ಮೂಡಬಿದಿರೆ, ಬಜಪೆ, ಬೆಳ್ತಂಗಡಿ ಸರಣಿ ದರೋಡೆ ಪ್ರಕರಣ: 9 ಮಂದಿ ಆರೋಪಿಗಳು ಪೊಲೀಸರ ಬಲೆಗೆ
Team Udayavani, Apr 3, 2021, 1:34 PM IST
ಮಂಗಳೂರು: ಇತ್ತೀಚಿನ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ, ಬಜಪೆ, ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಡೆದ ಸರಣಿ ದರೋಡೆ ಪ್ರಕರಣಗಳಿಗೆ ಸಂಬಂಧಿಸಿದಂತೆ 9 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.
ಅಬ್ದುಲ್ ರವೂಫ್ (24 ವ), ರಾಮಮೂರ್ತಿ (23 ವ) ಅಶ್ರಫ್ ಪೆರಾಡಿ (27 ವ), ಸಂತೋಷ್ (24 ವ) ನವೀದ್ ( 36 ವ), ರಮಾನಂದ (48 ವ), ಸುಮನ್ (24 ವ), ಸಿದ್ದಿಕ್ (27 ವ) ಮತ್ತು ಅಲಿಕೋಯ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.
ಇದನ್ನೂ ಓದಿ:10ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ನೊಂದ ಬಾಲಕಿ ಆತ್ಮಹತ್ಯೆ!
ಮಾರ್ಚ್ 27ರಿಂದ 31ರವರೆಗೆ ಮೂಡಬಿದಿರೆಯಲ್ಲಿ ನಾಲ್ಕು, ಮೂಲ್ಕಿಯಲ್ಲಿ ಒಂದು ಮತ್ತು ಬಜಪೆಯಲ್ಲಿ ಎರಡು ಪ್ರಕರಣಗಳು ನಡೆದಿದ್ದವು. ಈ ಹಿಂದೆ ದಕ್ಷಿಣ ಕನ್ನಡ, ಉಡುಪಿ, ಹಾಸನ, ಬೆಂಗಳೂರು ಜಿಲ್ಲೆಗಳಲ್ಲೂ ನಡೆದ ದರೋಡೆ ಪ್ರಕರಣಗಳಲ್ಲಿ ಈ ಆರೋಪಿಗಳು ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.
ಇದನ್ನೂ ಓದಿ: ‘ಕಬ್ಜ’ ಶೂಟಿಂಗ್ ವೇಳೆ ಅವಘಡ : ಉಪ್ಪಿ ತಲೆಗೆ ರಾಡ್ ಏಟು
ಆರೋಪಿಗಳಿಂದ ಎರಡು ತಲವಾರು, ಒಂದು ಏರ್ ಗನ್, ಒಂದು ಕಬ್ಬಿಣದ ರಾಡು, ಒಂದು ಕಬ್ಬಿಣದ ಲಿವರ್, ಒಂದು ಉದ್ದನೆಯ ಚಾಕು, ಒಂದು ಪಾಕೆಟ್ ಖಾರದ ಪುಡಿ, ಮರದ ದೊಣ್ಣೆಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.