀವ ಉಳಿಸಲು ಸಾಧ್ಯವಾಗಿಲ್ಲ.
ಈ ಹುಲಿಯು ಪಿಲಿಕುಳದ “ವಿಕ್ರಮ’ ಮತ್ತು ಶಾಂಭವಿ’ಗೆ ಜನಿಸಿದ ಎರಡು ಮರಿಗಳಲ್ಲಿ ಒಂದಾಗಿದೆ. ಪಿಲಿಕುಳದಲ್ಲಿ ಪ್ರಸ್ತುತ 12 ಹುಲಿಗಳು ಇವೆ.
ಕೊರೊನಾ ಪರೀಕ್ಷೆಗೆ ತೀರ್ಮಾನ
ಮೃತಪಟ್ಟ ಹುಲಿಯ ಅಂಗಾಂಗಗಳ ಮಾದರಿಯನ್ನು ಪರೀಕ್ಷೆಗಾಗಿ IAH – VB ಬೆಂಗಳೂರು ಮತ್ತು ಉತ್ತರ ಪ್ರದೇಶದ IIಗೆ ಕಳುಹಿಸಲಾಗಿದೆ. ಕೋವಿಡ್ ಪರೀಕ್ಷೆಗಾಗಿ ಮಾದರಿಯನ್ನು ಭೋಪಾಲದ NIHSADಗೆ ಕಳುಹಿಸಲಾಗಿದೆ.
ಮೃಗಾಲಯದಲ್ಲಿ ಅನುಮಾನಾಸ್ಪದವಾಗಿ ಯಾವುದೇ ರೋಗವು ಹರಡದಂತೆ ರೋಗ ನಿರೋಧಕ ದ್ರಾವಣವನ್ನು ಪ್ರಾಣಿಗಳ ಆವರಣದ ಒಳಗೆ ಮತ್ತು ಸುತ್ತ ಮುತ್ತ ಸಿಂಪಡಿಸಲಾಗುತ್ತಿದೆ ಎಂದು ಪಿಲಿಕುಳ ಜೈವಿಕ ಉದ್ಯಾನವನದ ನಿರ್ದೇಶಕ ಎಚ್.ಜೆ. ಭಂಡಾರಿ ಉದಯವಾಣಿಗೆ ತಿಳಿಸಿದ್ದಾರೆ.
ಇದನ್ನೂ ಓದಿ:ದೇಶದಲ್ಲಿ ಹೆಚ್ಚಲಿದೆ ಆನ್ಲೈನ್ ಖರೀದಿ : 2025ರ ವೇಳೆಗೆ ಶೇ.17ಕ್ಕೆ ಏರಿಕೆ ಸಾಧ್ಯತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.