Mangaluru ಹಾಸ್ಟೆಲ್ ಸಿಗದಿದ್ದರೂ ಛಲ ಬಿಡದ ತಾಯಿ, ಮಗಳು
ಮಗಳ ಓದಿಗಾಗಿ ನಿತ್ಯ 160 ಕಿ.ಮೀ. ಪ್ರಯಾಣಿಸುವ ತಾಯಿ! ಕಡಬದ ವಿದ್ಯಾರ್ಥಿನಿ ಮತ್ತು ಆಕೆಯ ತಾಯಿಯ ಕಥೆ ಇದು
Team Udayavani, Jun 25, 2024, 6:55 AM IST
ಮಂಗಳೂರು: ಮಗಳಿಗೆ ಮಂಗಳೂರಿನ ಕಾಲೇಜಿನಲ್ಲಿ ಓದುವಾಸೆ. ಅದಕ್ಕೆ ತಾಯಿಯ ಪೂರಕ ಸ್ಪಂದನೆ. ಆದರೆ ಮಗಳಿಗೆ ಹಾಸ್ಟೆಲ್‌ನಲ್ಲಿ ಪ್ರವೇಶ ಸಿಕ್ಕಿಲ್ಲ, ನಗರದಲ್ಲಿ ವಾಸ್ತವ್ಯ ವ್ಯವಸ್ಥೆ ಇಲ್ಲ. ಆದರೂ ಛಲ ಬಿಡದ ತಾಯಿ, ಮಗಳ ಜತೆಗೆ ತಮ್ಮ ಹಳ್ಳಿಯಿಂದ ನಗರಕ್ಕೆ ಪ್ರತಿದಿನ 160 ಕಿ.ಮೀ.ಗೂ ಅಧಿಕ ದೂರ ಕ್ರಮಿಸುತ್ತಾರೆ. ಮಗಳು ತರಗತಿಗೆ ಹೋದರೆ, ತಾಯಿ ಕಾದು ಕುಳಿತುಕೊಳ್ಳುತ್ತಾರೆ. ತರಗತಿ ಮುಗಿಸಿ ಜತೆಯಾಗಿ ಮನೆಗೆ ಮರಳುತ್ತಾರೆ!
ಇದು ಶಿಕ್ಷಣಕ್ಕೆ ಹೆಸರುವಾಸಿಯಾದ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ವಿದ್ಯಾರ್ಥಿನಿ ಮತ್ತು ಆಕೆಯ ತಾಯಿಯ ಛಲದ ಕಥೆ.
ಮಂಗಳೂರಿನಿಂದ ಸುಮಾರು 80 ಕಿ.ಮೀ. ದೂರದಲ್ಲಿರುವ ಕಡಬದ ನಿವಾಸಿಯಾಗಿರುವ ಈ ಮಹಿಳೆಯ ಪುತ್ರಿ ಕಡಬದಲ್ಲಿ ಎಸೆಸೆಲ್ಸಿ ಮುಗಿಸಿದ್ದಾರೆ. ಪುತ್ರಿ ಪಿಯುಸಿಗೆ ಬಲ್ಮಠದ ಸರಕಾರಿ ಕಾಲೇಜೊಂದರ ಕಲಾವಿಭಾಗಕ್ಕೆ ಸೇರಿದ್ದಾಳೆ. ಇಲ್ಲಿ ಗುಣಮಟ್ಟದ ಶಿಕ್ಷಣದ ಜತೆಗೆ ಕೆಲವು ಪೂರಕ ತರಬೇತಿಗಳನ್ನೂ ನೀಡುತ್ತಾರೆ, ಕ್ಯಾಂಪಸ್ ಆಯ್ಕೆಯೂ ಇದೆ ಎನ್ನುವ ಕಾರಣಕ್ಕೆ ಇಲ್ಲಿಗೆ ದೂರದೂರುಗಳಿಂದ ವಿದ್ಯಾರ್ಥಿನಿಯರು ಬರುತ್ತಿದ್ದಾರೆ. ಈ ಅಮ್ಮ-ಮಗಳು ಹಾಸ್ಟೆಲ್‌ಗಾಗಿ ನಡೆಸಿದ ಪ್ರಯತ್ನ ಫಲ ಕೊಟ್ಟಿಲ್ಲ. ಹಾಸ್ಟೆಲ್ ಸಿಗುವ ವರೆಗೆ ಪ್ರತಿದಿನ ಬಂದು ಹೋಗಲು ನಿರ್ಧರಿಸಿದ್ದಾರೆ.
