ವಿಶೇಷ ಪ್ರಾರ್ಥನೆ, ಶಿಲುಬೆಯ ಆರಾಧನೆ

ಕರಾವಳಿಯ ಎಲ್ಲೆಡೆ ಭಕ್ತಿಪೂರ್ವಕ ಶುಭ ಶುಕ್ರವಾರ ಆಚರಣೆ

Team Udayavani, Apr 20, 2019, 6:00 AM IST

1904MLR2–MILAGRES

ಮಂಗಳೂರು/ಉಡುಪಿ:ಯೇಸು ಕ್ರಿಸ್ತರು ಶಿಲುಬೆಯಲ್ಲಿ ಮರಣಿಸಿದ ದಿನದ ಸ್ಮರಣಾರ್ಥ ಕರಾವಳಿ ಮತ್ತು ಒಳನಾಡಿನಾದ್ಯಂತ ಕ್ರೈಸ್ತರು ಎ. 19ರಂದು ಶುಭ ಶುಕ್ರವಾರವನ್ನು ಆಚರಿಸಿದರು. ಆ ಪ್ರಯುಕ್ತ ಚರ್ಚ್‌ಗಳಲ್ಲಿ ದಿನವಿಡೀ ವಿಶೇಷ ಪ್ರಾರ್ಥನೆ, ಶಿಲುಬೆಯ ಆರಾಧನೆ ಮತ್ತು ಇತರ ಕಾರ್ಯಕ್ರಮಗಳು ನಡೆದವು.

ಯೇಸು ಕ್ರಿಸ್ತರಿಗೆ ಶಿಲುಬೆಯ ಮರಣ ಶಿಕ್ಷೆ ವಿಧಿಸಿದಲ್ಲಿಂದ ಮೊದಲ್ಗೊಂಡು ಅವರು ಶಿಲುಬೆಯಲ್ಲಿ ಮರಣವನ್ನಪ್ಪಿ ಅವರ ಶರೀರವನ್ನು ಸಮಾಧಿ ಮಾಡುವಲ್ಲಿ ವರೆಗಿನ 14 ಪ್ರಮುಖ ಘಟನಾವಳಿಗಳಿಗೆ ಸಂಬಂಧಿಸಿದ ‘ಶಿಲುಬೆಯ ಹಾದಿ ‘ (ವೇ ಆಫ್‌ ದಿ ಕ್ರಾಸ್‌) ಆಚರಣೆಯನ್ನು ಚರ್ಚ್‌ ಮತ್ತು ಚರ್ಚ್‌ ಆವರಣದಲ್ಲಿ ನಡೆಸುವ ಮೂಲಕ ಯೇಸು ಕ್ರಿಸ್ತರು ಅನುಭವಿಸಿದ ಯಾತನೆಯನ್ನು ಸ್ಮರಿಸಿದರು. ಶುಭ ಶುಕ್ರವಾರದ ದಿನ ಚರ್ಚ್‌ಗಳಲ್ಲಿ ಘಂಟೆಗಳ ದನಿ ಇರುವುದಿಲ್ಲ; ಬಲಿ ಪೂಜೆಯ ಸಂಭ್ರಮವೂ ಇಲ್ಲ. ಮೌನ ವಾತಾವರಣದಲ್ಲಿ ಪ್ರಾರ್ಥನೆ ಸಲ್ಲಿಸುವುದು ದಿನದ ವೈಶಿಷ್ಟ.

