ಎ. 16- 19 ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
Team Udayavani, Apr 15, 2018, 6:00 AM IST
ಮಂಗಳೂರು: ನಿಟ್ಟೆ ವಿಶ್ವ ವಿದ್ಯಾನಿಲಯದ ವತಿಯಿಂದ ಎ. 16 ರಿಂದ 19ರ ವರೆಗೆ ನಗರದ ಭಾರತ್ ಮಾಲ್‌ನ ಭಾರತ್ ಸಿನೆಮಾಸ್‌ನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆಯೋಜಿಸಲಾಗಿದೆ ಎಂದು ಚಲನಚಿತ್ರೋತ್ಸವ ಸಂಯೋಜಕ ಪ್ರೊ|ರವಿರಾಜ್ ಕಿಣಿ ಪತ್ರಿಕಾಗೋಷ್ಠಿ ಯಲ್ಲಿ ತಿಳಿಸಿದರು. ಚಿತ್ರೋತ್ಸವ ದಲ್ಲಿ ವಿವಿಧ ಭಾಷೆಗಳ 60 ಚಲನಚಿತ್ರಗಳು ಪ್ರದರ್ಶನಗೊಳ್ಳಲಿವೆ. ಪ್ರದರ್ಶನ ವೀಕ್ಷಣೆಗೆ ಸಾರ್ವಜನಿಕರಿಗೆ ಉಚಿತ ಅವಕಾಶ ಕಲ್ಪಿಸಲಾಗಿದೆ ಎಂದರು.
ಚಲನ ಚಿತ್ರೋತ್ಸವದಲ್ಲಿ 40 ಮಂದಿ ಸಿನೆಮಾ ನಿರ್ಮಾಪಕರು ಪಾಲ್ಗೊಳ್ಳಲಿದ್ದಾರೆ. ಹಿಂದಿ, ಕನ್ನಡ, ಮಲೆಯಾಳ, ಬಂಗಾಲಿ, ಗುಜರಾತಿ, ತಮಿಳ್, ಫ್ರೆಂಚ್, ಚೈನೀಸ್ ಮೊದಲಾದ ಭಾಷಾ ಸಿನೆಮಾಗಳನ್ನು ಪ್ರದರ್ಶನ ಮಾಡ ಲಾಗುವುದು. ಮಕ್ಕಳ ಸಿನೆಮಾವನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಹಲವು ಮಕ್ಕಳ ಚಿತ್ರಗಳನ್ನೂ ಪ್ರದರ್ಶನಕ್ಕೆ ಆಯ್ಕೆ ಮಾಡಲಾಗಿದೆ. ಚಿತ್ರ ನಿರ್ಮಾ ಪಕರ ಜತೆ ಪ್ರೇಕ್ಷಕರ ಸಂವಾದಕ್ಕೂ ಅವಕಾಶ ಕಲ್ಪಿಸಲಾಗಿದೆ ಎಂದರು.
ವಿದ್ಯಾರ್ಥಿ ಸಂಯೋಜಕಿ ಮೈತ್ರೇಯಿ ದೇಶಪಾಂಡೆ ಮಾತನಾಡಿ, ಭಾರತ್ ಸಿನೆಮಾಸ್‌ನಲ್ಲಿ 16ರಂದು ಬೆಳಗ್ಗೆ 9.15ಕ್ಕೆ ಚಿತ್ರೋತ್ಸವ ಉದ್ಘಾಟನೆಗೊಳ್ಳ ಲಿದೆ. ಚಿತ್ರ ನಿರ್ಮಾಪಕ ಮತ್ತು ನಾಟಕ ಕಾರ ಸದಾನಂದ ಸುವರ್ಣ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ನಿಟ್ಟೆ ವಿಶ್ವವಿದ್ಯಾಲಯದ ವೈಸ್ ಚಾನ್ಸಲರ್ ಡಾ| ಸತೀಶ್ ಕುಮಾರ್ ಭಂಡಾರಿ ಉಪಸ್ಥಿತರಿರುವರು ಎಂದರು.
ದೀಕ್ಷಿತಾ ಪೈ, ವೆಂಕಟೇಶ್ ಪತ್ರಿಕಾಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.