ಬದಲಾದ ನದಿ ಪಾತ್ರಕ್ಕೆ ಶಾಶ್ವತ ತಡೆಗೋಡೆ
Team Udayavani, Oct 25, 2019, 5:18 AM IST
ಬೆಳ್ತಂಗಡಿ: ನೈಸರ್ಗಿಕ ವಿಕೋಪದಿಂದ ನದಿ ಪಾತ್ರ ಬದಲಾಗಿದ್ದು, ಹಲವು ವರ್ಷಗಳಿಂದ ಬೆಳೆದ ಕೃಷಿ ಪ್ರದೇಶ ಪ್ರವಾಹಕ್ಕೆ ತುತ್ತಾಗಿದೆ. ನದಿ ಅಂಚಿನಲ್ಲಿ ಶಾಶ್ವತ ತಡೆಗೋಡೆ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಅವರು ಬೆಳ್ತಂಗಡಿ ತಾಲೂಕಿನ ಅಂತರ ಮತ್ತು ಅರಣೆಪಾದೆಗೆ ಗುರುವಾರ ಭೇಟಿ ನೀಡಿ ಸಂತ್ರಸ್ತರ ಮೊರೆ ಆಲಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಪ್ರವಾಹದಿಂದ ವಿಶೇಷವಾಗಿ ವೆಂಟೆಡ್ ಡ್ಯಾಂಗಳಿಗೆ ಹಾನಿಯಾಗಿದೆ. ಸರಕಾರ ನದಿ ಪಾತ್ರ ಕೊಚ್ಚಿಹೋಗಿರುವಲ್ಲಿ ಹೆಕ್ಟೇರ್‌ಗೆ 10 ಸಾವಿರ ಇದ್ದಲ್ಲಿ ಹೆಚ್ಚುವರಿ 38 ಸಾವಿರ ರೂ. ಪರಿಹಾರ ಘೋಷಿಸಿದೆ. ಶಾಶ್ವತ ಪರಿಹಾರವಾಗಿ ನದಿಯ ಎರಡೂ ಬದಿ ಶಾಶ್ವತ ತಡೆಗೋಡೆ ಮತ್ತು ಸೇತುವೆ ಮರು ನಿರ್ಮಾಣಕ್ಕೆ ಸರಕಾರ ಶೀಘ್ರ ಕ್ರಮ ಕೈಗೊಳ್ಳಲಿದೆ. ನದಿ ಬದಿ 3 ಕಿ.ಮೀ. ತಡೆಗೋಡೆ ನಿರ್ಮಿಸಲು ಶಾಸಕರು ಮನವಿ ಮಾಡಿದ್ದು, ಶೀಘ್ರ ಮಂಜೂರು ಮಾಡಿಸುವುದಾಗಿ ಭರವಸೆ ನೀಡಿದರು.
ಇದೇವೇಳೆ ಸಚಿವರು ಗ್ರಾಮಸ್ಥರ ಬೇಡಿಕೆಗಳನ್ನು ಆಲಿಸಿದರು. ಅರಣೆಪಾದೆಗೆ ಹೊಸ ಸೇತುವೆಯನ್ನು ಮಂಜೂರು ಮಾಡುವ ಕುರಿತು ಮುಖ್ಯಮಂತ್ರಿ ಅವರೊಂದಿಗೆ ಮಾತುಕತೆ ನಡೆಸಿ ಮುಂದಿನ ಬಜೆಟ್‌ನಲ್ಲಿ ಅನುದಾನ ಒದಗಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜಾ, ಚಾರ್ಮಾಡಿ ಗ್ರಾ.ಪಂ. ಅಧ್ಯಕ್ಷೆ ಶಶಿಕಲಾ, ತಾ.ಪಂ. ಸದಸ್ಯರಾದ ಕೊರಗಪ್ಪ, ಶಶಿಧರ ಕಲ್ಮಂಜ, ತಾಲೂಕು ಬಿಜೆಪಿ ಅಧ್ಯಕ್ಷ ಜಯಂತ ಕೋಟ್ಯಾನ್, ತಾಲೂಕು ಬಿಜೆಪಿ ಮಾಜಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಬಿಜೆಪಿ ತಾಲೂಕು ಕಾರ್ಯದರ್ಶಿ ಸೀತಾರಾಮ ಬಿ.ಎಸ್., ಐಜಿ ಮಿಥುನ್ ಚಕ್ರವರ್ತಿ, ಎಸ್ಪಿ ಲಕ್ಷ್ಮೀಪ್ರಸಾದ್, ತಹಶೀಲ್ದಾರ್ ಗಣಪತಿ ಶಾಸಿŒ, ಸರ್ಕಲ್ ಇನ್‌ಸ್ಪೆಕ್ಟರ್‌ಸಂದೇಶ್ ಪಿ.ಜಿ., ಧರ್ಮಸ್ಥಳ ಎಸ್. ಐ. ಅವಿನಾಶ್ ಉಪಸ್ಥಿತರಿದ್ದರು.
ಮಾದಕ ವಸ್ತು ನಿಯಂತ್ರಣಕ್ಕೆ ಮಂಗಳೂರು, ಮಣಿಪಾಲದಲ್ಲಿ ಹೊಸ ಠಾಣೆ
ಮಾದಕ ದ್ರವ್ಯ ನಿಯಂತ್ರಣಕ್ಕಾಗಿ ಕಠಿನ ಕ್ರಮ ಕೈಗೊಳ್ಳವುಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಮಾದಕದ್ರವ್ಯಗಳ ಮಾರಾಟವನ್ನು ನಿಯಂತ್ರಿಸುವ ಗುರಿಯೊಂದಿಗೆ ಉಡುಪಿ ಮಣಿಪಾಲ ಹಾಗೂ ಮಂಗಳೂರಿಗೆ ಹೊಸ ಠಾಣೆಗಳನ್ನು ಆರಂಭಿಸಲಾಗುವುದು. ಕರಾವಳಿ ಕಾವಲು ಪಡೆಯನ್ನು ಬಲಿಷ್ಠಗೊಳಿಸಲು ಬೋಟ್‌ಗಳು ಮತ್ತು ಶಸ್ತ್ರಾಸ್ತ್ರಗಳನ್ನು ಒದಗಿಸಲಾಗುವುದು ಎಂದು ಬೊಮ್ಮಾಯಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.