ಚರ್ಚ್‌ಗಳಲ್ಲಿ ಶುಭ ಶುಕ್ರವಾರ ನಡೆದ ಪ್ರಾರ್ಥನೆ, ಧ್ಯಾನ, ಶಿಲುಬೆಯ ಆರಾಧನೆ ಕಾರ್ಯಕ್ರಮಗಳಲ್ಲಿ ಕ್ರೈಸ್ತರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಬಿಷಪ್‌ ನೇತೃತ್ವ
ಮಂಗಳೂರಿನ ಬಿಷಪ್‌ ರೆ| ಡಾ| ಪೀಟರ್‌ ಪಾವ್ಲ್ ಸಲ್ಡಾನ್ಹಾ ಅವರು ಕೊಡಿಯಾಲ್ಬೈಲ್ನ ಬಿಷಪ್ಸ್‌ ಹೌಸ್‌ ಚಾಪೆಲ್ನಲ್ಲಿ ಮಧ್ಯಾಹ್ನ ನಡೆದ ಶಿಲುಬೆಯ ಹಾದಿ ಮತ್ತು ಸಂಜೆ ನಡೆದ ಪ್ರಾರ್ಥನ ಕಾರ್ಯಕ್ರಮಗಳ ನೇತೃತ್ವ ವಹಿಸಿದ್ದರು. ಶಿಲುಬೆಯ ಹಾದಿ ಕಾರ್ಯಕ್ರಮದಲ್ಲಿ ಧರ್ಮ ಪ್ರಾಂತದ ಪ್ರಧಾನ ಗುರು ಮೊ| ಮ್ಯಾಕ್ಸಿಂ ಎಲ್. ನೊರೋನ್ಹಾ, ಸಾರ್ವಜನಿಕ ಸಂಪರ್ಕ ಅಧಿಕಾರಿ ಫಾ| ವಿಕ್ಟರ್‌ ವಿಜಯ್‌ ಲೋಬೊ ಮತ್ತು ಇತರ ಗುರುಗಳು ಉಪಸ್ಥಿತರಿದ್ದರು.

ಶಿಲುಬೆಯ ಹಾದಿ ಮನನ ಮಾಡುವ ಸಂದರ್ಭದಲ್ಲಿ ಸಂಕಷ್ಟಗಳಲ್ಲಿರುವ ಜನರಿಗಾಗಿ ಮತ್ತು ಲೋಕ ಕಲ್ಯಾಣಕ್ಕಾಗಿ ವಿಶೇಷ ಪ್ರಾರ್ಥಿಸಲಾಯಿತು.

ಉಡುಪಿ ಜಿಲ್ಲೆಯಲ್ಲಿ ಶುಭ ಶುಕ್ರವಾರ ಆಚರಣೆ

ಉಡುಪಿ: ಜಿಲ್ಲೆಯಾದ್ಯಂತ ಉಪವಾಸ ಧ್ಯಾನ ಮತ್ತು ಪ್ರಾರ್ಥನೆಯೊಂದಿಗೆ ಶುಭ ಶುಕ್ರವಾರವನ್ನು ಆಚರಿಸಲಾಯಿತು. ಜಿಲ್ಲೆಯ ಎಲ್ಲ ಚರ್ಚುಗಳಲ್ಲೂ ಬೆಳಗ್ಗಿನಿಂದ ಪ್ರಾರ್ಥನೆ, ಧ್ಯಾನ, ಯೇಸುವಿನ ಶಿಲುಬೆಯ ಹಾದಿಯ ವಾಚನ ಜರುಗಿತು. ಮಿಲಾಗ್ರಿಸ್‌ ಕ್ಯಾಥೆಡ್ರಲ್ನಲ್ಲಿ ಬಿಷಪ್‌ ರೈ| ರೆ| ಡಾ| ಜೆರಾಲ್ಡ್ ಐಸಾಕ್‌ ಲೋಬೊ ಪ್ರಾರ್ಥನ ವಿಧಿಯನ್ನು ನೆರವೇರಿಸಿದರು. ಉಡುಪಿ ಜಿಲ್ಲೆಯ ಹಲವು ಚರ್ಚುಗಳಲ್ಲಿ ಯೇಸು ಕ್ರಿಸ್ತರ ಬಂಧನ, ಶಿಲುಬೆಯ ಮೇಲೆ ಮರಣವನ್ನಪ್ಪುವ ತನಕದ ಘಟನೆಗಳನ್ನು ನಟನೆಯ ಮೂಲಕ ಪ್ರಸ್ತುತಪಡಿಸಲಾಯಿತು. ಎಲ್ಲ ಚರ್ಚುಗಳಲ್ಲಿ ಧರ್ಮಗುರುಗಳು ರಕ್ತವರ್ಣದ ಪೂಜಾ ಬಟ್ಟೆಯನ್ನು ಧರಿಸಿ ಯೇಸು ಕ್ರಿಸ್ತನ ಕೊನೆಯ ಗಳಿಗೆಗಳ ವತ್ತಾಂತ ಓದಿದರು. ಬಳಿಕ ಶಿಲುಬೆಯನ್ನು ಮೆರವಣಿಗೆಯಲ್ಲಿ ತಂದು ಭಕ್ತರು ಮುತ್ತಿಟ್ಟು ತಮ್ಮ 40 ದಿನಗಳ ತ್ಯಾಗದ ಉಳಿಕೆಯ ಹಣವನ್ನು ಬಡ ಬಗ್ಗರಿಗಾಗಿ ನೀಡಿದರು.

