ಗ್ರಾಮೀಣ ಪ್ರದೇಶದಲ್ಲೂ ಕೊಳಚೆ ನೀರು ಶುದ್ಧೀಕರಣ ಘಟಕ ಕಡ್ಡಾಯ

ದ.ಕ. ಜಿ.ಪಂ. ಸಾಮಾನ್ಯ ಸಭೆಯಲ್ಲಿ ಸಿಇಒ ಡಾ| ಆರ್‌. ಸೆಲ್ವಮಣಿ

Team Udayavani, Nov 27, 2019, 5:08 AM IST

as-47

ಸಾಂದರ್ಭಿಕ ಚಿತ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿಯೂ ಪ್ರತೀ ಅಪಾರ್ಟ್‌ಮೆಂಟ್‌, ಇತರ ಕಟ್ಟಡಗಳಿಗೆ ಕೊಳಚೆ ನೀರು ಶುದ್ಧೀಕರಣ ಘಟಕ (ಎಸ್‌ಟಿಪಿ) ಕಡ್ಡಾಯಗೊಳಿಸಲಾಗಿದೆ. ಘಟಕ ನಿರ್ಮಿಸದಿದ್ದರೆ ಕಟ್ಟಡಕ್ಕೆ ಅನುಮತಿ ನೀಡುವುದಿಲ್ಲ ಎಂದು ಜಿ.ಪಂ. ಸಿಇಒ ಡಾ| ಆರ್‌. ಸೆಲ್ವಮಣಿ ತಿಳಿಸಿದ್ದಾರೆ.

ಮಂಗಳವಾರ ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅಧ್ಯಕ್ಷತೆ ಯಲ್ಲಿ ಜರಗಿದ ಜಿ.ಪಂ.ನ 18ನೇ ಸಾಮಾನ್ಯ ಸಭೆಯಲ್ಲಿ ಮಮತಾ ಡಿ.ಎಸ್‌. ಗಟ್ಟಿ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಒಳಚರಂಡಿ ವ್ಯವಸ್ಥೆ ಇಲ್ಲ ಎಂದು ದೂರಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಇಒ, ಎಸ್‌ಟಿಪಿ ಕಡ್ಡಾಯಗೊಳಿಸಲಾಗಿದೆ. ಸದ್ಯ 2 ಗ್ರಾ.ಪಂ.ಗಳು ಎಸ್‌ಟಿಪಿ ರಹಿತ ಕಟ್ಟಡಗಳಿಗೆ ಪರವಾನಿಗೆ ತಡೆಹಿಡಿದಿವೆ. ಪರವಾನಿಗೆ ನವೀಕರಣ ಕೂಡ ಮಾಡುತ್ತಿಲ್ಲ ಎಂದರು.

ಶೌಚಾಲಯ ಬಾಕಿ
ಸದಸ್ಯ ಕೊರಗಪ್ಪ ನಾಯ್ಕ, ಜಿಲ್ಲೆ ಯಲ್ಲಿ ಶೌಚಾಲಯ ನಿರ್ಮಾಣ ಪೂರ್ಣಪ್ರಮಾಣದಲ್ಲಿ ನಡೆದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಬಾಕಿ ಇರುವ 235 ವೈಯಕ್ತಿಕ ಶೌಚಾಲಯಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಇಒ ಹೇಳಿದರು.

ಕುಡಿಯುವ ನೀರಿನ ಘಟಕಕ್ಕೆ ಡಿಸೆಂಬರ್‌ ಗಡುವು
ವಿವಿಧೆಡೆ ಕುಡಿಯುವ ನೀರಿನ ಘಟಕಗಳ ದುರಸ್ತಿ, ಗ್ರಾ.ಪಂ.ಗಳಿಗೆ ವರ್ಗಾವಣೆ ನಡೆದಿಲ್ಲ ಎಂದು ಎಂ.ಎಸ್‌. ಮಹಮ್ಮದ್‌, ಕೆ.ಪಿ. ವರ್ಗೀಸ್‌ ಅಸಮಾಧಾನ ವ್ಯಕ್ತ ಪಡಿಸಿದರು. ಬಾಕಿ ಉಳಿದಿರುವ ಘಟಕಗಳನ್ನು ಡಿಸೆಂಬರ್‌ ಒಳಗೆ ಪೂರ್ಣಗೊಳಿ ಸಬೇಕು. ಇಲ್ಲದಿದ್ದರೆ ಸರಕಾರಕ್ಕೆ ವರದಿ
ಸಲ್ಲಿಸುತ್ತೇನೆ ಎಂದು ಸಿಇಒ ಇಲಾಖಾಧಿ ಕಾರಿಗಳಿಗೆ ಎಚ್ಚರಿಕೆ ನೀಡಿದರು.

ಶಾಲೆಗಳಿಗೆ ಆರ್‌ಟಿಸಿ ಸಿಗುತ್ತಿಲ್ಲ
ಶಾಲೆಗಳಿಗೆ ದಾನರೂಪದಲ್ಲಿ ದೊರೆತ ಜಾಗಕ್ಕೆ ಶುಲ್ಕ ಪಾವತಿಸಲು ಸಾಧ್ಯವಾ ಗದ ಕಾರಣ ಆರ್‌ಟಿಸಿ ಮಾಡಲು ಸಾಧ್ಯವಾಗುತ್ತಿಲ್ಲ. ಅಧಿಕಾರಿಗಳಿಗೆ ಇಚ್ಛಾಶಕ್ತಿ ಇಲ್ಲದಿರುವುದರಿಂದ ಶಾಲೆಗಳಿಗೆ ಕುಮ್ಕಿ ಜಾಗದ ಆರ್‌ಟಿಸಿ ಕೂಡ ದೊರೆಯುತ್ತಿಲ್ಲ. ಡೀಮ್ಡ್ ಫಾರೆಸ್ಟ್‌ನಿಂದಲೂ ತೊಂದರೆಯಾಗಿದೆ. ಬಡವರು ಮನೆ ಕಟ್ಟುವುದಕ್ಕೂ ಅಸಾಧ್ಯವಾಗಿದೆ. ಸಮಸ್ಯೆ ಪರಿಹರಿಸಲು ಜಂಟಿ ಸರ್ವೆ ನಡೆಸಬೇಕು ಎಂದು ಸದಸ್ಯರು ಹೇಳಿದರು.