ವೆನ್ಲಾಕ್ ಪರಿಸರವೇ ಆಶ್ರಯ
ತಾಯಿ ಮತ್ತು ಮಗಳು ಕಡಬದಿಂದ ಬೆಳಗ್ಗೆ 6 ಗಂಟೆಯ ಬಸ್ ಏರಿ ಮಂಗಳೂರಿಗೆ ಬರುತ್ತಾರೆ. ಮಗಳನ್ನು ಕಾಲೇಜಿಗೆ ಬಿಟ್ಟು ತಾಯಿ ನಗರದ ವೆನ್ಲಾಕ್ ಆಸ್ಪತ್ರೆ ಪರಿಸರದಲ್ಲಿ ಉಳಿದುಕೊಳ್ಳುತ್ತಾರೆ. ಅಪರಾಹ್ನ 2.30ರ ಸುಮಾರಿಗೆ ಮಗಳ ಕಾಲೇಜಿನ ಬಳಿಯಿರುವ ಬಸ್ ನಿಲ್ದಾಣಕ್ಕೆ ಬರುತ್ತಾರೆ. 3.40ಕ್ಕೆ ತರಗತಿ ಮುಗಿಯುತ್ತದೆ. 4 ಗಂಟೆಯ ಬಳಿಕ ಬಸ್ಸಿನಲ್ಲಿ ಮನೆಗೆ ಪ್ರಯಾಣ!
ಹಾಸ್ಟೆಲ್ ಸಿಕ್ಕಿಲ್ಲ
ನಾನು ಬೀಡಿ ಕಟ್ಟುತ್ತಿದ್ದೆ. ಶಸ್ತ್ರಚಿಕಿತ್ಸೆ ಕೂಡ ಆಗಿತ್ತು. ಈಗ ಮಗಳ ಜತೆ ಮಂಗಳೂರಿಗೆ ಬಂದು ಹೋಗುತ್ತೇನೆ. ಬೀಡಿ ಕಟ್ಟಲು ಸಮಯ ಸಿಗುವುದಿಲ್ಲ. ಪತಿ ಕೂಲಿ ಕೆಲಸ ಮಾಡುತ್ತಾರೆ. ಮಗಳ ಆಸೆಯಂತೆ ನಗರದ ಕಾಲೇಜಿಗೆ ಸೇರಿಸಿದ್ದೇವೆ. ಆದರೆ ಹಾಸ್ಟೆಲ್ ಸಿಗದೆ ಸಮಸ್ಯೆಯಾಗಿದೆ. ಒಬ್ಬಳೇ ಬಂದು ಹೋಗುತ್ತೇನೆ ಎನ್ನುತ್ತಾಳೆ. ಆದರೆ ನನಗೆ ಮನಸ್ಸು ಒಪ್ಪುವುದಿಲ್ಲ. ಅದಕ್ಕಾಗಿ ಅವಳ ಜತೆಗೆ ನಾನು ಕೂಡ ಬರುತ್ತೇನೆ. ನಗರಕ್ಕೆ ಬಂದು ಆಕೆಯ ತರಗತಿ ಮುಗಿಯುವ ವರೆಗೆ ಆಸ್ಪತ್ರೆಯ ಆವರಣದಲ್ಲಿ ಸಮಯ ಕಳೆಯುತ್ತೇನೆ. ಹಾಸ್ಟೆಲ್‌ನಲ್ಲಿ ವಿಚಾರಿಸಿದರೆ ಈಗ ಸೇರಿಸುವುದಿಲ್ಲ. ಸರ್ವರ್ ಸಮಸ್ಯೆ ಇದೆ. ದಾಖಲಾತಿ ಆರಂಭವಾಗಿಲ್ಲ ಎಂದಿದ್ದಾರೆ.
-ವಿದ್ಯಾರ್ಥಿನಿಯ ತಾಯಿ
ಸರ್ವರ್ ಸಮಸ್ಯೆ;
ಶೀಘ್ರ ಪರಿಹಾರ
ಪರಿಶಿಷ್ಟ ಜಾತಿಯವರ ಹಾಸ್ಟೆಲ್ ಪ್ರವೇಶ ಪ್ರಕ್ರಿಯೆಗೆ ಸರ್ವರ್ ಸಮಸ್ಯೆ ತೊಡಕಾಗಿದೆ. ಇದು ಇಡೀ ರಾಜ್ಯದಲ್ಲಿರುವ ಸಮಸ್ಯೆ. ಈ ಬಗ್ಗೆ ಸೋಮವಾರ ಸಭೆ ನಡೆಸಲಾಗಿದ್ದು, ಆನ್‌ಲೈನ್‌ನಲ್ಲಿ ದಾಖಲಾತಿ ಸಾಧ್ಯವಾಗದಿದ್ದರೆ ಮ್ಯಾನುವಲ್ ಅರ್ಜಿ ಸ್ವೀಕರಿಸಿ ದಾಖಲಾತಿ ಮಾಡಿಕೊಳ್ಳಲು ಆಯುಕ್ತರಿಂದ ಸೂಚನೆ ಬಂದಿದೆ. ಅದರಂತೆ ಕ್ರಮ ತೆಗೆದುಕೊಳ್ಳುತ್ತೇವೆ. ಸರ್ವರ್ ಸಮಸ್ಯೆಯೂ ಶೀಘ್ರ ಬಗೆಹರಿಯುವ ನಿರೀಕ್ಷೆ ಇದೆ.
-ಪಾರ್ವತಿ, ವ್ಯವಸ್ಥಾಪಕರು, ಸಮಾಜ ಕಲ್ಯಾಣ ಇಲಾಖೆ
-ಸಂತೋಷ್ ಬೊಳ್ಳೆಟ್ಟು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.