ಈಸ್ಟರ್‌ ಹಬ್ಬದ ಸಂದೇಶ

ಮಂಗಳೂರು: ಯೇಸುಕ್ರಿಸ್ತರು ದೇವ ಪುತ್ರರು. ಅವರು ನಮ್ಮಂತೆಯೇ ಇದ್ದುಕೊಂಡು, ಸಂಕಟಗಳನ್ನು ಅನುಭವಿಸಿದರು. ಆದರೆ ಪಾಪವನ್ನು ಮಾತ್ರ ಮಾಡಲಿಲ್ಲ ಎಂದು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್‌ ರೈ| ಡಾ| ಪೀಟರ್‌ ಪಾವ್ಲ್ ಸಲ್ದಾನ್ಹಾ ಈಸ್ಟರ್‌ ಹಬ್ಬದ ಸಂದೇಶದಲ್ಲಿ ತಿಳಿಸಿದ್ದಾರೆ. ದೇವರು ನೀಡಿದ ಪುನರುಜ್ಜೀವನದ ಆಶ್ವಾಸನೆ ಹೇಗೆ ಪವಿತ್ರ ಗ್ರಂಥದಲ್ಲಿ ಲಿಖೀತವಾಗಿದೆಯೋ ಅದೇರೀತಿ ವಸಂತ ಋತುವಿನಲ್ಲಿ ಉದುರುವ ಪ್ರತಿಯೊಂದು ಎಲೆಯಲ್ಲೂ ಸಾಕ್ಷಾತ್ಕರಿಸಲ್ಪಟ್ಟಂತೆ ತೋರುತ್ತದೆ. ಉದುರುವ ಎಲೆ ಮುಂದಿನ ಚಿಗುರಿನ ಸೂಚನೆ. ಪುನರುಜ್ಜೀವನದ ದ್ಯೋತಕವಾದ ಈಸ್ಟರ್‌ ಹಬ್ಬ ಪ್ರತಿಯೊಬ್ಬರ ಪುನರುಜ್ಜೀವನಕ್ಕೂ ನಾಂದಿಯಾಗಿದೆ ಎಂದಿದ್ದಾರೆ. ಆತ್ಮಸಾಕ್ಷಿ ವಂಚಿಸುವ ತಪ್ಪಿಗಿಂತ, ಮನಸ್ಸನ್ನು ನಿರಾಳಗೊಳಿಸುವ ನೈಜತೆಯ ಸತ್ಯವು ಮಿಗಿಲಾದ್ದು ಎಂಬುದನ್ನು ದೃಢಪಡಿಸಲು ಯೇಸು ನಮಗೆ ನೀಡಿದ ನಂಬುಗೆ ಮತ್ತು ಭರವಸೆಯ ವಿಜಯೋತ್ಸವವೇ ಈಸ್ಟರ್‌ ಎಂದಿದ್ದಾರೆ.

ಟಾಪ್ ನ್ಯೂಸ್

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.