ದಾನಪತ್ರ ಉಚಿತವಾಗಿ ಮಾಡಿ ಕೊಡುವ ಬಗ್ಗೆ ಸರಕಾರಕ್ಕೆ ಪತ್ರ ಬರೆಯಲಾಗುವುದು. ಕುಮ್ಕಿ ಕುರಿತು ಜಿಲ್ಲಾಧಿಕಾರಿ ಜತೆ ಚರ್ಚಿಸಲಾಗುವುದು ಎಂದು ಸಿಇಒ ತಿಳಿಸಿದರು. ಹರೀಶ್‌ ಕಂಜಿಪಿಲಿ, ಧರಣೇಂದ್ರ ಕುಮಾರ್‌, ಸರ್ವೋತ್ತಮ ಗೌಡ, ಅನಿತಾ ಹೇಮನಾಥ ಶೆಟ್ಟಿ, ಯು.ಪಿ. ಇಬ್ರಾಹಿಂ, ಎಸ್‌.ಎನ್‌. ಮನ್ಮಥ, ಧನಲಕ್ಷ್ಮೀ ಮೊದಲಾದವರು ವಿವಿಧ ವಿಚಾರಗಳ ಚರ್ಚೆಯಲ್ಲಿ ಪಾಲ್ಗೊಂಡರು.

ಮನೆ ನಿರ್ಮಾಣಕ್ಕೆ 3.60 ಕೋ.ರೂ.
ಭಾರೀ ಮಳೆಯಿಂದ ಜಿಲ್ಲೆಯಲ್ಲಿ 629 ಮನೆಗಳಿಗೆ ಹಾನಿಯಾಗಿದೆ. 571 ಮನೆಗಳ ನಿರ್ಮಾಣಕ್ಕೆ ಗ್ರಾ.ಪಂ.ನಿಂದ ಜಿಪಿಎಸ್‌ ಆಗಿದೆ. 24 ಪೂರ್ಣಗೊಂಡಿವೆ. 22 ಮನೆಗಳ ತಳಪಾಯ ಆಗಿದೆ. ಮನೆ ನಿರ್ಮಾಣಕ್ಕಾಗಿ ಇದುವರೆಗೆ ಬಂಟ್ವಾಳ ತಾಲೂಕಿಗೆ 60 ಲ.ರೂ. ಬೆಳ್ತಂಗಡಿಗೆ 2.1 ಕೋ.ರೂ., ಮಂಗ ಳೂರಿಗೆ 36.25 ಲ.ರೂ., ಪುತ್ತೂರಿಗೆ 30.25 ಲ.ರೂ. ಮತ್ತು ಸುಳ್ಯಕ್ಕೆ 32.5 ಲ.ರೂ. ಬಿಡುಗಡೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ರೇಷನ್‌ಗೆ ಬೆರಳಚ್ಚು ಸಮಸ್ಯೆ
ನ್ಯಾಯಬೆಲೆ ಅಂಗಡಿಗಳು ರವಿ ವಾರವೂ ತೆರೆದಿರಬೇಕು ಎಂಬ ಸೂಚನೆ ಇದ್ದರೂ ಕೆಲವೆಡೆ ತೆರೆದಿರುವುದಿಲ್ಲ. ಹಲವೆಡೆ ಸರ್ವರ್‌ ಸಮಸ್ಯೆಯಿಂದಾಗಿ ಥಂಬ್‌ ನೀಡುವುದು ಸಾಧ್ಯವಾಗುತ್ತಿಲ್ಲ ಎಂಬ ದೂರು ವ್ಯಕ್ತವಾಯಿತು. ಮಂಗಳವಾರ ರಜೆ ಮಾಡಿ ರವಿವಾರ ತೆರೆದಿರಲು ಸೂಚಿಸಲಾಗಿದೆ. ಸೂಚನೆ ಪಾಲಿಸದ ಸಹಕಾರಿ ಸಂಘಗಳ ಪಡಿತರ ಮಾರಾಟ ಅನುಮತಿ ತಡೆದು ಬೇರೆ ಖಾಸಗಿ ಸಂಸ್ಥೆ ಅಥವಾ ಗ್ರಾ.ಪಂ.ಗಳಿಗೆ ನೀಡುವ ಬಗ್ಗೆ ನಿರ್ಧರಿ ಸಲಾಗುವುದು’ ಎಂದು ಸಂಬಂಧಿತ ಇಲಾಖಾಧಿಕಾರಿಗಳು ತಿಳಿಸಿದರು.

ಟಾಪ್ ನ್ಯೂಸ್

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

3

Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ

KMC

Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ 

2

Puttur: ಚೆನ್ನಾಗಿ ಮಳೆ ಬಂದರೂ ಕುಸಿದ ಅಂತರ್ಜಲ ಮಟ್ಟ

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.